ವಿಜಯಪುರ : ಇಲ್ಲಿನ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯ ಹಿನ್ನೆಲೆಯಲ್ಲಿ ಶ್ರೀ ಗಳನ್ನು ನೋಡಲು ಭಕ್ತರ ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ.
ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸುತ್ತೂರು ಶ್ರೀಗಳು ಮಾಹಿತಿ ನೀಡಿದ್ದು, ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಶ್ರೀ ಗಳು ಆರೋಗ್ಯವಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.
ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸೇರಿದಂತೆ ಸಚಿವರು ಶ್ರೀಗಳ ಆರೋಗ್ಯ ವಿಚಾರಿಸಿ ಮಾಹಿತಿ ಪಡೆದಿದ್ದಾರೆ.
ಸ್ವಾಮೀಜಿಯವರನ್ನು ನೋಡಲು ಬೇರೆ ಬೇರೆ ರಾಜ್ಯಗಳಿಂದ, ಜಿಲ್ಲೆಗಳಿಂದ ಶ್ರೀಗಳ ದರ್ಶನಕ್ಕೆ ಅಪಾರ ಪ್ರಮಾಣದ ಜನರು ಹರಿದು ಬರುತ್ತಿದ್ದಾರೆ. ಜೊತೆಗೆ ಹಾಲಿ, ಮಾಜಿ ಶಾಸಕರು ಹಾಗೂ ಸಚಿವರುಗಳು ಸಹ ಶ್ರೀಗಳನ್ನು ಭೇಟಿ ಮಾಡಿ ಅವರ ಆರೋಗ್ಯ ಕುಶಲೋಪಾರಿ ವಿಚಾರಿಸಿದ್ದಾರೆ.