ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ(ಸೆ.22) : ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರಧಾನ ಅಂಚೆ ಕಛೇರಿ ಮುತ್ತಿಗೆ ಕಾರ್ಯಕ್ರಮ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶದ ವಿರುದ್ಧ ಹೋರಾಟವನ್ನು ನಡೆಸಲಾಗಿದ್ದು ಅಂಚೆ ಕಚೇರಿಗೆ ನುಗ್ಗಲು ಎತ್ತಿಸಿದ ಕರವೇ ಕಾರ್ಯಕರ್ತರನ್ನು ಪೋಲಿಸರು ಬಂಧಿಸಿ ಬಿಡುಗಡೆ ಮಾಡಿರುವ ಘಟನೆ ನಡೆದಿದೆ.
ಕೃಷ್ಣರಾಜಸಾಗರ ಜಲಾಶಯದಲ್ಲಿ ಉಳಿದಿರುವುದು ಕೇವಲ 20 ಟಿ.ಎಂ.ಸಿ. ನೀರು, ಅದರಲ್ಲಿ ಬಳಕೆಗೆ ಸಿಗುವುದು ಕೇವಲ 15 ಟಿ.ಎಂ.ಸಿ. ನೀರು ಮಾತ್ರ ಇಂತಹ ಸಂದರ್ಭದಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸುಮಾರು 7 ಟಿ.ಎಂ.ಸಿ ಯಷ್ಟು ನೀರನ್ನು ತಮಿಳುನಾಡಿಗೆ ಹರಿಸಲು ಆದೇಶಿಸಿರುವುದು ಆಶ್ಚರ್ಯಕರವಾಗಿದೆ. ಅಘಾತಕರವಾಗಿದೆ.
ಬೆಂಗಳೂರಿಗೆ ಪ್ರತಿ ತಿಂಗಳು, ಕುಡಿಯುವ ನೀರಿಗೆ 1.5 ಟಿ.ಎಂ.ಸಿ. ನೀರು ಬೇಕು, ಕಾವೇರಿ ಕಣಿವೆಯ ರೈತರ ಹೊಲ ಗದ್ದೆಗಳಿಗೆ ನೀರಿಲ್ಲ, ಕೈಗಾರಿಕೆಗಳಿಗೆ ಕೊಡಬೇಕಾದ ನೀರಿಲ್ಲ. ಹೀಗಿರುವಾಗ ” ಟಿಎಂಸಿ, ನೀರು ಎಲ್ಲಿಂದ ತರಲು ಸಾಧ್ಯ ಮಂಡ್ಯ ಭಾಗದಲ್ಲಿ ರೈತರು ನೀರಿಗೆ ಏನು ಮಾಡಬೇಕು? ಬೆಂಗಳೂರಿನ 1.5 ಕೋಟಿ ಜನರು ಕುಡಿಯುವ ನೀರು ಇಲ್ಲದೆ ಸಾಯಬೇಕೆ ?
ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ರಾಜ್ಯಸರ್ಕಾರ ಯಾವ ಕಾರಣಕ್ಕೂ ಪಾಲಿಸಬಾರದು. ನಾಡಿನ ಜನರ ಜೀವಗಳಿಗಿಂತ ಯಾವುದೇ ಪ್ರಾಧಿಕಾರದ ಆದೇಶದ ದೊಡ್ಡದಾಗಲು ಹೇಗೆ ಸಾಧ್ಯ ? ಈ ಪ್ರಾಧಿಕಾರ ಆದೇಶ ಪಾಲಿಸಲು ಹೋಗಿ ಅವರು ಹೇಳಿದಷ್ಟು ನೀರನ್ನು ಇದುವರೆಗೆ ಬಿಟ್ಟಿದೆ. ರಾಜ್ಯ ಸರ್ಕಾರ ದೊಡ್ಡ ತಪ್ಪು ಆಗಲು ಸರ್ಕಾರ ಸ್ಪಷ್ಟ ದೋರಣೆಯನ್ನು ಪ್ರಕಟಿಸಿದಂತೆ ಕಾಣುತ್ತಿಲ್ಲ.
ಈಗಲಾದರೂ ರಾಜ್ಯ ಸರ್ಕಾರ ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಮಾತನಾಡುವುದನ್ನು ಬಿಟ್ಟು ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ’ ಎಂಬ ದೃಢ ಘೋಷಣೆಯನ್ನು ಮಾಡಬೇಕು: ರಾಜ್ಯಸರ್ಕಾರ ಮತ್ತೆ ನೀರು ಬಿಟ್ಟರೆ ಕುಡಿಯುವ ನೀರು ಇಲ್ಲದೆ ಹಾಹಾಕಾರ ಉಂಟಾಗಲಿದೆ. ಅದರಿಂದ ಆಗುವ ಅನಾಹುತಗಳನ್ನು ಊಹಿಸಲು ಸಾಧ್ಯವಿಲ್ಲ.
ರಾಜ್ಯದ ಎಲ್ಲಾ ಸಂಸದರು. ದೆಹಲಿಯಲ್ಲಿ ಧರಣಿ ನಡೆಸಬೇಕು, ಕೇಂದ್ರಸರ್ಕಾರದ ಮೇಲೆ ಒತ್ತಡ ಹೇರಬೇಕು, ರಾಜೀನಾಮೆ ನೀಡಲು ಸಿದ್ಧರಾಗಿರಬೇಕು. ಯಾವುದೇ ಕಾರಣಕ್ಕೂ ರಾಜ್ಯಸರ್ಕಾರ ಪ್ರಾಧಿಕಾರದ ಆದೇಶವನ್ನು ಪಾಲಿಸಬಾರದು. ತಮಿಳುನಾಡಿಗೆ ಮತ್ತೆ ನೀರು ಬಿಡಕೂಡದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.
ಒಂದೊಮ್ಮೆ ಸರ್ಕಾರ ಅಂತಹ ದುಸ್ಸಾಹಕ್ಕೆ ಕೈಹಾಕಿದರೆ ರಾಜ್ಯದ ಜನರು ದಂಗೆ ಏಳುವ ಸ್ಥಿತಿ ನಿರ್ಮಾಣವಾಗುತ್ತದೆ. ಕರ್ನಾಟಕ ರಕ್ಷಣಾ ವೇದಿಕೆ ಉಗ್ರ ಸ್ವರೂಪದ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದು ಈ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಯಿತು.
ಈ ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾಧ್ಯಕ್ಷ ಟಿ.ರಮೇಶ್ ವಹಿಸಿದ್ದರು. ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷ ರಾಜಪ್ಪ ಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿವಿಜಯಕುಮಾರ್ ಚಿತ್ರದುರ್ಗ ನಗರ ಅಧ್ಯಕ್ಷ ಟಿ.ಕೆ. ಶಿವಮೂರ್ತಿ ಜಿಲ್ಲಾ ಉಪಾಧ್ಯಕ್ಷ ಎಸ್.ಪಿ. ಗಣೇಶ್ ಜಿಲ್ಲಾ ಪ್ರಧಾನ ಸಂಚಾಲಕರು ಆರ್ ಜಿ ಲಕ್ಷ್ಮಣ ಟಿ. ವೆಂಕಟೇಶ್ ಪ್ರಸಾದ್ ಮಲ್ಲ ವಸಂತ್ ವೆಂಕಟೇಶ್ ಚಳ್ಳಕೆರೆ ತಾಲ್ಲೂಕು ಅಧ್ಯಕ್ಷ ರಾಮಕೃಷ್ಣಪ್ಪ ಗೋ ಬಸವರಾಜನ್ ದಾದಾಪೀರ್ ಜಾಕೀರ್ ಉದಯಶಂಕರ್ ಜಿಲ್ಲಾ ಮಹಿಳಾ ಅಧ್ಯಕ್ಷ ಚಂದ್ರಕಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷ ಮನು ಜಿಲ್ಲಾ ಮಹಿಳಾ ಸಂಘಟನಾ ಕಾರ್ಯದರ್ಶಿ ಮಂಜುಳ ದಾಕ್ಷಾಯಣಿ ಸುಮ ಜ್ಯೋತಿ ಜಯಲಕ್ಷ್ಮಿ ರುದ್ರೇಶ್ ಮಾರುತಿ ಸೇರಿದಂತೆ ಇತರರು ಭಾಗವಹಿಸಿದ್ದರು.