Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ – 2023 : ಮತದಾನಕ್ಕೆ ಪರ್ಯಾಯ ದಾಖಲೆಗಳ ಮಾಹಿತಿ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, (ಮೇ.08) :  ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ.10 ರಂದು ಮತದಾನ ನಡೆಯಲಿದ್ದು,  ಚುನಾವಣಾ ಗುರುತಿನ ಚೀಟಿ (ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗ ನಿಗಧಿಪಡಿಸಿರುವ ಪರ್ಯಾಯ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಹಾಜರುಪಡಿಸಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.
ಮತದಾರರು ಮತ ಚಲಾಯಿಸಲು ಮತಗಟ್ಟೆಗಳಿಗೆ ಹೋದ ಸಂದರ್ಭದಲ್ಲಿ ಅವರು ಹೊಂದಿರುವ ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕು. ಒಂದು ವೇಳೆ ಅದನ್ನು ಹಾಜರುಪಡಿಸಲು ಸಾಧ್ಯವಿಲ್ಲದಿದ್ದಲ್ಲಿ ಈ ಕೆಳಕಂಡ ಯಾವುದಾದರೂ ಒಂದು ಪರ್ಯಾಯ ದಾಖಲಾತಿಯನ್ನು ಮತದಾರರನ್ನು ಗುರುತಿಸುವುದಕ್ಕಾಗಿ ಹಾಜರು ಪಡಿಸಬಹುದಾಗಿದೆ.

ಆಧಾರ್ ಕಾರ್ಡ್, ಎಂಎನ್‍ಆರ್‍ಇಜಿಎ ಜಾಬ್ ಕಾರ್ಡ್, ಬ್ಯಾಂಕ್, ಅಂಚೆ ಕಚೇರಿ ನೀಡಿದ ಭಾವಚಿತ್ರವಿರುವ ಪಾಸ್‍ಬುಕ್‍ಗಳು, ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್,  ಡ್ರೈವಿಂಗ್ ಲೈಸನ್ಸ್, ಪಾನ್ ಕಾರ್ಡ್, ಎನ್‍ಪಿಆರ್ ಅಡಿಯಲ್ಲಿ ಆರ್‍ಜಿಐ ನೀಡಿದ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್‍ಫೆÇೀರ್ಟ್, ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ, ರಾಜ್ಯ, ಕೇಂದ್ರ ಸರ್ಕಾರದ  ಸಾರ್ವಜನಿಕ ಉದ್ದಿಮೆಗಳು ತಮ್ಮ ನೌಕರರಿಗೆ ನೀಡಿರುವ ಸೇವಾ ಗುರುತಿನ ಚೀಟಿ, ಸಂಸದರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರುಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿಗಳು, ಅಂಗವಿಕಲರ ಗುರುತಿನ ಚೀಟಿ (ಯುಡಿಐಡಿ ಕಾರ್ಡ್) ಪತ್ರದ ಮೂಲ ಪ್ರತಿಗಳನ್ನು ಮತದಾನದ ವೇಳೆ ಪರ್ಯಾಯ ದಾಖಲೆಗಳನ್ನಾಗಿ ಬಳಸಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!