ದಾವಣಗೆರೆ : ಇದು ಜಾತ್ರೆಗಳ ಸಮಯ. ದಾವಣಗೆರೆ ಜಿಲ್ಲೆಯಲ್ಲೂ ಜಾತ್ರೆಗಳು ಶಯರುವಾಗಿವೆ. ಅದರಲ್ಲೂ ಮೂರು ವರ್ಷಗಳಿಗೊಮ್ಮೆ ನಡೆಯುವ ಜಾತ್ರಾ ಮಹೋತ್ಸವ ಶುರುವಾಗಿದೆ. ಎರಡು ವರ್ಷಗಳಿಗೊಮ್ಮೆ ನಡೆಯುವ ಈ ಜಾತ್ರಾ ಮಹೋತ್ಸವ ಇದೇ ತಿಂಗಳ ಮಾರ್ಚ್ 27 ರಿಂದ 30 ರವರೆಗೆ ಅದ್ದೂರಿಯಾಗಿ ಜರುಗಲಿದೆ. ಈಗಾಗಲೇ ಈ ಜಾತ್ರಾ ಮಹೋತ್ಸವಕ್ಕೆ ಎಲ್ಲಾ ರೀತಿಯಾ ಸಿದ್ಧತೆಗಳು ನಡೆದಿವೆ.
ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಈ ಜಾತ್ರೆಗೆ ಸೇರಲಿದ್ದಾರೆ. ಹೀಗಾಗಿ ಮೂಲಭೂತ ಸೌಕರ್ಯವನ್ನು ಕಲ್ಪಿಸಬೇಕಾಗುತ್ತದೆ. ಈ ಸಂಬಂಧ ಶಾಸಕ ಹಾಗೂ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಜಾತ್ರೆಯ ಸಮಯದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಬರುತ್ತಾರೆ. ಸಂಚಾರ, ನೀರಿನ ವ್ಯವಸ್ಥೆ, ಬಂದೋಬಸ್ತ್, ವಿದ್ಯುತ್ ಪೂರೈಕೆ, ಶೌಚಾಲಯ ಸೇರಿದಂತೆ ಜಾತ್ರೆಗೆ ಬೇಕಾದ ಎಲ್ಲಾ ನೆರವು ನೀಡಲು ಮನವಿ ಮಾಡಲಾಗಿದೆ. ಜಾತ್ರೆಯನ್ನು ಸರ್ಕಾರ ಹೇಳಿದ ರೀತಿ ಮಾಡಲಾಗುತ್ತದೆ. ಪ್ರಾಣಿ ಬಲಿ ನೀಡದೆ, ಮೌಢ್ಯಾಚಾರಣೆ ಮಾಡದೆ, ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡುವ ಮೂಲಕ ನಗರ ದೇವತೆ ಜಾತ್ರೆಯನ್ನು ಯಶಸ್ವಿಯಾಗಿ ನಡೆಸಬೇಕು ಎಂದಿದ್ದಾರೆ.
ಇದೆ ವೇಳೆ ಪಾಲಿಕೆ ಆಯುಕ್ತರು ಮಾತನಾಡಿ, ಪಾಲಿಕೆಯಿಂದ ಸ್ವಚ್ಛತೆಗೆ ಸಿಬ್ಬಂದಿಯನ್ನು ನೇಮಿಸಲಾಗುತ್ತಿದೆ. ಇಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚಲು ಸೂಚನೆ ನೀಡಲಾಗುತ್ತದೆ. ಈ ಭಾಗದಲ್ಲಿ 40 ದೇವಸ್ಥಾನಗಳ ಬಣ್ಣವನ್ನು ಬಳಿಯಲು ಪಾಲಿಕೆಯಿಂದ ಎರಡು ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಜಾತ್ರೆಯಲ್ಲಿ ಹೆಚ್ವು ಜನರು ಭಾಗವಹಿಸುವ ಕಾರಣ ರಾತ್ರಿ ವೇಳೆ ವಿದ್ಯುತ್ ಪೂರೈಕೆ ಮಾಡಬೇಕು ಎಂದಿದ್ದಾರೆ.