Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

Facebook
Twitter
Telegram
WhatsApp

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಇಷ್ಟೊತ್ತಿಗಾಗಲೇ ಮಳೆಯ ಜೋರು ದರ್ಶನವಾಗಬೇಕಾಗಿತ್ತು. ಆದರೆ ಸರಿಯಾಗಿ ಮಳೆ ಬರುತ್ತಿಲ್ಲ. ಇನ್ನೆರಡು ದಿನದಲ್ಲಿ ಮಳೆ ಬರುತ್ತೆ ಎಂದು ಹವಮಾನ ಇಲಾಖೆ ಸೂಚನೆ ಕೊಟ್ಟಿದ್ದರು. ಆದರೆ ಅದಕ್ಕೂ ಮುನ್ನವೇ ಮಳೆ ಬಂದಿದೆ. ನಿನ್ನೆ ರಾತ್ರಿ ಬೆಂಗಳೂರಿನ ಹಲವೆಡೆ ಕೊಂಚ ಮಳೆರಾಯ ತಂಪೆರೆದು ಹೋಗಿದ್ದಾನೆ. ಹಾಗೇ ಮಳೆ ಮುಂದುವರೆದರೆ ಈ ಧಗೆ ಕಡಿಮೆಯಾಗುವುದು ಗ್ಯಾರಂಟಿ. ಇಲ್ಲವಾದರೆ ಇನ್ನಷ್ಟು ಜಾಸ್ತಿಯಾಗುತ್ತದೆ.

ಹವಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ನೀಡಿರುವ ಮಾಹಿತಿಯ ಪ್ರಕಾರ ಕರಾವಳು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳಲಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರವಾದಂತ ಮಳೆಯಾಗಲಿದೆ. ಆದರೆ ಬೆಂಗಳೂರಿನಲ್ಲಿ ಗುಡಿಗು ಮಿಂಚಿನ ಜೊತೆಗೆ ಅಲ್ಲಲ್ಲಿ ಚದುರಿದ ಮಳೆಯಾಗಲಿದೆ. ಮುಂದಿನ ನಾಲ್ಕು ದಿನಗಳ ಮಳೆಯಾಗಲಿದೆ.

ಚಿತ್ರದುರ್ಗ, ದಾವಣಗೆರೆ, ಕಿಪ್ಪಳ, ಬಾಗಲಕೋಟೆ, ಬಿಜಾಪುರ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಬಿಸಿಗಾಳಿ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಗಾಳಿಯಿಂದಾಗಿ ಹಲವು ಆರೋಗ್ಯ ಸಮಸ್ಯೆ ಕೂಡ ಕಾಣಿಸಿಕೊಳ್ಳುತ್ತವೆ. ಹೀಗಾಗಿ ಈ ಜಿಲ್ಲೆಯ ಜನ ಎಚ್ಚರದಿಂದ ಇರಬೇಕಾಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಾದಾಮಿ ತಿನ್ನಲು ಸರಿಯಾದ ಸಮಯ ಯಾವುದು ಗೊತ್ತಾ..?

ಸುದ್ದಿಒನ್ : ಆರೋಗ್ಯವನ್ನು ಕಾಪಾಡಿಕೊಳ್ಳಲು ಡ್ರೈ ಫ್ರೂಟ್ಸ್ ತಿನ್ನಲು ವೈದ್ಯಕೀಯ ತಜ್ಞರು ಸಲಹೆ ನೀಡುತ್ತಾರೆ. ಬಾದಾಮಿ ಅಂತಹ ಒಂದು ಸೂಪರ್ ಫುಡ್. ನಿಯಮಿತವಾದ ಬಾದಾಮಿ ಸೇವನೆಯು ದೇಹಕ್ಕೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಸರಿಯಾದ

ಈ ರಾಶಿಯವರಿಗೆ ಇಷ್ಟಪಟ್ಟವರ ಜೊತೆ ಮದುವೆ ಫಿಕ್ಸ್ ಆಯಿತು

ಈ ರಾಶಿಯವರಿಗೆ ಇಷ್ಟಪಟ್ಟವರ ಜೊತೆ ಮದುವೆ ಫಿಕ್ಸ್ ಆಯಿತು, ಈ ರಾಶಿಯವರಿಗೆ ವಿದೇಶಿ ಯೋಗ, ಈ ರಾಶಿಗಳಿಗೆ ಸಂತಾನ ಭಾಗ್ಯ, ಭಾನುವಾರರಾಶಿ ಭವಿಷ್ಯ -ಅಕ್ಟೋಬರ್-6,2024 ಸೂರ್ಯೋದಯ: 06:11, ಸೂರ್ಯಾಸ್ತ : 05:57 ಶಾಲಿವಾಹನ ಶಕೆ

ಬಸವತತ್ವ ಮಹಾವಿದ್ಯಾಲಯ ಹಾಗೂ ವಚನ ಕಮ್ಮಟ ಶ್ರೀ ಮಠದ ಎರಡು ಕಣ್ಣುಗಳು : ಡಾ. ಬಸವರಮಾನಂದ ಸ್ವಾಮಿಗಳು

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕøತಿ ಉತ್ಸವ-2024 ರ ಕಾರ್ಯಕ್ರಮದಲ್ಲಿ ವಚನ ಕಮ್ಮಟ ಪರೀಕ್ಷೆಯ ರ‌್ಯಾಂಕ್ ವಿಜೇತರರಿಗೆ ಬಹುಮಾನ

error: Content is protected !!