Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಎನ್‌. ಮದನ್‌ ಶೇಕಡ 99.12 ಪರ್ಸಂಟೈಲ್‌ನೊಂದಿಗೆ ರಾಷ್ಟ್ರಮಟ್ಟದಲ್ಲಿ 339ನೇ ರ್ಯಾಂಕ್‌ ಪಡೆದು,  ಹೊಸ ದಾಖಲೆಯೊಂದಿಗೆ ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 

ಒಟ್ಟು 52 ವಿದ್ಯಾರ್ಥಿಗಳ ಪೈಕಿ  43 ವಿದ್ಯಾರ್ಥಿಗಳು 90ಕ್ಕಿಂತ ಹೆಚ್ಚಿನ ಪರ್ಸಂಟೈಲ್‌ ಪಡೆದು ಚಿತ್ರದುರ್ಗ ಜಿಲ್ಲೆಯ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ದಾಖಲಿಸಿದ್ದಾರೆ.

ಕ್ರಮವಾಗಿ ಕಾಲೇಜಿನ ವಿದ್ಯಾರ್ಥಿಗಳಾದ ಸೃಜನ್‌ ಪಿ ಟಿ, ರೋಹಿಣಿ ಜೆ,  629, 739ನೇ ರ್ಯಾಂಕ್‌ ಪಡೆದು ರಾಷ್ಟ್ರಮಟ್ಟದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ.  ಕಾಲೇಜಿನ 43 ವಿದ್ಯಾರ್ಥಿಗಳು 90 ಕ್ಕಿಂತ ಹೆಚ್ಚಿನ ಪರ್ಸಂಟೈಲ್ ಗಳಿಸಿರುವುದು “ಎಸ್‌ ಆರ್‌ ಎಸ್‌ʼʼ ನ ಗುಣಮಟ್ಟದ ತರಬೇತಿಗೆ ಸಾಕ್ಷಿಯಾಗಿದೆ.  ಒಟ್ಟು 78 ವಿದ್ಯಾರ್ಥಿಗಳು “ಜೆಇಇ ಮೈನ್ಸ್‌” ಎರಡನೇ ಸ್ಲಾಟ್‌ನಲ್ಲಿ ಅತ್ಯುತ್ತಮ ಅಂಕಗಳಿಸಿ ʼಜಿಇಇ ಅಡ್ವಾನ್ಸ್ಡ್‌ ಗೆ ಅರ್ಹತೆ ಗಳಿಸಿದ್ದಾರೆ.


SRS ಪಿಯು ಕಾಲೇಜು ಜೆಇಇ ಮೈನ್ಸ್‌ ಮತ್ತು ಅಡ್ವಾನ್ಸ್ಡ್ ವಿದ್ಯಾರ್ಥಿಗಳಿಗೆ ವಿಶೇಷ ಸ್ಟಾರ್‌ ಬ್ಯಾಚ್‌ಗಳನ್ನು ಹೊಂದಿದ್ದು, ಜೆಇಇ ಪರಿಣಿತ ಉಪನ್ಯಾಸಕರ ಮಾರ್ಗದರ್ಶನದಲ್ಲಿ ಸಮಯೋಚಿತ ತರಬೇತಿ ನೀಡಲಾಗುತ್ತಿದೆ.  ಉತ್ತರ ಭಾರತ ಹಾಗೂ ಹೈದರಾಬಾದ್‌ನಿಂದ ವಿಷಯ ತಜ್ಞರು ಬರುತ್ತಿದ್ದು, ಕಳೆದ ವರ್ಷದಿಂದ SRS ನಲ್ಲಿಯೇ ಪೂರ್ಣಪ್ರಮಾಣದಲ್ಲಿ ಲಭ್ಯವಿದ್ದಾರೆ.

ಈ ಭಾಗದ ಜೆಇಇ ಅಕಾಂಕ್ಷಿಗಳಿಗೆ ಇದು ಆಶಾದಾಯಕ ಬೆಳವಣಿಗೆಯಾಗಿದ್ದು, SRS ಸರ್ವರೀತಿಯಲ್ಲಿ ಗುಣಾತ್ಮಕ ತರಬೇತಿಗೆ ತಯಾರಾಗಿರುವುದು ವಿಶೇಷ.

ಇದೇ ಸಂದರ್ಭದಲ್ಲಿ 2022-23ನೇ ಸಾಲಿನ ಫಲಿತಾಂಶವು ಅತ್ಯುತ್ತಮವಾಗಿದ್ದು SRS ಪಿಯು ಕಾಲೇಜಿನ ಒಟ್ಟು 8 ಜನ ವಿದ್ಯಾರ್ಥಿಗಳು IIT, IIIT, ಮತ್ತು NIT ಗಳಿಗೆ ಹಾಗೂ ಪ್ರತಿಷ್ಟಿತ AIIMS ಗೆ ಇಬ್ಬರೂ JIPMER ಗೆ ಒಬ್ಬ ವಿದ್ಯಾರ್ಥಿ ಮೆಡಿಕಲ್‌ಗೆ ಆಯ್ಕೆಯಾದುದ್ದನ್ನು ಸ್ಮರಿಸಬಹುದು ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.

ಈ ಬಾರಿಯ ಫಲಿತಾಂಶ ಕಳೆದ ಬಾರಿಯ ಫಲಿತಾಂಶಕ್ಕಿಂತಲೂ ಅತ್ಯುತ್ತುಮವಾಗಿದ್ದು, ಹೆಚ್ಚಿನ ವಿದ್ಯಾರ್ಥಿಗಳು IIT ಗಳಿಗೆ ಆಯ್ಕೆಯಾಗುವುದರಲ್ಲಿ ಅನುಮಾನವಿಲ್ಲ. ವರ್ಷದಿಂದ ವರ್ಷಕ್ಕೆ ತರಬೇತಿಯ ಗುಣಮಟ್ಟ ಉತ್ತಮಗೊಳಿಸಿಕೊಳ್ಳುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ.  ಬಯಲು ಸೀಮೆ ಚಿತ್ರದುರ್ಗದಂತಹ ಪ್ರದೇಶದಲ್ಲಿ  ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ನಮಗೂ ಹೆಮ್ಮೆಯ ವಿಷಯವಾಗಿದೆ ಎಂದು           ಸಂಸ್ಥೆಯ ಛೇರ್ಮನ್‌ ಬಿ ಎ ಲಿಂಗಾರೆಡ್ಡಿಯವರು ತಿಳಿಸಿದರು.

ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಬಿ ಎ ಲಿಂಗಾರೆಡ್ಡಿ, ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಉಪಾಧ್ಯಕ್ಷರಾದ ಬಿ ಎಲ್‌ ಅಮೋಘ್‌, ಆಡಳಿತಾಧಿಕಾರಿಗಳಾದ ಡಾ. ರವಿ ಟಿ ಎಸ್‌, ಪ್ರಾಂಶುಪಾಲರಾದ ಶ್ರೀ ಗಂಗಾಧರ್‌ ಈ. ಉಪಪ್ರಾಂಶುಪಾಲರಾದ ಶ್ರೀ ಮನೋಹರ ಬಿ ಹಾಗೂ ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ : ವಕೀಲರಿಗೆ ಸನ್ಮಾನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಬಾಪೂಜಿ ಸಮೂಹ ಸಂಸ್ಥೆಗಳು, ರಂಗಸೌರಭ ಕಲಾ ಸಂಘ ಹಾಗೂ ಶ್ರೀ ಶಿವಕುಮಾರ ಕಲಾ ಸಂಘ ಇವರ ಸಂಯುಕ್ತ

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸೋಲಿಗೆ ಆ ಐವರು ಕಾರಣವೇ ?

ಸುದ್ದಿಒನ್ | ಮಹಾರಾಷ್ಟ್ರ ಚುನಾವಣೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಕೇವಲ 16 ಸ್ಥಾನಗಳನ್ನು ಗೆದ್ದಿದೆ. ಭಾರೀ ಸೋಲಿನ ನಂತರ ಪಕ್ಷವು ಇವಿಎಂಗಳಿಂದ ನಮಗೆ ಸೋಲಾಗಿದೆ ಎಂದು ದೂರಿದೆ. ಇವಿಎಂಗಳ ದತ್ತಾಂಶದಿಂದಾಗಿ ಚುನಾವಣೆ

RCB ಸೇರ್ತಾರೆ ಅಂದುಕೊಂಡ್ರೆ ಕನ್ನಡಿಗ ರಾಹುಲ್ ಡೆಲ್ಲಿ ಪಾಲು..!

RCB ಕ್ರೇಜ್ ಎಷ್ಟಿದೆ‌ ಎಂಬುದನ್ನು ಬಿಡಿಸಿ ಹೇಳುವ ಅಗತ್ಯವಿಲ್ಲ. ಐಪಿಎಲ್ ಶುರುವಾಗುವ ಮುನ್ನವೇ ಆರ್ಸಿಬಿ ಫೀವರ್ ಅಭಿಮಾನಿಗಳಲ್ಲಿ ಜೋರಾಗಿ ಬಿಡುತ್ತದೆ. ಆರ್ಸಿಬಿ ಅಂದ್ರೆ ಅಷ್ಟು ಪ್ರೀತಿ ಕನ್ನಡಿಗರಿಗೆ. ಈಗ ಆರ್ಸಿಬಿ ಫ್ಯಾನ್ಸ್ ಖುಷಿ ಪಡೋ

error: Content is protected !!