ಸುದ್ದಿಒನ್, ಚಿತ್ರದುರ್ಗ, (ಅ.05) : ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಗೂಳಿಹಟ್ಟಿ ಡಿ.ಶೇಖರ್ ಮತಾಂತರದ ವಿಷಯ ಪ್ರಸ್ತಾಪ ಮಾಡಿದ ಬೆನ್ನಲ್ಲೇ ಹೊಸದುರ್ಗ ತಾಲೂಕಿನ ಬಲ್ಲಾಳಸಮುದ್ರ ಗ್ರಾಮದಲ್ಲಿ ಮತಾಂತರ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಗ್ರಾಮದಲ್ಲಿ ಕ್ರಿಶ್ಚಿಯನ್ ಮಿಷನರಿಗಳು ಗ್ರಾಮಸ್ಥರನ್ನು ಬಲವಂತವಾಗಿ ಮತಾಂತರ ಮಾಡಿ ದೇಶದ್ರೋಹ ಮಾಡುತ್ತಿದ್ದಾರೆ ಎಂದು ಯುವಕರು, ಕ್ರೈಸ್ತ ಪ್ರಾರ್ಥನಾ ಮಂದಿರದ ಬಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕ್ರೈಸ್ತ ಪ್ರಾರ್ಥನಾ ಮಂದಿರದ ಬಳಿ ಇದೇ ವಿಚಾರವಾಗಿ ಎರಡು ಗುಂಪಿನ ನಡುವೆ ಗಲಾಟೆ ನಡೆದಿದ್ದು, ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶಾಸಕ ಗೂಳಿಹಟ್ಟಿ ಶೇಖರ್, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸುಡುಗಾಡು ಸಿದ್ಧ ಸಮುದಾಯದ ಜನರನ್ನು ಮತಾಂತರ ಮಾಡಲಾಗುತ್ತಿದೆ. ಕ್ರಿಶ್ಚಿಯನ್ ಧರ್ಮಕ್ಕೆ 40-50 ಕುಟುಂಬಗಳನ್ನು ಮತಾಂತರ ಮಾಡಲಾಗಿದೆ. ಜನರಿಂದ ಈ ಬಗ್ಗೆ ದೂರು ಕೂಡ ಬಂದಿದೆ ಎಂದು ತಿಳಿಸಿದ್ದಾರೆ.