Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒನಕೆ ಓಬವ್ವ ಜಯಂತಿಗೆ ಸಿಂಗಾರಗೊಂಡ ಕೋಟೆನಾಡು ಚಿತ್ರದುರ್ಗ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಡಿ.17): ಸ್ವಾಮಿನಿಷ್ಠೆ, ಧೈರ್ಯ, ಸಮಯಸ್ಫೂರ್ತಿ ಮತ್ತು ತ್ಯಾಗದ ಸಂಗಮವಾಗಿರುವ ಒನಕೆ ಓಬವ್ವ ಜಯಂತಿ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಇದೇ ಮೊದಲ ಬಾರಿಗೆ ಐತಿಹಾಸಿಕ ಕೋಟೆನಾಡು ಚಿತ್ರದುರ್ಗದಲ್ಲಿ ಆಚರಿಸುವುದಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಜಯಂತಿ ಅಂಗವಾಗಿ ಕೋಟೆನಾಡು ತಳಿರು ತೋರಣಗಳಿಂದ ಸಿಂಗಾರಗೊಂಡಿದೆ.

ರಾಜ್ಯ ಮಟ್ಟದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಇದೇ ಡಿ. 18 ರಂದು ಮಧ್ಯಾಹ್ನ 01 ಗಂಟೆಗೆ ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ನಡೆಯಲಿದ್ದು, ನಾಡದೊರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು, ಸಮಾರಂಭಕ್ಕೆ ಹಲವು ಸಚಿವರು ಸೇರಿದಂತೆ ಗಣ್ಯಾತಿಗಣ್ಯರು ಆಗಮಿಸಲಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಚಿತ್ರದುರ್ಗ ನಗರಸಭೆ ಸಹಯೋಗದಲ್ಲಿ ರಾಜ್ಯ ಮಟ್ಟದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜಯಂತ್ಯುತ್ಸವ ಆಚರಿಸಲು ಸಕಲ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸುಸಜ್ಜಿತ ವೇದಿಕೆ ನಿರ್ಮಾಣ: ಜಯಂತಿ ಕಾರ್ಯಕ್ರಮ ಆಚರಣೆಗೆ ಸರ್ಕಾರಿ ವಿಜ್ಞಾನದ ಕಾಲೇಜು ಮೈದಾನದಲ್ಲಿ ಬೃಹತ್ ಪೆಂಡಾಲ್ ತಲೆಯೆತ್ತಿದ್ದು, ವೇದಿಕೆ ನಿರ್ಮಾಣ, ಮುಖ್ಯ ಅತಿಥಿಗಳ ಗ್ಯಾಲರಿ, ಮಾಧ್ಯಮ ಗ್ಯಾಲರಿ ಹಾಗೂ ಅಧಿಕಾರಿಗಳ ಗ್ಯಾಲರಿ, ಸಾರ್ವಜನಿಕರ ಗ್ಯಾಲರಿ ಸೇರಿದಂತೆ ಬಹುತೇಕ ಸಿದ್ಧತೆಗಳು ಸೂಕ್ತ ಆಸನ ವ್ಯವಸ್ಥೆಯೊಂದಿಗೆ ಪೂರ್ಣಗೊಂಡಿವೆ.

ಚಿತ್ರದುರ್ಗ ನಗರದಾದ್ಯಂತ ಒನಕೆ ಓಬವ್ವ ಜಯಂತಿಗೆ ಶುಭಾಶಯ ಕೋರುವ ಪೋಸ್ಟರ್‍ಗಳು, ಬ್ಯಾನರ್‍ಗಳು ರಾರಾಜಿಸುತ್ತಿವೆ.

ಜಾನಪದ ಕಲಾತಂಡಗಳಿಂದ ಭವ್ಯ ಮೆರವಣಿಗೆ: ಜಯಂತಿ ಅಂಗವಾಗಿ ಅಂದು ಬೆ. 09 ಗಂಟೆಗೆ ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಕನಕವೃತ್ತದಿಂದ ಸರ್ಕಾರಿ ವಿಜ್ಞಾನ ಕಾಲೇಜು ಮುರುಘರಾಜೇಂದ್ರ ಕ್ರೀಡಾಂಗಣದವರೆಗೆ ರಾಜ್ಯ ವಿವಿಧ ಜಾನಪದ ಕಲಾತಂಡಗಳಿಂದ ಭವ್ಯ ಮೆರವಣಿಗೆ ನಡೆಯಲಿದೆ.

ಮೆರವಣಿಗೆಯಲ್ಲಿ ಒನಕೆ ಓಬವ್ವ ವೇಷ ಧರಿಸಿದ ಸುಮಾರು 500 ರಿಂದ 600 ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.  ಡೊಳ್ಳು, ಹಗಲುವೇಷ, ತಾಷರಂಡೋಲು, ಕಹಳೆವಾದನ ಸೇರಿದಂತೆ ಈ ನಾಡಿನ ಸೊಗಡು ಬಿಂಬಿಸುವ ವೈವಿಧ್ಯಮಯ ಕಲಾ ತಂಡಗಳು ಮೆರವಣಿಗೆಗೆ ವಿಶೇಷ ಮೆರಗು ನೀಡಲಿವೆ.

ಮಹನೀಯರ ಪುತ್ಥಳಿಗಳಿಗೆ ಹೂವಿನ ಅಲಂಕಾರ: ಚಿತ್ರದುರ್ಗ ನಗರದ ಕನಕ ವೃತ್ತದಿಂದ ಮದಕರಿ ವೃತ್ತದವರೆಗಿನ ಹಾದಿಯಲ್ಲಿ ಬರುವ ಕನಕದಾಸರು, ಡಾ.ಬಿ.ಅರ್.ಅಂಬೇಡ್ಕರ್, ಮದಕರಿ ನಾಯಕ ಪುತ್ಥಳಿಗಳು, ವೃತ್ತ, ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಬಳಿಯ ಒನಕೆ ಓಬವ್ವ ಪುತ್ಥಳಿ ಸೇರಿದಂತೆ ನಗರದ ಪ್ರಮುಖ ರಸ್ತೆಯಲ್ಲಿರುವ ಎಲ್ಲ ಮಹನೀಯರ ಪುತ್ಥಳಿಗಳಿಗೂ ಹಾಗೂ ನಗರದ ಪ್ರಮುಖ ವೃತ್ತಗಳಿಗೂ ವಿವಿಧ ಬಗೆಯ ಪುಷ್ಪಗಳಿಂದ ಅಲಂಕಾರ ಮಾಡಿ ಸಿಂಗಾರಗೊಳಿಸಲಾಗಿದೆ.

1 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ:  ರಾಜ್ಯಮಟ್ಟದ ಒನಕೆ ಓಬವ್ವ ಜಯಂತಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆ ಇದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸುವ ಜನರಿಗೆ ಸುಮಾರು 600 ಬಸ್‍ಗಳ ಸೌಲಭ್ಯ ಕಲ್ಪಿಸಲಾಗಿದೆ. ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಹಳ್ಳಿಗಳಿಂದ ಜನರು ಜಯಂತಿ ಕಾರ್ಯಕ್ರಮಕ್ಕೆ ಆಗಮಿಸಲು ಅನುಕೂಲವಾಗುವಂತೆ ಸುಮಾರು 100 ಕ್ರೂಸರ್‍ಗಳ ವ್ಯವಸ್ಥೆ ಮಾಡಲಾಗಿದೆ.

ಹೆಚ್ಚಿನ ಜನರು ಆಗಮಿಸುವುದರಿಂದ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಲು ಪೊಲೀಸ್ ಇಲಾಖೆ ಕ್ರಮ ವಹಿಸಿದೆ.

ಒನಕೆ ಓಬವ್ವ ಪುಸ್ತಕಗಳ ಬಿಡುಗಡೆ: ರಾಜ್ಯಮಟ್ಟದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯ ಕನ್ನಡ ಭಾರತಿ ವಿಭಾಗದ ಸಹ ಪ್ರಾಧ್ಯಾಪಕ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಅವರು ಬರೆದಿರುವ “ಸಾಂಸ್ಕøತಿಕ ನಾಯಕಿ ಒನಕೆ ಓಬವ್ವ” ಕೃತಿಯನ್ನು ಹಾಗೂ ಹೇಮಂತ್ ಕುಮಾರ್ ಅವರ “ವೀರ ವನಿತೆ ಓನಕೆ ಓಬವ್ವ’ ಪುಸ್ತಕವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ  ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಮತ್ತಿತರ ಗಣ್ಯರು ಲೋಕಾರ್ಪಣೆ ಮಾಡುವರು.

ಇದೇ ಮೊದಲ ಬಾರಿಗೆ ಕೋಟೆನಾಡು ಚಿತ್ರದುರ್ಗದಲ್ಲಿ ಸರ್ಕಾರದ ವತಿಯಿಂದ ನಡೆಯಲಿರುವ ರಾಜ್ಯ ಮಟ್ಟದ ಒನಕೆ ಓಬವ್ವ ಆಚರಣೆ ಸಮಾರಂಭವನ್ನು ಕಣ್ತುಂಬಿಕೊಳ್ಳಲು ನಾಡಿನ ಜನತೆ ಕಾತುರರಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಬಾಂಗ್ಲಾ ನುಸುಳುಕೋರರು ಪತ್ತೆ : ಇಬ್ಬರು ಪೊಲೀಸರ ವಶಕ್ಕೆ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 18 : ನಗರದಲ್ಲಿ ಇಬ್ಬರು ಬಾಂಗ್ಲಾ ನುಸುಳುಕೋರರು ಸಿಕ್ಕಿಬಿದ್ದಿದ್ದಾರೆ. ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಚಿತ್ರದುರ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡಿವೈಎಸ್ಪಿ ದಿನಕರ್ ನೇತೃತ್ವದಲ್ಲಿ ಗಾರ್ಮೆಂಟ್ಸ್ ಗಳ ಮೇಲೆ

ಹಿರಿಯೂರು | ಐಮಂಗಲ ಬಳಿ ಬಸ್ ಪಲ್ಟಿ : ಹಲವರಿಗೆ ಗಾಯ

ಸುದ್ದಿಒನ್,  ಹಿರಿಯೂರು, ನವೆಂಬರ್.18 : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ ಹತ್ತು ಜನರು ಗಾಯಗೊಂಡ ಘಟನೆ ಸೋಮವಾರ ಬೆಳಿಗ್ಗೆ ಐಮಂಗಲ ಬಳಿ ನಡೆದಿದೆ. ಹಿರಿಯೂರಿನಿಂದ ದಾವಣಗೆರೆ ಕಡೆ ಹೋಗುತ್ತಿದ್ದ

ಮಹಾತ್ಮರನ್ನ ಜಾತಿಗೆ ಸೀಮಿತ ಮಾಡಬಾರದು : ಡಾ.ಬಸವಕುಮಾರ ಸ್ವಾಮಿಗಳವರು

ಚಿತ್ರದುರ್ಗ, ನ.18 : ಯಾರು ಜಾತಿ ವ್ಯವಸ್ಥೆಯನ್ನು ದಿಕ್ಕರಿಸಿ ಸಮಾ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿ, ಆದರ್ಶ ಪಥದ ದರ್ಶನವನ್ನು ಮಾಡಿಸಿದ ದಾರ್ಶನಿಕರನ್ನು ಆಯಾ ಜಾತಿ ವ್ಯವಸ್ಥೆಗೆ ಕಟ್ಟಿ ಹಾಕುತ್ತಿರುವುದು ಆದರ್ಶ ಸಮಾಜ ನಿರ್ಮಾತೃಗಳಿಗೆ ಮಾಡುತ್ತಿರುವ 

error: Content is protected !!