ಬೆಂಗಳೂರು: ರಾಜ್ಯದಲ್ಲಿ ಸದ್ಯ ಮಳೆ ಆರಂಭವಾಗಿದೆ. ಮುಂಗಾರು, ಹಿಂಗಾರು ಕೈಕೊಟ್ಟರು ಬೆಳೆ ಕೈಗೆ ಬರುವ ಸಮಯದಲ್ಲಿ ಮಳೆರಾಯ ಧರೆಗಿಳಿಯುತ್ತಿದ್ದಾನೆ. ನಿನ್ನೆ ರಾಜ್ಯದ ಹಲವೆಡೆ ಜೋರು ಮಳೆಯಾಗಿದೆ. ಈ ಮಳೆ ನವೆಂಬರ್ 13ರ ತನಕ ಸುರಿಯಲಿದ್ದು, ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾತ್ರಿ ಬೆಂಗಳೂರು ನಗರ ಸೇರಿದಂತೆ ಸುತ್ತಮುತ್ತಲೆಲ್ಲ ಸುಮಾರು ನಾಲ್ಕು ಗಂಟೆಗಳ ಕಾಲ ಮಳೆ ಸುರಿದಿದೆ. ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.
ಕರ್ನಾಟಕದ ಬಹುತೇಕ ಕಡೆಯಲ್ಲಿ ವರುಣರಾಯ ಅಬ್ಬರಿಸಿದ್ದು, ಮುಂದಿನ ಐದು ದಿನಗಳಲ್ಲಿ ಇನ್ನು ಹೆಚ್ಚಿನ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 13 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.