Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ, ಬೆಳೆ ಹಾಗೂ ಮನೆಗಳಿಗೆ ಹಾನಿಯಾದ ಮಾಹಿತಿ ಇಲ್ಲಿದೆ….!

Facebook
Twitter
Telegram
WhatsApp

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

 

ಚಿತ್ರದುರ್ಗ,(ಮೇ.25) : ಜಿಲ್ಲೆಯಲ್ಲಿ ಬುಧವಾರ ಸುರಿದ ಮಳೆಯ ವಿವರದನ್ವಯ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಬಿ.ದುರ್ಗದಲ್ಲಿ 71.2 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 1.2 ಮಿ.ಮೀ, ಚಿಕ್ಕಜಾಜೂರಿನಲ್ಲಿ 25.8 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಬಾಗೂರು 5.1 ಮಿ.ಮೀ, ಮಾಡದಕೆರೆಯಲ್ಲಿ 5.2 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 29.8 ಮಿ.ಮೀ, ಚಿತ್ರದುರ್ಗ-2ರಲ್ಲಿ 23.6 ಮಿ.ಮೀ, ಭರಮಸಾಗರ 6.4 ಮಿ.ಮೀ, ಸಿರಿಗೆರೆಯಲ್ಲಿ 29.6 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆಯಲ್ಲಿ 5 ಮಿ.ಮೀ ಮಳೆಯಾಗಿದೆ. ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 6.2 ಮಿ.ಮೀ, ನಾಯಕನಹಟ್ಟಿ 26.2 ಮಿ.ಮೀ ಹಾಗೂ ತಳಕು 9.4 ಮಿ.ಮೀ ಮಳೆಯಾಗಿದೆ.

17 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ:
ಮಳೆಯಿಂದಾಗಿ ಜಿಲ್ಲೆಯಾದ್ಯಂತ 17 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ಒಟ್ಟು 13 ಮನೆಗಳಿಗೆ ನೀರುನುಗ್ಗಿರುವ ಪ್ರಕರಣ ವರದಿಯಾಗಿದೆ.

ಜಿಲ್ಲೆಯಲ್ಲಿ ಒಟ್ಟು 6 ಮನೆಗಳು ಭಾಗಶಃ ಹಾನಿ ಹಾಗೂ 2 ಮನೆಗಳು ತೀವ್ರತರ ಹಾನಿಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 4 ಮನೆಗಳು ಭಾಗಶಃ ಹಾನಿ, 1 ಮನೆ ತೀವ್ರತರ ಹಾನಿಯಾಗಿವೆ. 13 ಮನೆಗಳಿಗೆ ನೀರು ನುಗ್ಗಿದ್ದು, 7 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.

ಹಿರಿಯೂರು ತಾಲ್ಲೂಕಿನಲ್ಲಿ 1 ಮನೆ ತೀವ್ರತರ ಹಾನಿಯಾಗಿದ್ದು, 10 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನಲ್ಲಿ 2 ಮನೆಗಳು ಭಾಗಶಃ ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

ರೋಟರಿ ಕ್ಲಬ್‍ನಿಂದ ನಡೆಯುವ ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಳ್ಳಿ : ರೊ.ಕನಕರಾಜ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ‌ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 19  : ಆರೋಗ್ಯಕ್ಕಿಂತ ಮಿಗಿಲಾದ ಸಂಪತ್ತು ಬೇರೊಂದಿಲ್ಲ. ಹಾಗಾಗಿ ಪ್ರತಿಯೊಬ್ಬರು ಆರೋಗ್ಯದ ಕಡೆ ಗಮನ ಕೊಡಬೇಕೆಂದು

ಹಿರಿಯೂರು | ಹೊತ್ತಿ ಉರಿದ ಎರಡು ಲಾರಿಗಳು…!

ಸುದ್ದಿಒನ್, ಹಿರಿಯೂರು, ಮೇ. 19 : ಪ್ರತ್ಯೇಕ ಘಟನೆಯಲ್ಲಿ ನಿಲ್ಲಿಸಿದ್ದ ಎರಡು ಲಾರಿಗಳಲ್ಲಿ ಆಕಸ್ಮಿಕ ಬೆಂಕಿ ಸಂಭವಿಸಿದ್ದು, ಎರಡು ಲಾರಿಯ ಮುಂಭಾಗದಲ್ಲಿ ಸಂಪೂರ್ಣ ಸುಟ್ಟು ಹೋದ ಘಟನೆ ನಡೆದಿದೆ. ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ

error: Content is protected !!