ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಮನಗರ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದೆ. ನಾಳೆಯೇ ಕೋರ್ಟ್ ಗೆ ಹಾಜರಾಗಬೇಕೆಂದು ಸೂಚನೆ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ 29 ಜನರಿಗೆ ರಾಮನಗರ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಮೇಕೆದಾಟು ಯೋಜನೆಗೆ ಒತ್ತಾಯಿಸಿ, ಕಾಂಗ್ರೆಸ್ ನಾಯಕರು ಬೃಹತ್ ಪಾದಯಾತ್ರೆ ನಡೆಸಿದ್ದರು. ಅದು ಮೇಕೆದಾಟುವಿನಿಂದ ಹೊರಟ ಪಾದಯಾತ್ರೆ ಫ್ರೀಡಂ ಪಾರ್ಕ್ ನಲ್ಲಿ ಬಂದು ಸೇರುವ ಯೋಜನೆಯಲ್ಲಿದ್ದರು. ಆದರೆ ಕೊರೊನಾ ನಿಯಮವಿದ್ದ ಕಾರಣ ಬಿಡದಿ ಬಳಿಯೇ ಸ್ಥಗಿತಗೊಂಡಿತ್ತು. ಕೊರೊನಾ ಹೆಚ್ಚಳವಾಗುತ್ತಿದ್ದ ಕಾರಣ, ಹೈಕಮಾಂಡ್ ನಿಂದ ಕೂಡ ಸೂಚನೆ ಸಿಕ್ಕಿತ್ತು. ಪರಿಸ್ಥಿತಿ ನೋಡಿಕೊಂಡು ಮುಂದುವರೆಯಿರಿ ಎಂದು.
ಕೊರೊನಾ ಹೆಚ್ಚಳಕ್ಕೆ ಕಾಂಗ್ರೆಸ್ ಪಾದಯಾತ್ರೆ ಕಾರಣ ಎಂಬ ಆರೋಪ ಬರಬಾರದು ಎಂಬ ಕಾರಣಕ್ಕೆ ಅಂದು ಪಾದಯಾತ್ರೆಯನ್ನು ಅರ್ಧದಲ್ಲಿಯೇ ಸ್ಥಗಿತಗೊಳಿಸಿದ್ದರು. ಎಲ್ಲವೂ ತಹಬದಿಗೆ ಬಂದ ಬಳಿಕ ಮತ್ತೆ ಮೇಕೆದಾಟು ಯೋಜನೆ ಮುಂದುವರೆಸಿದ್ದರು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಮನ್ಸ್ ಜಾರಿಯಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ನಾಳೆ ಸಿದ್ದರಾಮಯ್ಯ ಅವರು ಕೋರ್ಟ್ ಗೆ ಹೋಗುವ ಸಾಧ್ಯತೆ ಇದೆ.