Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಿಲ್ಲೆಯ ಸಾಂಸ್ಕೃತಿಕ ವೈಭವ ಸಾರುವ ನಿಟ್ಟಿನಲ್ಲಿ ಒನಕೆ ಓಬವ್ವ ಜಯಂತಿ ಆಚರಣೆ : ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ

Facebook
Twitter
Telegram
WhatsApp

ಮಾಹಿತಿ ಮತ್ತು ಫೋಟೋ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಅ.29) : ರಾಜ್ಯ ಮಟ್ಟದ ಒನಕೆ ಓಬವ್ವ ಜಯಂತಿಯನ್ನು ಚಿತ್ರದುರ್ಗ ನಗರದಲ್ಲಿ ಏರ್ಪಡಿಸಲು ಸರ್ಕಾರದಿಂದ ತೀರ್ಮಾನಿಸಲಾಗಿದೆ. ಜಿಲ್ಲೆಯ ಸಾಂಸ್ಕøತಿಕ ವೈಭವ ಹಾಗೂ ಓಬವ್ವನ ಸಾಹಸ ತ್ಯಾಗ ಬಲಿದಾನಗಳನ್ನು ನಾಡಿಗೆ ಸಾರುವ ನಿಟ್ಟಿನಲ್ಲಿ, ಅದ್ಧೂರಿಯಾಗಿ ಜಯಂತಿಯನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ರಾಜ್ಯ ಮಟ್ಟದ ವೀರವನಿತೆ ಓನಕೆ ಓಬವ್ವ ಜಯಂತಿ ಆಚರಣೆ ಕುರಿತು ಜರುಗಿದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನವೆಂಬರ್ 27 ರಂದು ನಗರಕ್ಕೆ ಆಗಮಿಸಲಿದ್ದಾರೆ. ಅಂದು ಅದ್ಧೂರಿಯಾಗಿ ರಾಜ್ಯ ಮಟ್ಟದ ಓಬವ್ವ ಜಯಂತಿ ಕಾರ್ಯಕ್ರಮ ಆಯೋಜನೆ ಮಾಡುವಂತೆ ಸಮುದಾಯದ ಮುಖಂಡರು ಮನವಿ ಮಾಡಿದ್ದಾರೆ. ಸರ್ಕಾರದ  ಆದೇಶದಂತೆ ನವೆಂಬರ್ 11 ರಂದು ಜಿಲ್ಲಾಡಳಿತದಿಂದ ಸಾಂಕೇತಿಕವಾಗಿ ಓಬವ್ವ ಜಯಂತಿ ಆಚರಣೆ ಮಾಡಿ ಓಬವ್ವನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಗುವುದು.

ನವೆಂಬರ್ 27 ರಂದು ನಗರದ ವಿಜ್ಞಾನ ಕಾಲೇಜು ಆವರಣದಲ್ಲಿ ರಾಜ್ಯ ಮಟ್ಟದ ಜಯಂತಿ ಕಾರ್ಯಕ್ರಮ ಆಯೋಜಿಸಲಾಗುವುದು. ಅಂದು ಓಬವ್ವನ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಜಿಲ್ಲೆಯ ಸಾಂಸ್ಕøತಿಕ ಮಹತ್ವ ಸಾರುವ ಕಲಾ ಪ್ರಕಾರಗಳಿಗೆ ಅವಕಾಶ ಕಲ್ಪಸಿಕೊಡಲಾಗುವುದು. ಜಯಂತಿ ನಿಮಿತ್ತ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ಐತಿಹಾಸಿ ಯುದ್ಧದಲ್ಲಿ ಚಿತ್ರದುರ್ಗ ಕೋಟೆಯನ್ನು ಶತ್ರುಗಳೊಂದಿಗೆ ಕಾದಾಡಿ ಕೋಟೆ ರಕ್ಷಿಸಿ ವೀರಮರಣ ಅಪ್ಪಿದ ಓಬವ್ವನ ಸ್ಮಾರಕವನ್ನು ಕೋಟೆಯಲ್ಲಿ ನಿರ್ಮಿಸಲಾಗಿದೆ. ಈ ಸ್ಮಾರಕ್ಕೆ ಜಯಂತಿಯಂದು ಗಣ್ಯರು ನಮನ ಸಲ್ಲಿಸಲಿದ್ದಾರೆ. ಸ್ಮಾರಕದ ಬಳಿ ಓಬವ್ವನ ಭಾವಚಿತ್ರ ಇರಿಸಿ, ಪುಷ್ಪಗಳಿಂದ ಅಲಂಕರಿಸಲು ಪುರತತ್ವ ಇಲಾಖೆ ನೀಡುವಂತೆ ಸಮುದಾಯದ ಮುಖಂಡರು ಸಭೆಯಲ್ಲಿ ಕೋರಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ ರೆಡ್ಡಿ, ಜಿ.ಪಂ.ಯೋಜನಾ ನಿರ್ದೇಶಕ ಕೆ.ಎನ್.ಮಹಾಂತೇಶಪ್ಪ, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ, ಸಮುದಾಯದ ಮುಖಂಡರಾದ ಹೆಚ್.ಅಣ್ಣಪ್ಪಸ್ವಾಮಿ, ನಾಗರಾಜ ಕೆ.ಟಿ. ನಲ್ಲಿಕಟ್ಟೆ, ತಿಪ್ಪೇಸ್ವಾಮಿ, ನಿರಂಜನಮೂರ್ತಿ, ದಯಾನಂದ, ರವಿಕುಮಾರ್, ಜಯರಾಮ್, ಸೋಮಶೇಖರ್, ಹುನುಮಂತಪ್ಪ, ಪ್ರಹ್ಲಾದ್, ಪರಮೇಶ್, ಓಬವ್ವನ ವಂಶಸ್ಥರಾದ ಸುರ್ವಣಮ್ಮ ಸೇರಿದಂತೆ ಮತ್ತಿರರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳು ಮನೆ ಬಿಟ್ಟು ಹೋದವರು ಮತ್ತೆ ಒಂದಾಗಬಹುದಾ?

ಈ ರಾಶಿಯ ದಂಪತಿಗಳು ಮನೆ ಬಿಟ್ಟು ಹೋದವರು ಮತ್ತೆ ಒಂದಾಗಬಹುದಾ? ಸೋಮವಾರ- ರಾಶಿ ಭವಿಷ್ಯ ಅಕ್ಟೋಬರ್-21,2024 ಸೂರ್ಯೋದಯ: 06:14, ಸೂರ್ಯಾಸ್ತ : 05:46 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ

ಚಿತ್ರದುರ್ಗ | ಆರೋಗ್ಯ ಇಲಾಖೆಯ ನೌಕರ ಅವಿನಾಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ತಾಲ್ಲೂಕಿನ ಹಾಯ್ಕಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಅವಿನಾಶ್ (43 ವರ್ಷ) ಇಂದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಶುಕ್ರವಾರ ದ್ವಿಚಕ್ರ ವಾಹನದಲ್ಲಿ

ಚಿತ್ರದುರ್ಗ | ಬ್ರಹ್ಮಶ್ರಿ ನಾರಾಯಣ ಗುರುಗಳ 170 ನೇ ಜಯಂತಿ ಆಚರಣೆ : ಸಚಿವ ಸುಧಾಕರ್ ಸೇರಿದಂತೆ ಗಣ್ಯರು ಭಾಗಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ಹಿಂದಿನಿಂದಲೂ ಈಡಿಗರ ಸಮುದಾಯದ ಜೊತೆ ನಮ್ಮ ಕುಟುಂಬ ಉತ್ತಮ ಬಾಂಧವ್ಯವಿಟ್ಟುಕೊಂಡಿದೆ. ನನ್ನ

error: Content is protected !!