Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್.ಟಿ.ಮೀಸಲಾತಿ ಹೋರಾಟಕ್ಕೆ ಪಕ್ಷಭೇದ ಮರೆತು ಎಲ್ಲಾ ಕಾಡುಗೊಲ್ಲರು ಕೈಜೋಡಿಸಿ : ರಾಜ್ಯಾಧ್ಯಕ್ಷ ರಾಜಣ್ಣ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಮೊ : 78998 64552

ಚಿತ್ರದುರ್ಗ, (ನ.08): ಮುಂದಿನ ಪೀಳಿಗೆಗೆ ಅನುಕೂಲ ಮಾಡುವುದಕ್ಕಾಗಿಯಾದರೂ ಎಸ್.ಟಿ.ಮೀಸಲಾತಿ ಹೋರಾಟಕ್ಕೆ ಪಕ್ಷಭೇದ ಮರೆತು ಎಲ್ಲಾ ಕಾಡುಗೊಲ್ಲರು ಕೈಜೋಡಿಸುವಂತೆ ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ರಾಜಣ್ಣ ಮನವಿ ಮಾಡಿದರು.

ಕರ್ನಾಟಕ ರಾಜ್ಯ ಕಾಡುಗೊಲ್ಲರ ಜಿಲ್ಲಾ ಶಾಖೆ ವತಿಯಿಂದ ಎಸ್.ಟಿ.ಮೀಸಲಾತಿ ಹೋರಾಟದ ಬಗ್ಗೆ ಸ್ಟೇಡಿಯಂ ಸಮೀಪವಿರುವ ಕ್ರೀಡಾಭವನದಲ್ಲಿ ಮಂಗಳವಾರ ನಡೆದ ರಾಜ್ಯ ಮಟ್ಟದ ಚಿಂತನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಳೆದ ಹದಿನೈದು ಇಪ್ಪತ್ತು ವರ್ಷಗಳಿಂದ ಎಸ್.ಟಿ.ಮೀಸಲಾತಿಗಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಅನೇಕ ಹೊಸ ಹೊಸ ಸಂಘಟನೆಗಳು ಹುಟ್ಟಿಕೊಂಡಿವೆ. ಅದರಂತೆ ಎಲ್ಲಾ ಸಂಘಟನೆಗಳ ಉದ್ದೇಶ ಒಂದೆ ಆಗಿದೆ. ಗೌಡ ಪೂಜಾರಿಗಳ ನೇತೃತ್ವದಲ್ಲಿ ಹೋರಾಟ ಮಾಡೋಣ. ನಮ್ಮ ಸಮಾಜದ ಸ್ವಾಮೀಜಿಗಳಿಗೂ ಈ ಹೋರಾಟಕ್ಕೂ ಸಂಬಂಧವಿಲ್ಲ. ಅವರ ಆಚಾರ ವಿಚಾರವೇ ಬೇರೆ, ನಮ್ಮದೇ ಬೇರೆ. ಹಾಗಾಗಿ ಸಮಾಜ ಒಡೆಯುವ ಪ್ರಶ್ನೆಯೇ ಇಲ್ಲ. ಅನೇಕ ಗೊಲ್ಲರಹಟ್ಟಿಗಳಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅಲ್ಲಿಗೆ ಹೋಗಿ ಸಮಸ್ಯೆಗಳನ್ನು ತಿಳಿದುಕೊಳ್ಳಬೇಕು.

ಎಲ್ಲಾ ಪಕ್ಷ, ಸಂಘಟನೆಯಲ್ಲಿರುವ ಕಾಡುಗೊಲ್ಲರು ಒಟ್ಟಿಗೆ ಸೇರಿಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿ ಎಸ್.ಟಿ.ಮೀಸಲಾತಿಯನ್ನು ಪಡೆಯಬೇಕು. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆತು ಹೋರಾಟಕ್ಕೆ ಬೆಂಬಲಿಸಿ ಎಂದು ಕರೆ ನೀಡಿದರು.

ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದ ರಾಜ್ಯ ಗೌರವಾಧ್ಯಕ್ಷ ಮೀಸೆ ಮಹಲಿಂಗಪ್ಪ ಮಾತನಾಡಿ ಕಾಡುಗೊಲ್ಲ ಜನಾಂಗವನ್ನು ಎಸ್.ಟಿ.ಗೆ ಸೇರ್ಪಡೆಗೊಳಿಸುವಂತೆ ಅನೇಕ ವರ್ಷಗಳಿಂದಲೂ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಕಳೆದ ಉಪಚುನಾವಣೆಯಲ್ಲಿ ಎಸ್.ಟಿ.ಮೀಸಲಾತಿಯನ್ನು ನೀಡುವುದಾಗಿ ಭರವಸೆ ನೀಡಿದ ಬಿಜೆಪಿ. ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ. ಕಾಡುಗೊಲ್ಲರ ಅಭಿವೃದ್ದಿ ಮಂಡಳಿಯನ್ನು ರಚಿಸುತ್ತಿಲ್ಲ. ಶೇ.90 ರಷ್ಟು ಕಾಡುಗೊಲ್ಲರು ರಾಜ್ಯದಲ್ಲಿ ಬಿಜೆಪಿ.ಪರವಾಗಿದ್ದಾರೆ. ಈಗಲೂ ಎಸ್.ಟಿ.ಮೀಸಲಾತಿ ನೀಡದಿದ್ದರೆ ಕಾಂಗ್ರೆಸ್‍ಗೆ ಕಲಿಸಿದಂತೆ ಬಿಜೆಪಿ.ಗೂ ತಕ್ಕಪಾಠ ಕಲಿಸಬೇಕಾಗುತ್ತದೆಂದು ಎಚ್ಚರಿಸಿದರು.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ.ಸರ್ಕಾರ ಅಧಿಕಾರದಲ್ಲಿದೆ. ಹಾಗಾಗಿ ಕಾಡುಗೊಲ್ಲರಿಗೆ ಎಸ್.ಟಿ.ಮೀಸಲಾತಿ ನೀಡುವುದು ದೊಡ್ಡ ವಿಚಾರವೇನಲ್ಲ. ನಮ್ಮ ಬೇಡಿಕೆಯನ್ನು ಈಡೇರಿಸಿದರೆ ಮುಂದಿನ ಚುನಾವಣೆಯಲ್ಲಿ ಇಡಿ ಕಾಡುಗೊಲ್ಲ ಸಮಾಜ ಬಿಜೆಪಿ.ಪರವಾಗಿರುತ್ತದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರುಗಳಾದ ರವಿಕುಮಾರ್, ಶ್ರೀಮತಿ ಗೀತ ನಂದಿನಿಗೌಡ, ಸಿದ್ದೇಶ್‍ಯಾದವ್, ಹೊಳಲ್ಕೆರೆಯ ಚಿತ್ತಯ್ಯ, ಇನ್ನು ಮೊದಲಾದವರು ಚಿಂತನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಿವಮೂರ್ತಿ ಸೇರಿದಂತೆ ನಾಡಿನ ನಾನಾ ಭಾಗಗಳಿಂದ ಕಾಡುಗೊಲ್ಲರು ಚಿಂತನಾ ಸಭೆಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

error: Content is protected !!