ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಅವರ ತಾಯಿ ಭವಾನಿ ರೇವಣ್ಣ ಅವರ ಮೇಲೆ ಕಾರು ಚಾಲಕನ ಕಿಡ್ನ್ಯಾಪ್ ಆರೋಪ ಕೇಳಿ ಬಂದಿದೆ. ಈ ಸಂಬಂಧ ದಕ್ಷಿಣ ವಲಯ ಐಜಿಪಿಗೆ ದೂರು ನೀಡಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಕಾರ್ತಿಕ್ ಎಂಬುವವರು ಈ ದೂರು ನೀಡಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಜೊತೆಗೆ ಈ ಕಾರ್ತಿಕ್ ಎಂಬುವವರು ದಶಕಗಳ ಕಾಲ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದರಂತೆ. ಹೊಳೆನರಸೀಪುರ ತಾಲೂಕಿನಲ್ಲಿ 13 ಎಕರೆ ಭೂಮಿ ಇದೆಯಂತೆ. ಇದನ್ನು ಮಾರಾಟ ಮಾಡುವಂತೆ ಒತ್ತಾಯಿಸಿ, ತನ್ನ ಹಾಗೂ ತನ್ನ ಪತ್ನಿಯನ್ನು ಕಿಡ್ನ್ಯಾಪ್ ಮಾಡಿ, ಚಿತ್ರಹಿಂಸೆ ನೀಡಿದ್ದಾರೆ ಎಂದು ಕಾರು ಚಾಲಕ ಕಾರ್ತಿಕ್ ಆರೋಪ ಮಾಡಿ, ದೂರು ನೀಡಿದ್ದಾರೆ.
2023 ರ ಮಾರ್ಚ್ 12 ರಂದು ಕಿಡ್ನಾಪ್ ಮಾಡಿದ್ದು, ಏಪ್ರಿಲ್ ತಿಂಗಳಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಸಹಿತ ಇನ್ನಿತರ ದಾಖಲೆಗಳನ್ನು ಪೊಲೀಸರಿಗೆ ನೀಡಿದ್ದರು. ಬಲವಂತವಾಗಿ ಕರೆದೊಯ್ದು ನನ್ನ 13 ಎಕರೆ ಭೂಮಿಯನ್ನು ಬೇರೆಯವರ ಹೆಸರಿಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.