ಬೆಂಗಳೂರು: ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ಮ ಘೋಷಣೆ ಮಾಡಿದ್ದಂತ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಐದು ಗ್ಯಾರಂಟಿಗಳನ್ನು ಯಾವಾಗಿಂದ ಜಾರಿಗೆ ಬರಲಿದೆ ಎಂಬುದರ ಬಗ್ಗೆ ಮಾಹಿತಿ ನೀಡಲಾಗಿದೆ. ಅದರಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಜೂನ್ 11ರಿಂದ ಜಾರಿಗೆ ತರಲಾಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಬಸ್ ಮಾಲೀಕರು ಸರ್ಕಾರಕ್ಕೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.
ಲಕ್ಷುರಿ ಬಸ್ ಮತ್ತು ಸೆಮಿ ಲಕ್ಷುರಿ ಬಸ್ ಹೊರತುಪಡಿಸಿ, ಇನ್ನುಳಿದ ಎಲ್ಲಾ ಬಸ್ ಗಳಲ್ಲೂ ಉಚಿತ ಪ್ರಯಾಣ ಮಾಡಬಹುದು. ಆದರೆ 12 ಸಾವಿರ ನಾರ್ಮಲ್ ಸರ್ಕಾರಿ ಬಸ್ ಗಳು ಸದ್ಯಕ್ಕೆ ಲಭ್ಯವಿದೆ. ಇಷ್ಟು ಬಸ್ ಗಳಿಂದ ಸರ್ಕಾರಕ್ಕೆ ಸಂಪೂರ್ಣವಾಗಿ ಸೇವೆ ಒದಗಿಸುವುದಕ್ಕೆ ಸಾಧ್ಯವಿಲ್ಲ. ಪ್ರತಿದಿನ ಹೆಚ್ಚಿನದಾಗಿ ಮಹಿಳೆಯರು ಕೂಡ ಪ್ರಯಾಣ ಮಾಡುತ್ತಾರೆ. ಹೀಗಾಗಿ ಯಶಸ್ವಿಯಾಗಿ ಈ ಯೋಜನೆಯನ್ನು ಜಾರಿಗೆ ತರುವುದಕ್ಕೆ ಆಗಲ್ಲ.
ಜೊತೆಗೆ ಗ್ರಾಮೀಣ ಭಾಗದಲ್ಲಿ ಹೆಚ್ಚಿನದಾಗಿ ಸರ್ಕಾರಿ ಬಸ್ ಸಂಚಾರ ಮಾಡಲ್ಲ. ಎಷ್ಟೋ ಹಳ್ಳಿಗಳಿಗೆ ಸರ್ಕಾರಿ ಬಸ್ ಹೋಗಲ್ಲ. ಇದರಿಂದಾಗಿ ಖಾಸಗಿ ಬಸ್ ಗಳ ಸಹಾಯದೊಂದಿಗೆ ನಿಮ್ಮ ಯೋಜನೆಯನ್ನು ಯಶಸ್ವಿಯಾಗುವಂತೆ ಮಾಡಿಕೊಳ್ಳಿ ಎಂದು ಖಾಸಗಿ ಬಸ್ ಫೆಡರೇಷನ್, ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.