ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 11 : ಮೂವತ್ತು ದಿನಗಳ ಕಾಲ ಒಪ್ಪತ್ತು ಉಪವಾಸವಿದ್ದು, ಗುರುವಾರ ಆಚರಿಸಿದ ಪರಮ ಪವಿತ್ರವಾದ ರಂಜಾನ್ ಹಬ್ಬದಲ್ಲಿ ಮುಸ್ಲಿಂ ಭಾಂಧವರು ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಶ್ವೇತ ವಸ್ತ್ರಧಾರಿಗಳಾಗಿದ್ದ ಮುಸ್ಲಿಂರು ತಲೆ ಮೇಲೆ ಟೋಪಿಗಳನ್ನು ಧರಿಸಿ ಪ್ರಾರ್ಥನೆಯಲ್ಲಿ ತೊಡಗಿದ್ದರೆ ಇನ್ನು ಕೆಲವರು ಕರವಸ್ತ್ರಗಳನ್ನು ತಲೆಗೆ ಸುತ್ತಿಕೊಂಡಿದ್ದರು. ಕೆಲವರು ಮನೆಗಳಿಂದ ಚಾಪೆ, ಜಮಖಾನ ತಂದು ಈದ್ಗಾ ಮೈದಾನದಲ್ಲಿ ಹಾಸಿಕೊಂಡಿದ್ದರು. ಪ್ರಾರ್ಥನೆಯ ನಂತರ ಪರಸ್ಪರರು ಅಪ್ಪಿಕೊಂಡು ರಂಜಾನ್ ಹಬ್ಬದ ಶುಭಾಷಯಗಳನ್ನು ವಿನಿಮಯ ಮಾಡಿಕೊಂಡರು. ದಾವಣಗೆರೆ ರಸ್ತೆಯಲ್ಲಿ ಅಲ್ಲಲ್ಲಿ ಪೊಲೀಸ್ ಬ್ಯಾರಿಕೇಡ್ಗಳನ್ನಿಟ್ಟು ವಾಹನಗಳ ಸಂಚಾರವನ್ನು ನಿಯಂತ್ರಿಸಿದರು.
ಮಾಜಿ ಸಂಸದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ, ಶಾಸಕ ಕೆ.ಸಿ.ವೀರೇಂದ್ರಪಪ್ಪಿ, ಟಿಪ್ಪುಖಾಸಿಂ ಆಲಿ, ಶಂಶೀರ್ಆಲಿ, ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷ ಎಂ.ಸಿ.ಓ. ಬಾಬು, ವಕ್ಫ್ ಬೋರ್ಡ್ ಚೇರ್ಮನ್ ಕೆ.ಅನ್ವರ್ಪಾಷ ಇನ್ನು ಅನೇಕರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.