ಬೆಂಗಳೂರು: ಇತ್ತಿಚೆಗಂತು ಕಾಂಗ್ರೆಸ್ ತೊರೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಶಾಕಿಂಗ್ ಎನಿಸುವಂತೆ ಮುದ್ದಹನುಮೇಗೌಡ ಕಾಂಗ್ರೆಸ್ ತೊರೆದಿದ್ದಾರೆ. ಬಹಳ ವರ್ಷಗಳಿಂದಲೂ ಮುದ್ದಹನುಮೇಗೌಡ ಅವರು ಕಾಂಗ್ರೆಸ್ ನಿಂದ ಗುರುತಿಸಿಕೊಂಡವರು. ತುಮಕೂರಿನಲ್ಲಿ ಅವರದ್ದೇ ಆದ ಬೆಂಬಲಿಗರ ಬಳಗವಿದೆ. ಕಾರ್ಯಕರ್ತರಿದ್ದಾರೆ. ಇದೀಗ ಮುದ್ದಹನುಮೇಗೌಡ ಕಾಂಗ್ರೆಸ್ ತೊರೆದಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.
ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಮಾಜಿ ಸಂಸದ, ಹಿರಿಯ ನಾಯಕ ಮುದ್ದಹನುಮೇಗೌಡ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ನ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ಚಟುವಟಿಕೆಗಳ ಬಗ್ಗೆ ಮುದ್ದಹನುಮೇಗೌಡ ಅವರು ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೂ ಪತ್ರ ಬರೆದಿದ್ದು, ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ದಯವಿಟ್ಟು ಅಂಗೀಕರಿಸಿ ಎಂಸು ಪತ್ರದಲ್ಲಿ ಮನವಿ ಮಾಡಿದ್ದಾರೆ.
ತುಮಕೂರಿನಲ್ಲಿ ಗುರುತಿಸಿಕೊಂಡಿರುವ ಮುದ್ದಹನುಮೇಗೌಡ ಅವರು ವಿಧಾನಸಭೆಯ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ನೀಡಲು ಕೆಪಿಸಿಸಿ ಅಧ್ಯಕ್ಷರು ನಿರಾಕರಿಸಿದ್ದರು ಎನ್ನಲಾಗಿದೆ. ಇದೇ ವಿಚಾರಕ್ಕೆ ಮುದ್ದಹನುಮೇಗೌಡ ಅವರು ಕಾಂಗ್ರೆಸ್ ಬಿಡುವ ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದೆ. ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಕ್ ನೀಡಿದ್ದಾರೆ.