Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂತರಾಜ್ ವರದಿ ಸಂಪುಟದಲ್ಲಿ ಚರ್ಚಿಸಿ ಜಾರಿಗೆ ತರಲಿ : ಬಿ.ಟಿ ಜಗದೀಶ್

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಡಿ. 13 : ಚಿತ್ರದುರ್ಗದಲ್ಲಿ ನಡೆದ ಶೋಷಿತರ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇನ್ನೂ ಆರು ತಿಂಗಳಲ್ಲಿ ಕಾಂತರಾಜ್ ವರದಿಯ ಅಂಗೀಕಾರ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಇಲ್ಲಿವರೆಗೂ ಯಾವುದೇ ಅಂಗೀಕಾರ ಆಗಿಲ್ಲ. ಕೆಲವರು ಈ ವರದಿಯನ್ನು ಅವೈಜ್ಞಾನಿಕ ಅಂತ ಗುರುತರವಾದ ಆಪಾದನೆ ಮಾಡುತ್ತಿದ್ದಾರೆ. ಈ ವರದಿಯನ್ನ ಸಂಪುಟದಲ್ಲಿ ಮಂಡಿಸಿ ಚರ್ಚಿಸಿ ಸಾರ್ವಜನಿಕ ಆಹವಾಲಗಳನ್ನು ಸ್ವೀಕರಿಸಿ ಜಾರಿಗೆ ತರಬೇಕೆಂದು ಅಖಿಲ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕರಾದ ಬಿ.ಟಿ ಜಗದೀಶ್ ಸರ್ಕಾರವನ್ನು ಒತಾಯಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ವರದಿಯನ್ನು 167 ಕೋಟಿ ರೂ ವೆಚ್ಚದಲ್ಲಿ 63 ಸಾವಿರ ಸಿಬ್ಬಂದಿಗಳು ನಿರಂತರ ಮನೆ ಮನೆಗೆ ಹೋಗಿ ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಿದ್ದಾರೆ. ಮುಖ್ಯಮಂತ್ರಿಗಳು ಮೈಸೂರಿನಲ್ಲಿ ಕೊಟ್ಟ ಮಾತಿನಂತೆ ಜಾರಿ ಮಾಡಬೇಕಿತ್ತು ಆದರೆ ಉಪಚುನಾವಣೆ ಬಂದ ಕಾರಣ ಅದು ಆಗಲಿಲ್ಲ. ಈಗಲಾದರೂ ಕಾಂತರಾಜ್ ವರದಿ ಜಾರಿಯಾಗಬೇಕು. ಸಾಮಾಜಿಕ ನ್ಯಾಯ ಸಿಗಬೇಕಾದರೆ ಸಿದ್ದರಾಮಯ್ಯನಂತಹ ಅವರಿಂದ ಮಾತ್ರ ಸಾಧ್ಯ.. ಈ ವರದಿಯಿಂದ 197 ಹಿಂದುಳಿದ ಜಾತಿಗಳಿಗೆ ನ್ಯಾಯ ಸಿಗುತ್ತದೆ ಎಂದಿದ್ದಾರೆ. 2016ರಲ್ಲಿ ರಾಜ್ಯ ಸರ್ಕಾರವು ಸುಮಾರು 165 ಕೋಟಿ ರೂಗಳನ್ನು ಖರ್ಚು ಮಾಡಿ ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಈಗಾಗಲೇ ಆಯೋಗವು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದು, ದಮನಿತ ಸಮುದಾಯಗಳ ಬಗ್ಗೆ ಅಪಾರವಾದ ಕಾಳಜಿ ಮತ್ತು ಸಾಮಾಜಿಕ ನ್ಯಾಯದ ಪರ ಇರುವ ಮುಖ್ಯಮಂತ್ರಿಗಳು ವರದಿಯನ್ನು ಒಪ್ಪಿ ಬಿಡುಗಡೆ ಮಾಡಬೇಕು. ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಜಾತಿ ಜನಗಣತಿ ನಡೆಸಿ ರಾಜ್ಯದಲ್ಲಿ ಜಾರಿಗೊಳಿಸುತ್ತೇವೆಂದು ವಾಗ್ದಾನ ನೀಡಿತ್ತು ಎನ್ನುವುದನ್ನು ಮರೆಯಬಾರದು ಎಂದರು.

 

ರಾಜ್ಯದಲ್ಲಿ ಪ್ರಬಲ ಜಾತಿಗಳಿಂದ 2ಎ ಗೆ ಸೇರಿಸಬೇಕೆಂದು ಹೋರಾಟ ಮಾಡುತ್ತಿವೆ.. ಇದು ರಕ್ತ ಕ್ರಾಂತಿಗೆ, ಜಾತಿ-ಜಾತಿಗಳ ಮಧ್ಯೆ ಹೋರಾಟಕ್ಕೆ ಕಾರಣವಾಗಬಹುದು.2ಎ ಮೀಸಲಾತಿಯ ಹೋರಾಟಗಾರರಾದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿಯವರು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಬಸವಣ್ಣರವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದಾಗ ಸನ್ಮಾನಿಸಿದ್ದರು.ಆದರೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡದೇ ಇರುವುದಕ್ಕೆ ಸಿದ್ದರಾಮಯ್ಯರವರು ಲಿಂಗಾಯಿತ ವಿರೋಧಿ ಎಂದು ಆಪಾದನೆ ಮಾಡುತ್ತಿದ್ದಾರೆ. ಆದರೆ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಅಡಿಯಲ್ಲಿ ಬರಲಿಕ್ಕೆ ನಾವು ಬಿಡುವುದಿಲ್ಲ… ಈ ಬಗ್ಗೆ ಒಕ್ಕೂಟ ಉಗ್ರವಾದ ಹೋರಾಟ ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಚಳಿಗಾಲದ ಅಧಿವೇಶನವು ಮುಗಿಯುವದರೊಳಗೆ ಸಂಪುಟ ಸಭೆಯನ್ನು ನಡೆಸಿ ಸಮೀಕ್ಷಾ ವರದಿಯನ್ನು ಬಿಡುಗಡೆಗೋಳಿಸಲು ತಿರ್ಮಾನಿಸಬೇಕು. ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ಪ್ರಬಲವಾಗಿರುವ ಸಮುದಾಯಗಳು ಇತ್ತಿಚಿನ ದಿನಗಳಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ-2ಎ ಮೀಸಲಾತಿ ಪಟ್ಟಿಗೆ ಸೇರಲು ರಾಜ್ಯ ಸಕಾರಕ್ಕೆ ಮನವಿಯನ್ನು ಸಲ್ಲಿಸುತ್ತಿದ್ದು, ಯಾವುದೇ ಕಾರಣಕ್ಕೂ ಮುಂದುವರೆದ ಜಾತಿಗಳನ್ನು ಹಿಂದುಳಿದ ವರ್ಗಗಳ ಪ್ರವರ್ಗ-2ಎ ಮೀಸಲಾತಿ ಪಟ್ಟಿಗೆ ಸೇರಿಸಬಾರದು. ಒಂದು ವೇಳೆ ಮುಂದುವರೆದ ಜಾತಿಗಳು ಹಿಂದುಳಿದ ವರ್ಗಗಳ ಪ್ರವರ್ಗ-2ಎ ಮೀಸಲಾತಿ ಪಟ್ಟಿಗೆ ಸೇರಿದ್ದೇ ಆದಲ್ಲಿ ಈಗಾಗಲೇ ಹಿಂದುಳಿದ ವರ್ಗಗಳ ಪ್ರವರ್ಗ-2ಎ ಮೀಸಲಾತಿ ಪಟ್ಟಿಯಲ್ಲಿರುವ ಸುಮಾರು 102 ಹಿಂದುಳಿದ, ಅತಿ ಹಿಂದುಳಿದ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಿಗೆ ಸಂವಿಧಾನಬದ್ದ ಹಕ್ಕನ್ನು ಕಸಿದುಕೊಂಡಂತ್ತಾಗುತ್ತದೆ ಎಂದಿದ್ದಾರೆ.

ಶೋಷಿತ ಸಮುದಾಯಗಳ ಬಗ್ಗೆ ರಾಜ್ಯ ಸರ್ಕಾರವು ಯಾವ ನಿಲುವನ್ನು ಹೊಂದಿದೆ ಎಂಬುದರ ಬಗ್ಗೆ ಶೀಘ್ರವೇ ರಾಜ್ಯ ಸರ್ಕಾರವು ಸ್ಪಷ್ಟವಾಗಿ ತಿಳಿಸಬೇಕು ಇಲ್ಲವಾದಲ್ಲಿ ದಿನಾಂಕ:18.12.2024 ರಂದು ಬೆಳಗಾವಿ ಚಲೋ ಮತ್ತು ವಿಧಾನಸೌಧ ಮುಂಭಾಗದಲ್ಲಿ ಕರ್ನಾಟಕ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಗೋಷ್ಟಿಯಲ್ಲಿ ಅಖಿಲ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ಆರ್.ವೆಂಕಟರಾಮಯ್ಯ, ಅಧ್ಯಕ್ಷರಾದ ಸಿ.ಟಿ.ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಹೆಚ್.ಮಂಜಪ್ಪ, ಸಂಚಾಲಕರಾದ ಡಿ.ದುರುಗೇಶ್, ಸಾಧಿಕ್‌ವುಲ್ಲಾ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ವಕ್ಪ್ ಆಸ್ತಿ ಕಬಳಿಕೆ : ಬಿವೈ ವಿಜಯೇಂದ್ರರಿಂದ 150 ಕೋಟಿ ಆಮಿಷ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ? 

      ಬೆಂಗಳೂರು: ರಾಜ್ಯದಲ್ಲಿ ವಕ್ಫ್ ವಿಚಾರ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದು, ಚರ್ಚೆಗೂ ಗ್ರಾಸವಾಗಿದೆ. ಇದೀಗ ಬಿವೈ ವಿಜಯೇಂದ್ರ ಅವರ ಮೇಲೆ ದೊಡ್ಡ ಆರೋಪವೊಂದು ಕೇಳಿ ಬಂದಿದೆ. ವಕ್ಫ್ ಸಂಬಂಧ 150 ಕೋಟಿ

ಸಾಹಿತ್ಯದಲ್ಲಿ ವೈಚಾರಿಕ ಹಾಗೂ ವೈಜ್ಞಾನಿಕ ಭಾವನೆಗಳು ಮುಖ್ಯ : ಸಂತೋಷ್ ಕುಮಾರ್ ಮೆಹೇಂದಳೆ

    ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 14 : ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆ ಚಿತ್ರದುರ್ಗ ಹಾಗೂ ವಿಶ್ವಮಾನವ ಪದವಿ ಪೂರ್ವ ಕಾಲೇಜು ಸೀಬಾರ ಗುತ್ತಿನಾಡು ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ಕಥಾಯಾನ ಕಾರ್ಯಕ್ರಮದ

ಚಿತ್ರದುರ್ಗ | ಜ್ಞಾನಪೂರ್ಣ ಶಾಲೆಯಲ್ಲಿ ಭಗವದ್ಗೀತಾ ದಿನಾಚರಣೆ

  ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 14 : ತಾಲ್ಲೂಕಿನ ದೊಡ್ಡ ಸಿದ್ದವನಹಳ್ಳಿ ಗ್ರಾಮದ ಜ್ಞಾನಪೂರ್ಣ ಸಮೂಹ ಸಂಸ್ಥೆಗಳ ಆವರಣದಲ್ಲಿ ಭಗವದ್ಗೀತಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜ್ಞಾನಪೂರ್ಣ ಸಮೂಹ ಸಂಸ್ಥೆಗಳ ಕಾರ್ಯದರ್ಶಿ, ಎನ್. ಎಲ್. ವೆಂಕಟೇಶ್

error: Content is protected !!