Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎನ್‍ಎಸ್‍ಎಸ್ ಶಿಬಿರಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಮಾಡುವ ತರಬೇತಿ ಕೇಂದ್ರಗಳು : ಡಿ.ವೈಎಸ್.ಪಿ. ರಾಜಣ್ಣ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ

ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ,ಅಕ್ಟೋಬರ್.26 : ಮಹಾತ್ಮ ಗಾಂಧಿ ಅವರ ಕನಸಿನ ಕೂಸಾದ ಎನ್‍ಎಸ್‍ಎಸ್ ಶಿಬಿರದಿಂದ ವಿದ್ಯಾರ್ಥಿಗಳಿಗೆ ಅನೇಕ ಪ್ರಯೋಜನ ಸಿಯಗಲಿದ್ದು, ಸೇವಾ ಮನೋಭಾವ ಬೆಳೆಸುವ ಸುಗಮ ದಾರಿಯಾಗಿದೆ ಎಂದು ಚಳ್ಳಕೆರೆ ಡಿ ವೈಎಸ್ ಪಿ  ಟಿಬಿ. ರಾಜಣ್ಣ ಹೇಳಿದರು.

ತಾಲೂಕಿನ ದೊಡ್ಡೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಡಿ ಉಪ್ಪಾರಟ್ಟಿ ಗ್ರಾಮದಲ್ಲಿ ಚಳ್ಳಕೆರೆ ಪದವಿ ಪೂರ್ವ ಕಾಲೇಜು ಎನ್ ಎಸ್ ಎಸ್  ಶಿಬಿರ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಎನ್ ಎಸ್ ಎಸ್ ಶಿಬಿರಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಸ್ತು, ಸಂಯಮ, ಕಾರ್ಯಪ್ರವೃತ್ತತೆ ಬಗ್ಗೆ ವಿವೇಚನೆ ಮೂಡಿಸುವದೇ ಎನ್ ಎಸ್.ಎಸ್ ಮುಖ್ಯ ಉದ್ದೇಶವಾಗಿದೆ.

ಪ್ರಸ್ತುತ ಸಂದರ್ಭಗಳಲ್ಲಿ ವಿದ್ಯಾರ್ಥಿಗಳಿಗೆ ಸಾಮಾಜಿಕ ಕಳಕಳಿ, ಸೌಹಾರ್ದತೆ, ಪರಸ್ಪರ ಅರ್ಥೈಸಿಕೊಳ್ಳುವುದು, ಗೌರವಿಸುವುದು ಮುಂತಾದ ಮೌಲ್ಯಗಳನ್ನು ತಿಳಿಸಿಕೊಡುವ ಅಗತ್ಯವಿದೆ. ಎನ್.ಎಸ್.ಎಸ್. ಶಿಬಿರಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಮಾಡುವ ತರಬೇತಿ ಕೇಂದ್ರಗಳಾಗಿವೆ ಇಂತಹ ಶಿಬಿರಗಳು ಕಾಲೇಜ್ ವತಿಯಿಂದ ನಡೆಯುತ್ತಿದ್ದಾರೆ ಗ್ರಾಮೀಣ ಭಾಗದ ಸಮಸ್ಯೆಗಳು ಹಾಗೂ ಗ್ರಾಮೀಣ ಸ್ವಚ್ಛತೆಗೆ ಆದ್ಯತೆ ನೀಡಿದಂತಾಗುತ್ತದೆ. ಅಷ್ಟೇ ಅಲ್ಲದೆ ವಿದ್ಯಾರ್ಥಿಗಳಲ್ಲಿನ ಗ್ರಾಮೀಣ ಭಾಗದ ಸಾಕಷ್ಟು ವಿಷಯಗಳು ತಿಳಿಯುತ್ತದೆ ಎಂದರು.

ಕಾಲೇಜಿನ ಪ್ರಾಂಶುಪಾಲ  ರವೀಶ್ ಕುಮಾರ್ ಮಾತನಾಡಿ ಎನ್ಎಸ್ಎಸ್ ಸಿದ್ದರ ಆ ಯೋಜನೆ ಮಾಡುವುದು ನಮಗಂತೂ ಸಂತಸದ ವಿಚಾರ ನಮ್ಮ ಶಾಲೆ ಶಿಬಿರದಿಂದ ಪ್ರಶಸ್ತಿ ಪಡೆದಿರುವುದು ಸಂತಸ ತಂದಿದೆ. ಕಳೆದ ವರ್ಷ ದೊಡ್ಡೇರಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಿಬಿರಕ್ಕೆ ಪ್ರಶಸ್ತಿ ಲಭಿಸಿದೆ. ಮುಂದಿನ ದಿನಗಳಲ್ಲೂ ಸಹಾಯತ ಶಿಬಿರ ಆಯೋಜನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ಎನ್ಎಸ್ಎಸ್ ಶಿಬಿರದ ಘಟಕ ಅಧಿಕಾರಿ  ಶಾಂತ ಕುಮಾರಿ ಮಾತನಾಡಿ. ಪ್ರತಿ ಶಿಬಿರ ಆಯೋಜನೆ ಮಾಡಿದಾಗಲೂ ನಮಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಗ್ರಾಮ ಪಂಚಾಯತಿ ಸದಸ್ಯರು ಹಾಗೂ ನಮ್ಮ ಕಾಲೇಜಿನ ಪ್ರಾಂಶುಪಾಲರು ನಮಗೆ ಉತ್ತಮವಾದ ಮಾರ್ಗದರ್ಶನ ಜೊತೆಗೆ ಅನುಕೂಲ ಮಾಡಿಕೊಡುತ್ತಿದ್ದು ಇಂತಹ ಶಿಬಿರ ಮಾಡಲು ನಮಗೆ ಸಂತಸ ತಂದಿದೆ ಅಷ್ಟೇ ಅಲ್ಲದೆ ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಷ್ಟ್ರೀಯ ಸೇವಾ ಯೋಜನೆ ಕೋಶ 20 21-22ನೇ ಸಾಲಿನಲ್ಲಿ ಎನ್ಎಸ್ಎಸ್ ರಾಜ್ಯ ಪ್ರಶಸ್ತಿ ರಾಜ್ಯ ಪ್ರಶಸ್ತಿ ಲಭಿಸಿರುವುದು ಸಂತಸ ತಂದಿದೆ ಶಿಬಿರ ಮಾಡಲು ಸಹಕಾರ ನೀಡುತ್ತಿರುವ ಎಲ್ಲರಿಗೂ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಈ ಶಿಬಿರ ಕಾರ್ಯಕ್ರಮದಲ್ಲಿ ದೊಡ್ಡೇರಿ ಗ್ರಾಮ ಪಂಚಾಯತಿ ಅಧ್ಯಕ್ಷ ವೆಂಕಟೇಶ್. ಗ್ರಾಮ ಪಂಚಾಯತಿ ಸದಸ್ಯರಾದ ಸೇರಿಕೊಂಡಪ್ಪ ಶಿವಣ್ಣ ಶಿಲ್ಪ ವೆಂಕಟೇಶ್, ಜಿಕೆ ವೀರಣ್ಣ ಗುಂಡಪ್ಪ ಹಾಗೂ ಉಪನ್ಯಾಸಕರದ ವಸಂತ್ ವೀರಣ್ಣ ಶಾಲೆ ಮುಖ್ಯ ಶಿಕ್ಷಕಿ ಚಾರುಮತಿ ಹಾಗೂ ಶಿಬಿರಾರ್ಥಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೂರನೇ ಬಾರಿಗೆ ಸೋತ ನಿಖಿಲ್ ಕುಮಾರಸ್ವಾಮಿ…!

ಸುದ್ದಿಒನ್ | ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ಜೊತೆಗೆ ದೇಶಾದ್ಯಂತ ವಿವಿಧ ರಾಜ್ಯಗಳ 48 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಿತು. ಕರ್ನಾಟಕದಲ್ಲಿ ಮೂರು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸಂಡೂರು ಕ್ಷೇತ್ರದಿಂದ ಅನ್ನಪೂರ್ಣ

ಮಹಾರಾಷ್ಟ್ರದಲ್ಲಿ ಯಾರಾಗಲಿದ್ದಾರೆ ನೂತನ ಸಿಎಂ ?

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹಾಗಾದರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್ ಪ್ರತಿಕ್ರಿಯಿಸಿದ್ದಾರೆ. ದೇವೇಂದ್ರ ಫಡ್ನವೀಸ್

ಸಿಎಂ ಸಿದ್ದರಾಮಯ್ಯ ಅವರ ಪ್ರಚಾರದಿಂದ ಗೆಲುವು : ಬಿಜೆಪಿ ಸೋಲಿನ ಬಗ್ಗೆ ಜನಾರ್ದನ ರೆಡ್ಡಿ ಫಸ್ಟ್ ರಿಯಾಕ್ಷನ್

ಬಳ್ಳಾರಿ: ಇಂದು ಸಂಡೂರು ವಿಧಾನಸಭಾ ಕ್ಷೇತ್ರದಲ್ಲೂ ಫಲಿತಾಂಶ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪುರ್ಣ ತುಕರಾಂ ಗೆಲುವು ಸಾಧಿಸಿದ್ದಾರೆ. ಸಂಜೆ ವೇಳೆಗೆ ಅಧಿಕೃತ ಅನೌನ್ಸ್ ಆಗಲಿದೆ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದಕ್ಕಾಗಿ ಜನಾರ್ದನ ರೆಡ್ಡಿ ಅವರು ಸಾಕಷ್ಟು

error: Content is protected !!