ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ ಕಾಂಗ್ರೆಸ್ ಪಕ್ಷ, ಅಧಿಕಾರಕ್ಕೆ ಬಂದ ಮೇಲೆ ಯೋಜನೆ ಜಾರಿಗೆ ಅಸ್ತು ಎಂದಿದೆ. ಅದರಲ್ಲಿ ಶಕ್ತಿ ಯೋಜನೆ ಬಹಳ ಮುಖ್ಯವಾಗಿದೆ. ಫ್ರೀ ಬಸ್ ಬಿಟ್ಟಾಗಿನಿಂದ ಮಹಿಳೆಯರ ಓಡಾಟ ಜಾಸ್ತಿಯಾಗಿದೆ. ಧಾರ್ಮಿಕ ಕ್ಷೇತ್ರಗಳಿಗೆ ಹೋಗುವವರು ಹೆಚ್ಚಾಗಿದ್ದಾರೆ.
ಶಕ್ತಿ ಯೋಜನೆಯ ವಿರುದ್ಧ ಕಾನೂನು ವಿದ್ಯಾರ್ಥಿಗಳು ಕೋರ್ಟ್ ಮೆಟ್ಟಿಲೇರಿದ್ದಾರೆ. ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದಾರೆ. ಫ್ರೀ ಬಸ್ ಯೋಜನೆಯಡಿ, ಸರ್ಕಾರಿ ಬಸ್ ಗಳೆಲ್ಲಾ ತುಂಬಿ ತುಳುಕುತ್ತಿವೆ. ಇದರಿಂದ ಸಾಕಷ್ಟು ಅನಾಹುತಗಳಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಸೀಟಿಗಾಗಿ ಹೊಡೆದಾಟ ನಡೆಯುತ್ತಿದೆ. ಹಿರಿಯ ನಾಗರಿಕರು, ಮಕ್ಕಳು ಬಸ್ ಹತ್ತಲಾಗುತ್ತಿಲ್ಲ. ಕೆಲವೆಡೆ ಬಸ್ ಹತ್ತಲಾಗದೇ ವಿದ್ಯಾರ್ಥಿಗಳು ಬಿದ್ದ ಘಟನೆ ನಡೆದಿವೆ. ಶಾಲಾ ಕಾಲೇಜು ಪರೀಕ್ಷೆಗಳಿಗೆ ಸರಿಯಾದ ವೇಳೆಗೆ ಹೋಗಲಾಗುತ್ತಿಲ್ಲ. ಒಂದೇ ವಾರದಲ್ಲಿ ತೆರಿಗೆದಾರರ 100 ಕೋಟಿ ಹಣ ಬಳಕೆಯಾಗಿದೆ. ಸರ್ಕಾರ ಶಕ್ತಿ ಯೋಜನೆಗೆ ಬಳಕೆಯಾಗಿದೆ ಎಂದು ಉಲ್ಲೇಖಿಸಿದ್ದಾರೆ ಎಂದು ಪಿಐಎಲ್ನಲ್ಲಿ ಉಲ್ಲೇಖಿಸಲಾಗಿದೆ.