Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಮಾರಸ್ವಾಮಿ ಹೇಳಿಕೆಯನ್ನು ಕಾಂಗ್ರೆಸ್ ತಿರುಚಲಾಗಿದೆ : ಜೆಡಿಎಸ್ ಸಾಲು ಸಾಲು ಟ್ವೀಟ್

Facebook
Twitter
Telegram
WhatsApp

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಆ ಹೇಳಿಕೆಗೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಜೆಡಿಎಸ್ ಈಗ ಸಾಲು ಸಾಲು ಟ್ವೀಟ್ ಮಾಡಿದೆ.

•ಸತ್ಯವನ್ನು ವಕ್ರೀಕರಿಸುವುದು, ತಿರುಚುವುದು @INCKarnataka ಪಕ್ಷದ ಪುರಾತನ-ಪರಂಪರಾಗತ ಚಾಳಿ. 75 ವರ್ಷಗಳಿಂದ ಇದನ್ನೇ ಮಾಡಿಕೊಂಡು ಜಾತಿ ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸಿ ಆಳುತ್ತಿದೆ. ಈಸ್ಟ್ ಇಂಡಿಯಾ ಕಂಪನಿಯ ಆಧುನಿಕ ಅವತಾರವೇ ಕಾಂಗ್ರೆಸ್. ಜನರನ್ನು ರಣಹದ್ದಿನಂತೆ ಕಿತ್ತು ತಿನ್ನುತ್ತಿದೆ ಹಾಗೂ ಕರ್ನಾಟಕದಲ್ಲಿ ತನ್ನ ರಕ್ಕಸಭೋಜನ ಮುಂದುವರಿದೆ.

•ತುರುವೇಕೆರೆಯಲ್ಲಿ @hd_kumaraswamy ಅವರು ಹೇಳಿದ್ದನ್ನು ಕಾಂಗ್ರೆಸ್ ಫೇಕ್ ಫ್ಯಾಕ್ಟರಿ ತಿರುಚಿ ಮೈ ಪರಚಿಕೊಳ್ಳುತ್ತಿದೆ. “ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ” ಎಂದು ಹಸಿಸುಳ್ಳು ಹಬ್ಬಿಸುತ್ತಿದೆ. ನೆನಪಿರಲಿ; ಇದೇ ಹಳ್ಳಿ ತಾಯಂದಿರ ಬದುಕಿಗೆ ನರಕವಾಗಿದ್ದ ಸಾರಾಯಿ, ಲಾಟರಿ ನಿಷೇಧ ಮಾಡಿ ಅವರ ಮಾಂಗಲ್ಯ ಉಳಿಸಿದ್ದು ಇದೇ ಕುಮಾರಣ್ಣ. ನಿತ್ಯನರಕವಾಗಿದ್ದ ಅವರ ಬದುಕಿಗೆ ಸಾಂತ್ವನ ಹೇಳಿದ್ದೂ ಇವರೇ. ವಿಧವಾ ಪಿಂಚಣಿಯನ್ನು ₹200 ರಿಂದ ₹400ಕ್ಕೆ ಹೆಚ್ಚಿಸಿ ಅವರಿಗೆ ಶಕ್ತಿ ತುಂಬಿದ್ದು ಕುಮಾರಣ್ಣ ಅಲ್ಲವೇ?

•2018-19ರಲ್ಲಿ @INCKarnataka ವಿರೋಧ ಲೆಕ್ಕಿಸದೆ ರೈತರ ₹25,000 ಕೋಟಿ ಸಾಲ ಮಾಡಿದ್ದು ಹಳ್ಳಿ ತಾಯಂದಿರ ಅಣ್ಣ ಇದೇ ಕುಮಾರಣ್ಣ. ಸಾಲ ಮನ್ನಾ ನಮ್ಮ ಕಾರ್ಯಕ್ರಮವೇ ಅಲ್ಲ; ನಮ್ಮ ಭಾಗ್ಯಗಳಿಗೆ ನಯಾಪೈಸೆ ಕಮ್ಮಿ ಆಗಂಗಿಲ್ಲ ಎಂದು ಟವೆಲ್ ಕೊಡವಿದ್ದು ಯಾರು ಕಾಂಗ್ರೆಸ್ಸಿಗರೇ? ನಿಮಗೆ ನೆನಪಿಲ್ಲವೇ? ಇಂಥ ಕುಮಾರಣ್ಣ ತಾಯಂದಿರನ್ನು ಅಪಮಾನಿಸುತ್ತಾರೆಯೇ? ಸುಳ್ಳು ಹೇಳಿದರೆ ಜನ ನಂಬುತ್ತಾರೆಯೇ?

•ಕಾಂಗ್ರೆಸ್ ಮಾಡಿದ್ದೇನು? ಲಾಟರಿ ಕಿಂಗ್ ಗಳಿಗೆ ರತ್ನಗಂಬಳಿ ಹಾಸಿ ಲೂಟಿ ಮಾಡಿದ್ದು, ಮನೆಮನೆಗೂ ಹಳ್ಳಿಹಳ್ಳಿಗೂ ಸಾರಾಯಿ ಸಮಾರಾಧನೆ ಮಾಡಿದ್ದು @INCKarnataka ಸರಕಾರ. ಅಷ್ಟೇ ಏಕೆ? ಒಂದು ಕೈಯ್ಯಲ್ಲಿ ₹2000 ಕೊಟ್ಟು ಇನ್ನೊಂದು ಕೈಯ್ಯಲ್ಲಿ ತಾಯಂದಿರ ಮನೆಗಳ ಪಕ್ಕದ ಕಿರಾಣಿ ಅಂಗಡಿಗಳಲ್ಲಿಯೇ ಮದ್ಯದ ಬಾಟಲಿ ಮಾರಾಟ ಮಾಡುತ್ತಿರುವುದು ಇದೇ ಢೋಂಗಿ ಗ್ಯಾರಂಟಿ ಕಾಂಗ್ರೆಸ್ ಸರಕಾರ! ಇಲ್ಲಾ ಎನ್ನಲು ಅವರಿಗೆ ಧೈರ್ಯ, ನೈತಿಕತೆ ಇದೆಯೇ?

•ಸ್ವಚ್ಛ ಮನಸ್ಸಿನ ಹಳ್ಳಿಗಳಲ್ಲಿ ಸುಪ್ರಭಾತದ ವೇಳೆಗೆ ದೇವಾಲಯದ ಘಂಟೆನಾದ ಮೊಳಗುತ್ತಿತ್ತು. ಉಷೋದಯಕ್ಕೆ ಮೊದಲೇ ಹಳ್ಳಿಗೆ ಹಳ್ಳಿಯೇ ಮಂಗಳಕರವಾಗಿ ಕಂಗೊಳಿಸುತ್ತಿತ್ತು. ತಾಯಂದಿರು ಮನೆಗಳ ಮುಂದೆ ರಂಗೋಲಿ ಬಿಡಿಸುತ್ತಿದ್ದರೆ, ಪುರುಷರು ಹೊಲ-ತೋಟದ ಕೆಲಸಗಳಿಗೆ ಹೋಗುತ್ತಿದ್ದರು. ಗ್ಯಾರಂಟಿಗಳು ಬಂದ ಮೇಲೆ ಏನಾಗಿದೆ? ತಾಯಂದಿರು ರಂಗೋಲಿ ಬಿಡಿಸುವ ಮುನ್ನವೇ ಕಿರಾಣಿ ಅಂಗಡಿಗಳಲ್ಲಿ, ಹಾದಿಬೀದಿಗಳ ಬಾರ್ ಗಳಲ್ಲಿ ಮದ್ಯದ ಘಾಟು ಹೊಡೆಯುತ್ತಿದೆ. ತಾಯಂದಿರ ಸಬಲೀಕರಣ, ಆರ್ಥಿಕ ಸ್ವಾತಂತ್ರ್ಯ, ಸ್ವಾಭಿಮಾನ ಎಂದರೆ ಸೂರ್ಯೋದಕ್ಕೆ ಮೊದಲೇ ಮದ್ಯ ಮಾರಾಟ ಮಾಡುವುದೇ?

•ಕಾಂಗ್ರೆಸ್ ದಾರಿದ್ರ್ಯ ಎಲ್ಲಿಗೆ ಬಂದು ನಿಂತಿದೆ ನೋಡಿ.. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಮದ್ಯಪಾನಕ್ಕೆ ಭಾರೀ ಪ್ರೋತ್ಸಾಹ ಕೊಡುವುದು ‘ಕಾಂಗ್ರೆಸ್ ಪಕ್ಷದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ’ ಆಗಿದೆ. ಶ್ರೀಗಂಧ, ಸುಗಂಧದ ನಾಡಾಗಿರುವ ಕರ್ನಾಟಕವನ್ನು ಮದ್ಯದ ಬೀಡನ್ನಾಗಿಸುತ್ತಿದೆ. ಇದನ್ನು ಪ್ರಶ್ನಿಸಿದರೆ ತಾಯಂದಿರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿದ ಹಾಗೆಯೇ?
ಕುಮಾರಸ್ವಾಮಿ ಅವರು ಹೇಳಿದ್ದು.. ಗ್ಯಾರಂಟಿಗಳಿಂದ ತಾಯಂದಿರನ್ನು ದಿಕ್ಕು ತಪ್ಪಿಸುತ್ತಿದೆ ಎಂದು. ಉಚಿತ ಆರೋಗ್ಯ, ಉಚಿತ ಶಿಕ್ಷಣ ನೀಡುವ ಬದಲು ಅಗ್ಗದ ರಾಜಕೀಯ ಲಾಭ ಮಾಡಿಕೊಳ್ಳುತ್ತಿದೆ ಎಂದು. ಕಾಂಗ್ರೆಸ್ ತನ್ನ ಪಾಪಗಳನ್ನು ಮುಚ್ಚಿಟ್ಟುಕೊಳ್ಳಲು ಸತ್ಯಕ್ಕೆ ಸುಳ್ಳಿನ ಮುಖವಾಡ ಹಾಕುತ್ತಿದೆ. ನಿಜಕ್ಕಾದರೆ, ದಾರಿ ತಪ್ಪುತ್ತಿರುವುದು ರಾಜ್ಯದ ಆರ್ಥಿಕತೆ, ಕರ್ನಾಟಕದ ಹೆಗ್ಗಳಿಕೆ, ಕರ್ನಾಟಕ ಪ್ರತಿಷ್ಠೆ.
ಹೆಚ್ಚುತ್ತಿರುವುದು ತಾಯಂದಿರ ಮೇಲಿನ ಸಾಲ. ಈ ವರ್ಷ ₹1 ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡುವ ಗುರಿ ಇಟ್ಟುಕೊಂಡಿದೆ ಈ ಸರಕಾರ. ಆ ಸಾಲ ತೀರಿಸೋರು ಯಾರು? ಕಾಂಗ್ರೆಸ್ ತನ್ನ ಖಜಾನೆಯಿಂದ ತೀರಿಸುತ್ತದೆಯೇ? ಎಂದು ಪ್ರಶ್ನಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ : ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್.ಪಿ.ರವೀಂದ್ರ

ಚಿತ್ರದುರ್ಗ. ನ.22: ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಕೋರಿದ್ದಾರೆ.   ಜಿಲ್ಲಾಸ್ಪತ್ರೆಗೆ ಬರುವಾಗ ರೋಗಿಗಳು ತಪ್ಪದೇ ಆಧಾರ್ ಕಾರ್ಡ್, ರೇಷನ್ ಕಾರ್ಡ್ ನಕಲು ಪ್ರತಿಗಳನ್ನು

ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್

ಸತತ ಏರಿಕೆಯತ್ತ ಸಾಗುತ್ತಿದೆ ಚಿನ್ನದ ಬೆಲೆ : ಇಂದಿನ ದರ ಹೀಗಿದೆ..!

ಚಿನ್ನದ ಬೆಲೆ ಇಳಿಕೆಯಾಯ್ತು ಎಂದು ಖುಷಿ ಪಡುತ್ತಿರುವಾಗಲೇ ಇದೇನಿದು ಒಂದೇ ಸಮನೇ ಏರುತ್ತಲೇ ಇದೆ. ಅದರಲ್ಲೂ 70-80 ರೂಪಾಯಿ ಏರುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದ್ದು, 70 ರೂಪಾಯಿ ಗ್ರಾಂಗೆ ಜಾಸ್ತಿಯಾಗಿದೆ. ಈ

error: Content is protected !!