Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕ ವಿಧಾನಸಭಾ ಚುನಾವಣೆ : ಬೆಟ್ಟಿಂಗ್ ದಂಧೆ ಬಾರೀ ಜೋರು….!

Facebook
Twitter
Telegram
WhatsApp

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕಾಗಿ ಇಡೀ ದೇಶವೇ ಕುತೂಹಲದಿಂದ ಕಾಯುತ್ತಿದೆ.ಈ ಹಿನ್ನೆಲೆಯಲ್ಲಿ ಸಾಕಷ್ಟು ಬೆಟ್ಟಿಂಗ್ ನಡೆಯುತ್ತಿದೆ.

ಈ ಬೆಟ್ಟಿಂಗ್ ವ್ಯವಹಾರ ಅಂದಾಜು ಸುಮಾರು ರೂ.10 ಸಾವಿರದಿಂದ ರೂ. 20 ಸಾವಿರ  ಕೋಟಿ ವರೆಗೂ ನಡೆದಿರುವಂತೆ ಕಾಣುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಒಟ್ಟು 224 ಸ್ಥಾನಗಳನ್ನು ಹೊಂದಿರುವ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಮುನ್ನಡೆ ಸಾಧಿಸಲಿದೆ ಎಂದು ಬುಕ್ಕಿಗಳು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ 120 ರಿಂದ 130 ಸ್ಥಾನಗಳು, ಬಿಜೆಪಿಗೆ 80 ಸ್ಥಾನಗಳು ಮತ್ತು ಜೆಡಿಎಸ್ 37 ಸ್ಥಾನಗಳನ್ನು ಪಡೆಯುತ್ತದೆ ಎಂದು ಬೆಟ್ಟಿಂಗ್ ನಡೆಯುತ್ತಿದೆ.

ಹಾಪುರ್‌ನ ಸತ್ತಾ ಬಜಾರ್‌ನ ಮೂಲಗಳು ಕಾಂಗ್ರೆಸ್‌ಗೆ 110 ಮತ್ತು ಬಿಜೆಪಿ 75 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳುತ್ತಿವೆ.

ಫಲೋಡಿ ಸತ್ತಾ ಮಾರ್ಕೆಟ್‌ನ ಮೂಲಗಳ ಪ್ರಕಾರ ಕಾಂಗ್ರೆಸ್‌ಗೆ 137 ಸ್ಥಾನಗಳನ್ನು ಮತ್ತು ಬಿಜೆಪಿ ಕೇವಲ 55 ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ. ಜೆಡಿಎಸ್ 30 ಸ್ಥಾನ ಗೆಲ್ಲುವ ಸಾಧ್ಯತೆ ಇದೆ.

ಕಾಂಗ್ರೆಸ್ 141 ಸ್ಥಾನ, ಬಿಜೆಪಿ 57 ಮತ್ತು ಜೆಡಿಎಸ್ 24 ಸ್ಥಾನ ಪಡೆಯಲಿದೆ ಎಂದು ಪಾಲನಪುರ ಸತ್ತಾ ಬಜಾರ್ ಹೇಳುತ್ತಿದೆ.

ಬೆಟ್ಟಿಂಗ್ ಬಜಾರ್ ಭವಿಷ್ಯ ಕಾಂಗ್ರೆಸ್ ಪರವಾಗಿದೆ. 120 ರಿಂದ 130 ಸ್ಥಾನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಇಡೀ ಬೆಟ್ಟಿಂಗ್ ಮಾರುಕಟ್ಟೆಯಲ್ಲಿ ಕೇಳಿ ಬರುತ್ತಿದೆ. ಇದಲ್ಲದೆ, ಬಹುತೇಕ ಎಕ್ಸಿಟ್ ಪೋಲ್‌ಗಳು ಕಾಂಗ್ರೆಸ್ ಪಕ್ಷದ ಪರವಾಗಿವೆ ಎಂದು ಭವಿಷ್ಯ ನುಡಿದಿದ್ದು, ಪಕ್ಷದ ಗೆಲುವಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

ಈ ವಿಧಾನಸಭಾ ಚುನಾವಣೆಯಲ್ಲಿ ಗದ್ದುಗೆ ಏರಲು ಎಲ್ಲಾ ಪಕ್ಷಗಳು ಹರಸಾಹಸ ಪಡುತ್ತಿವೆ. ಗೆಲುವು ನಮ್ಮದೇ ಎಂದು ಎಲ್ಲಾ ಪಕ್ಷಗಳು ಹೇಳುತ್ತಿವೆ. ಮತದಾರರಲ್ಲಿ ಯಾರಿಗೆ ಮಣೆ ಹಾಕಲಿದ್ದಾನೆ ಎಂಬುದು ಶನಿವಾರ ಮಧ್ಯಾಹ್ನದ ವೇಳೆಗೆ ತಿಳಿಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

error: Content is protected !!