ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಜನತಾ ದರ್ಶನದ ಮೂಲಕ ಜನರ ಕಷ್ಟಗಳನ್ನು ಆಲಿಸಲಾಗುತ್ತದೆ. ಇತ್ತಿಚೆಗಷ್ಟೇ ರಾಜ್ಯಾದ್ಯಂತ ಏಕದಿನದಲ್ಲಿಯೇ ಜನತಾ ದರ್ಶನ ಏರ್ಪಡಿಸಲಾಗಿತ್ತು. ಇದೀಗ ಮತ್ತೆ ಜನತಾ ದರ್ಶನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ನವೆಂಬರ್ 27 ರಂದು ಜನತಾ ದರ್ಶನ ಮಾಡಲಾಗುತ್ತಿದೆ. ಅದಕ್ಕೆ ಒಂದಷ್ಟು ದಾಖಲೆಗಳನ್ನು ನೀವೂ ತೆಗೆದುಕೊಂಡು ಹೋಗಬೇಕಾಗುತ್ತದೆ.
ನವೆಂಬರ್ 27ರ ಸೋಮವಾರದಂದು ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಒಂದು ದಿನದ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜನತಾ ದರ್ಶನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ತರಲು ಕೋರಲಾಗಿದೆ ಎಂದು ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸಾಮಾಜಿಕ ಮಾಧ್ಯಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.
ಜನತಾ ದರ್ಶನದ ಬಗ್ಗೆ ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿಗಳು ಈಗಾಗಲೇ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಪತ್ರ ಬರೆದಿದ್ದಾರೆ. ಜನತಾ ದರ್ಶನದ ವೇಳೆಯೇ ಸಿಎಂ ಜಿಲ್ಲಾ, ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸಮಸ್ಯೆ ನಿವಾರಣೆಗೆ ಸೂಚನೆ ನೀಡುವ ಸಾಧ್ಯತೆ ಇದೆ.