ಚಾಮರಾಜನಗರ: ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ನಾಯಕರು ಫುಲ್ ಆ್ಯಕ್ಟೀವ್ ಆಗಿದ್ದಾರೆ. ಜಿಲ್ಲೆಗೆ ಭೇಟಿ ಕೊಟ್ಟಿದ್ದ ಸಚಿವ ಆರ್ ಅಶೋಕ್ ಜೆಡಿಎಸ್ ಪಕ್ಷವನ್ನ ಕುಹಕವಾಡಿದ್ದಾರೆ. ಜೆಡಿಎಸ್ ಪಕ್ಷ ಕಾಣೆಯಾಗಿದೆ ಎಂದಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಆರ್ ಅಶೋಕ್, ಇನ್ಮುಂದೆ ಏನಿದ್ರು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ನಡುವೆ ಮಾತ್ರ ಪೈಪೋಟಿ ನಡೆಯಲಿದೆ. ಜೆಡಿಎಸ್ ಇನ್ನು ಅಭ್ಯರ್ಥಿಯನ್ನೇ ಘೋಷಣೆ ಮಾಡಿಲ್ಲ. ಆ ಪಕ್ಷವೊಂದು ಕಾಣೆಯಾಗಿದೆ ಎಂದಿದ್ದಾರೆ.
ರೈತರ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷವನ್ನ ರೈತರು ಸೇರಿಸಿಕೊಳ್ಳಲಿಲ್ಲ. ಕಾಯ್ದೆ ವಾಪಾಸ್ ತೆಗೆದುಕೊಂಡಾಗ ಕಾಂಗ್ರೆಸ್ ನವರು ಗಜ್ಜೆ ಕಟ್ಟಿಕೊಂಡು ಕುಣಿದಿದ್ದಾರೆ. ಕಾಂಗ್ರೆಸ್ ಪಕ್ಷ ಸಂಭ್ರಮಾಚರಣೆ ಮಾಡುವ ಅವಶ್ಯಕತೆ ಇಲ್ಲ. ಅಲ್ಪಸಂಖ್ಯಾತರನ್ನ ಒಲೈಸಲು ಸಿದ್ದರಾಮಯ್ಯ ಶಾದಿ ಭಾಗ್ಯ ಕೊಟ್ಟರು. ಜೊತೆಗೆ ಹಲವು ಭಾಗ್ಯಗಳನ್ನು ಕೊಟ್ಟಿದ್ದೇನೆಂದು ಹೇಳಿದ್ದ ಸಿದ್ದರಾಮಯ್ಯ ರನ್ನ 74 ಸೀಟುಗಳಿಂದಲೂ ಗೆಲ್ಲಿಸಲಿಲ್ಲ. ಕಾಂಗ್ರೆಸ್ ನವರು ಜಾತಿ ರಾಜಕಾರಣ ಮಾಡ್ತಾರೆ ಎಂದು ಆರ್ ಅಶೋಕ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.