ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು ಹಲವು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಭ್ರಷ್ಟಾಚಾರ ಆರೋಪ ಕೇಳಿ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆಯೇ ಶಾಕ್ ನೀಡಿದ್ದಾರೆ. ನಾಲ್ವರು ಅಧಿಕಾರಿಗಳ ಮನೆ ಹಾಗೂ ಸಂಬಂಧ ಪಟ್ಟ ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಟೌನ್ ಅಂಡ್ ಪ್ಲಾನಿಂಗ್ ಡೈರೆಕ್ಟರ್ ತಿಪ್ಪೇಸ್ವಾಮಿ ನಿವಾಸದ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲ ಗಿರಿನಗರದ 4ನೇ ಫೇಸ್ ವಿಶ್ವೇಶ್ವರಯ್ಯ ರಸ್ತೆ ಬಳಿ ಇರುವ ಬಂಗಲೆ ಮೇಲೆ ಎಸ್.ಪಿ.ಶ್ರೀನಾಥ್ ಜೋಷಿ ನೇತೃತ್ವದಲ್ಲಿ ಅಧಿಕಾರಿಗಲಕ ತಂಡ ದಾಳಿ ನಡೆಸಿದೆ.
ಬೆಳಗ್ಗೆ 7 ಗಂಟೆಗೇನೆ ದಾಳಿ ನಡೆಸಿದ್ದಾರೆ. ಈ ವೇಳೆ ಸಿಕ್ಕ ಅಪಾರ ಪ್ರಮಾಣದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಮನೆಯಲ್ಲೆಲ್ಲಾ ಪರಿಶೀಲನೆ ನಡೆಸಿದ್ದು, ಬೆಂಗಳೂರು ಟೌನ್ ಅಂಡ್ ಪ್ಲಾನಿಂಗ್ ಡೈರೆಕ್ಟರ್ ತಿಪ್ಪೇಸ್ವಾಮಿ ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿದೆ. ಸ್ಥಳಕ್ಕೆ ಅಕ್ಕ ಸಾಲಿಗರನ್ನು ಕರೆಸಿ ಎಲ್ಲವನ್ನು ಪರಿಶೀಲನೆ ಮಾಡಿದ್ದಾರೆ.
ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಇರುವಾಗಲೇ ತಿಪ್ಪೇಸ್ವಾಮಿ ಅವರ ಮಗಳು ಕಾಲೇಜಿಗೆ ಹೊರಟಿದ್ದರು. ಅವರ ಸ್ಕೂಟರ್ ರೀಡಿಂಗ್ ಮೀಟರ್, ಬ್ಯಾಗ್ವೆಲ್ಲವನ್ನು ಪರಿಶೀಲನೆ ಮಾಡಿ ಅಧಿಕಾರಿಗಳು ಕಳುಹಿಸಿದ್ದಾರೆ. ಇಂದು ಬೆಳಗ್ಗೆಯಿಂದಾನೇ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿರುವ ಲೋಕಾಯುಕ್ತ ಅಧಿಕಾರಿಗಳು, ಚಿಕ್ಕಬಳ್ಳಾಪುರದಲ್ಲಿ ಭೂ ಹಾಗೂ ಗಣಿ ವಿಜ್ಞಾನದ ಇಲಾಖೆಯ ಕೃಷ್ಣವೇಣಿ ಮನೆ, ಮಂಡ್ಯದಲ್ಲಿ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್, ಬೆಂಗಳೂರಿನ ಅಬಕಾರಿ ಇಲಾಖೆಯ ಎಸ್ ಪಿ ಮಹೇಶ್ ನಿವಾಸ ಹಾಗೂ ಕಚೇರಿ ಮೇಲು ದಾಳಿ ನಡೆಸಿದ್ದಾರೆ.