Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯ 6 ಮತಗಟ್ಟೆಗಳ ಸ್ಥಳ ಹಾಗೂ 34 ಮತಗಟ್ಟೆಗಳ ಹೆಸರು ಪರಿಷ್ಕರಣೆ

Facebook
Twitter
Telegram
WhatsApp

 

ಚಿತ್ರದುರ್ಗ. ಅ.16: ಜಿಲ್ಲೆಯ 6 ಮತಗಟ್ಟೆಗಳ ಸ್ಥಳ ಹಾಗೂ 34 ಮತಗಟ್ಟೆಗಳ ಹೆಸರು ಪರಿಷ್ಕರಣೆಗೆ ಭಾರತ ಚುನಾವಣಾ ಆಯೋಗ ಅನುಮೋದನೆ ನೀಡಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ವಿಶೇಷ ಸಂಕ್ಷಿಪ್ತ ಮತದಾರ ಪಟ್ಟಿ ಪರಿಷ್ಕೃರಣೆ ಕುರಿತು ª ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಸಿ ಅವರು ಮಾತನಾಡಿದರು.

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2025 ಸಂಬಂಧ ಜಿಲ್ಲೆಯ ರ‍್ಯಾಷನಲೈಜೇಷನ್ ಆಫ್ ಪೊಲೀಂಗ್ ಸ್ಟೇಷನ್ ಪಟ್ಟಿ ಪ್ರಕಟಿಸಲಾಗಿದೆ. ಈ ಪಟ್ಟಿಯನ್ನು ಎಲ್ಲಾ ರಾಜಕೀಯ ಪಕ್ಷಗಳ ಏಜಂಟರುಗಳಿಗೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 1661 ಮತಗಟ್ಟೆಗಳು ಇದ್ದು, ಮೊಳಕಾಲ್ಮೂರು ಕ್ಷೇತ್ರದಲ್ಲಿ 285, ಚಳ್ಳಕೆರೆ 260, ಚಿತ್ರದುರ್ಗ 288, ಹಿರಿಯೂರು 287, ಹೊಸದುರ್ಗ 242 ಹಾಗೂ ಹೊಳಲ್ಕೆರೆ 299 ಮತಗಟ್ಟೆಗಳು ಇವೆ. ಈ ಪೈಕಿ ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದಲ್ಲಿ ಮಾತ್ರ 6 ಮತಗಟ್ಟೆಗಳ ಸ್ಥಳ ಬದಲಾವಣೆ ಹಾಗೂ 34 ಮತಗಟ್ಟೆಗಳ ಹೆಸರುಗಳನ್ನು ಸರಿಪಡಿಸಿ ಪ್ರಕಟಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸಭೆಯಲ್ಲಿ ಮಾಹಿತಿ ನೀಡಿದರು.

ಕಾಂಗ್ರೆಸ್ ಪಕ್ಷದ ಡಿ.ಎನ್.ಮೈಲಾರಪ್ಪ, ಜೆಡಿಎಸ್ ಪಕ್ಷದ ಡಿ.ಗೋಪಾಲಸ್ವಾಮಿ ನಾಯಕ, ಸಿಪಿಐ ಪಕ್ಷದ ಗೌಸ್ ಪೀರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂತಾರ-1 ಶೂಟಿಂಗ್ ಮುಗಿಸಿ ಬರುವಾಗ ಅಪಘಾತ : ಹಲವರಿಗೆ ಗಂಭೀರ ಗಾಯ..!

    ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ ಸಿನಿಮಾ ವರ್ಲ್ಡ್ ವೈಡ್ ಹೆಸರು ಮಾಡಿತ್ತು. ಆ ಸಕ್ಸಸ್ ನಡುವೆಯೇ ಪ್ರೀಕ್ವೇಲ್ ಘೋಷಣೆ ಮಾಡಿದ್ದರು. 2025ಕ್ಕೆ ಅನೌನ್ಸ್ ಎಂಬುದನ್ನು ಹೊಂಬಾಳೆ ಈಗಾಗಲೇ ಘೋಷಣೆ ಮಾಡಿದೆ.

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭ : ವಕ್ಫ್-ಮಣಿಪುರ ಹಿಂಸಾಚಾರ ಸೇರಿದಂತೆ ಹಲವು ವಿಚಾರಗಳ ಚರ್ಚೆ…!

  ಸುದ್ದಿಒನ್ | ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ (ಸೋಮವಾರ, ನವೆಂಬರ್ 25) ಆರಂಭವಾಗಲಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಮರಳಿರುವುದು ಮತ್ತು ಜಾರ್ಖಂಡ್‌ನಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷದ ಗೆಲುವು

ರಾಶಿಯವರ ಹಣಕಾಸಿನ ಸಮಸ್ಯೆಯಿಂದಾಗಿ ನೆಮ್ಮದಿಗೆ ಭಂಗ

ರಾಶಿಯವರ ಹಣಕಾಸಿನ ಸಮಸ್ಯೆಯಿಂದಾಗಿ ನೆಮ್ಮದಿಗೆ ಭಂಗ : ಈ ರಾಶಿಯವರ ಕುಟುಂಬದಲ್ಲಿ ಒಬ್ಬರಿಂದ ಅಶಾಂತಿಯ ವಾತಾವರಣ: ಸೋಮವಾರ ರಾಶಿ ಭವಿಷ್ಯ -ನವೆಂಬರ್-25,2024 ಸೂರ್ಯೋದಯ: 06:30, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080

error: Content is protected !!