ನವದೆಹಲಿ : ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಸಂಕಷ್ಟದ ಕಾಲವನ್ನು ಎದುರಿಸುತ್ತಿದೆ. ಇತ್ತೀಚೆಗೆ ಹಿರಿಯ ನಾಯಕರು ಒಬ್ಬೊಬ್ಬರಾಗಿ ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಿದ್ದಾರೆ. ಇತ್ತೀಚೆಗೆ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಕೂಡ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಈ ಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ನಾಯಕತ್ವದ ಧೋರಣೆ ಟೀಕೆಗೆ ಗುರಿಯಾಗಿದೆ.ಈ ಎಲ್ಲಾ ಬೆಳವಣಿಗೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆ ಅಕ್ಟೋಬರ್ 17ರಂದು ನಡೆಯಲಿದ್ದು ಭಾರೀ ಕುತೂಹಲ ಕೆರಳಿಸಿದೆ. ಐವರು ಕಾಂಗ್ರೆಸ್ ಸಂಸದರು ಎಐಸಿಸಿ ಚುನಾವಣಾ ಮುಖ್ಯಸ್ಥ ಮಧುಸೂಧನ್ ಮಿಸ್ತ್ರಿ ಅವರಿಗೆ ಪತ್ರ ಬರೆದಿರುವುದು ರಾಜಕೀಯವಾಗಿ ಬಾರಿ ಚರ್ಚೆಗೆ ಗ್ರಾಸವಾಗಿದೆ. ಆದರೆ, ಕಾಂಗ್ರೆಸ್ ಪಕ್ಷದ ಲೋಕಸಭಾ ಸಂಸದರಾದ ಶಶಿತರೂರ್, ಮನೀಶ್ ತಿವಾರಿ, ಕಾರ್ತಿ ಚಿದಂಬರಂ, ಪ್ರದ್ಯುತ್ ಬೋರ್ದೊಲೈ, ಅಬ್ದುಲ್ ಖಾಲಿಕ್ ಅವರು ಪಕ್ಷದ ಅಧ್ಯಕ್ಷರ ಆಯ್ಕೆಯನ್ನು ಪಾರದರ್ಶಕವಾಗಿ ನಡೆಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಚುನಾವಣಾ ವಿಷಯವಾಗಿ ತಪ್ಪು ಮಾಹಿತಿ ನೀಡುತ್ತಿರುವುದು ದುರದೃಷ್ಟಕರ ಎಂದು ಸಂಸದರು ಪತ್ರದಲ್ಲಿ ತಿಳಿಸಿದ್ದಾರೆ. ಪಕ್ಷದ ಅಧ್ಯಕ್ಷರ ಆಯ್ಕೆಯಲ್ಲಿ ಭಾಗವಹಿಸುವ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರತಿನಿಧಿಗಳನ್ನು ಒಳಗೊಂಡಿರುವ ಚುನಾವಣಾ ಸಂಹಿತೆ ಬಿಡುಗಡೆ ಮಾಡುವಂತೆ ಸಂಸದರು ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ. ಅವರದೇ ಪಕ್ಷದ ನಾಯಕರೇ ಇಂತಹ ಪತ್ರ ಬರೆದಿರುವ ಕಾರಣ ಕಾಂಗ್ರೆಸ್ ನಾಯಕಿ ಸೋನಿಯಾ ಮತ್ತೊಮ್ಮೆ ಶಾಕ್ ನೀಡಿದ್ದಾರೆ.