Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐಪಿಎಸ್ ಅಧಿಕಾರಿ ಡಿ ರೂಪಾ ಅವರಿಗೆ 9 ಪ್ರಶ್ನೆ ಕೇಳಿದ ರೋಹಿಣಿ ಅಭಿಮಾನಿಗಳು..!

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯದ ಉನ್ನತ ಸ್ಥಾನದಲ್ಲಿದ್ದರು ಸೋಷಿಯಲ್ ಮೀಡಿಯಾದಲ್ಲಿ ಐಪಿಎಸ್ ಮತ್ತು ಐಎಎಸ್ ಅಧಿಕಾರಿಯ ಜಟಾಪಟಿ ತಾರಕಕ್ಕೇರಿತ್ತು. ಇದೀಗ ರೋಹಿಣಿ ಸಿಂಧೂರಿಯ ಅಭಿಮಾನಿಗಳು ಟ್ವಿಟ್ಟರ್ ಮೂಲಕ ಪ್ರಶ್ನಿಸಿದ್ದಾರೆ. ಹಾಗೆ ಇದಕ್ಕೂ ರೋಹಿಣಿ ಸಿಂಧೂರಿ ಅವರಿಗೂ ಸಂಬಂಧವಿಲ್ಲ ಎಂದು ಕ್ಲಾರಿಟಿ ಕೊಟ್ಟಿದ್ದಾರೆ. #ಉತ್ತರಕೊಡಿರೂಪಅವ್ರೆ ಎಂಬ ಹ್ಯಾಶ್ ಟ್ಯಾಗ್ ಬಳಸಿದ್ದಾರೆ.

* ರೋಹಿಣಿ ಅಭಿಮಾನಿಗಳ

ಪ್ರಶ್ನೆ 1-ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ #RohiniSindhuri ಅವರದ್ದು ಏನೂ ತಪ್ಪಿಲ್ಲ ಎಂದು ಈಗಾಗಲೇ ಎಲ್ಲರಿಗೂ ತಿಳಿದಿದ್ದು, ಮತ್ತೆ ಮತ್ತೆ ನೀವು ಅವರ ಮೇಲೆ ಆರೋಪ ಹೊರಿಸುತ್ತಿರುವುದು ಏಕೆ @D_Roopa_IPS ರವರೇ…???

* ಹಿರಿಯ ಐಪಿಎಸ್ ಅಧಿಕಾರಿಯಾದ ತಮ್ಮ ಗಮನಕ್ಕೆ ಈ ಆದೇಶ ಬಂದಿಲ್ಲವೇ @D_Roopa_IPS ರವರೇ..?

* ತಮ್ಮ ಟ್ವೀಟ್’ನಲ್ಲಿ ಶಿಲ್ಪಾನಾಗ್ ಅವರನ್ನು ‘ಕನ್ನಡತಿ’ ಎಂದು ಹೈಲೈಟ್ ಮಾಡಿರುವ ತಾವು, ಸಿಂಧೂರಿಯವರು ಎಂದಾದರೂ ಕನ್ನಡಿಗರನ್ನು ದ್ವೇಷಿಸಿದ್ದನ್ನು ನೋಡಿದ್ದೀರಾ? ಅವರು ಯಾವುದೇ ವೇದಿಕೆ ಮೇಲೆ ತೆಲುಗುನಲ್ಲಿ ಭಾಷಣ ಮಾಡಿದ್ದನ್ನು ನೋಡಿದ್ದೀರಾ?

* ತಾವು ನಿನ್ನೆ @publictvnewsನೊಂದಿಗೆ ಮಾತನಾಡುವಾಗ ‘ರೋಹಿಣಿಗೂ ನನಗೂ ಹೋಲಿಸಬೇಡಿ’ ಎಂದಿದ್ರಿ, ಇಷ್ಟೆಲ್ಲಾ ನಡೆದರೂ ‘ಎಂದಿನಂತೆ ಶ್ರದ್ಧೆಯಿಂದ ಕೆಲಸ ಮಾಡ್ತೀನಿ’ ಎನ್ನುವ ಅವರೆಲ್ಲಿ.? ಮಾಧ್ಯಮಗಳ ಗಮನ ತಮ್ಮೆಡೆಗೆ ಪ್ರಯತ್ನಿಸುತ್ತಿರುವ ನೀವೆಲ್ಲಿ?

* ಮೈಸೂರಿನ ಡಿಸಿ ನಿವಾಸದ ಈಜುಕೊಳ ನಿರ್ಮಾಣದ ಯೋಜನೆ ಮತ್ತು ಯೋಚನೆ ಎರಡು ನನ್ನದಲ್ಲ ಎಂದು ಸಿಂಧೂರಿಯವರು ಸ್ಪಷ್ಟಪಡಿಸಿದ್ದು ತಮ್ಮ ಗಮನಕ್ಕೆ ಬಂದಿಲ್ಲವೇ ಮೇಡಂ?

* ‘ಗಾಯಕ ಲಕ್ಕಿ ಅಲಿ ಜಮೀನಿಗೂ ಮತ್ತು ನನಗೂ ಯಾವುದು ಸಂಬಂಧ ಇಲ್ಲ’ ಎಂದು ಸಿಂಧೂರಿಯವರು ಸ್ಪಷ್ಟಪಡಿಸಿದ್ದಾರೆ, ಅವರ ಕುಟುಂಬದ ಯಾರ ಮೇಲೆ ಆರೋಪ ಬಂದರೂ, ಸಿಂಧೂರಿಯವರ ಮೇಲೆ ನೇರ ಆರೋಪ ಹೊರಿಸುವುದು ಏಕೆ??

* ಎಲ್ಲಾ ಕನ್ನಡಿಗರಿಗೆ ತಮ್ಮ ಮೇಲೆ ಅಪಾರ ಗೌರವವಿದೆ, ಕನ್ನಡದ ಎಲ್ಲಾ ಹೆಣ್ಣು ಮಕ್ಕಳಿಗೆ ತಾವೇ ದೊಡ್ಡ ಸ್ಪೂರ್ತಿ, ಇದರ ನಡುವೆ ಕರ್ನಾಟಕ ಸರ್ಕಾರದ ಹಿರಿಯ, ಮಹಿಳಾ ಅಧಿಕಾರಿಯನ್ನು ಬೇರೆ ರಾಜ್ಯದವರು ಎಂದು ಹೇಳಿ ನೋವುಂಟು ಮಾಡುವುದು ಸರಿಯೇ?

* ಸಿಂಧೂರಿಯವರು ಕರ್ನಾಟಕಕ್ಕೆ ಬಂದ ಆರೇ ತಿಂಗಳಲ್ಲಿ ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವುದನ್ನು ಕಲಿತಿದ್ದಾರೆ, ಅವರು ತಮ್ಮ ಕಚೇರಿ ವೇಳೆಯಲ್ಲಿ ಎಂದಾದರೂ ಕನ್ನಡಿಗರನ್ನು ಕಡೆಗಣಿಸಿರುವುದು ತಮ್ಮ ಗಮನಕ್ಕೆ ಬಂದಿದೆಯೇ?

* ರೋಹಿಣಿ ಅವರ ಮೇಲೆ ಯಾವುದೇ ಆರೋಪ ಇದ್ದರೂ, ಅದನ್ನು ನೇರವಾಗಿ @CSofKarnataka ಹಾಗೂ @DgpKarnataka ರವರ ಗಮನಕ್ಕೆ ತರದೆ, WhastApp Screenshot ಗಳಲ್ಲಿ ತೆಗೆದ ಅವರ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದು ಸರಿಯೇ? ಎಂದು ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಲಾರದಲ್ಲಿ ಭೀಕರ ಅಪಘಾತ : ನಾಲ್ವರು ಸಾವು..!

ಕೋಲಾರ: ಕೂಲಿ ಮಾಡಿ ಅಂದಿನ ಜೀವನ ಅಂದು ನಡೆಸಿದರೆ ಸಾಕಾಗಿರುತ್ತೆ. ಸಾವಿರ ಕನಸಿಲ್ಲದಿದ್ದರು ನಾಳೆಯ ಕನಸೊತ್ತು ಕೂಲಿಗೆ ಹೋಗುತ್ತಿದ್ದವರು ಅವರು. ಆದರೆ ಯಮರಾಯ ಇಂದು ಅವರನ್ನು ತಮ್ಮ ವಿಳಾಸಕ್ಕೆ ಕರೆದುಕೊಂಡು ಹೋಗಿದೆ. ಕೂಲಿ ಮುಗಿಸಿ

ಚಿತ್ರದುರ್ಗ ಜಿ.ಪಂ. ಎದುರು ಹಮಾಲಿ ಕಾರ್ಮಿಕರು ಮತ್ತು ಗ್ರಾ. ಪಂ. ನೌಕರರ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 18 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್, ಗ್ರಾಮ

ಚಿತ್ರದುರ್ಗ | ಕೂಸಿನ ಮನೆ ತರಬೇತಿಗೆ ತಾ.ಪಂ. ಇಓ ವೈ.ರವಿಕುಮಾರ್ ಚಾಲನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 18 : ಏಳು ದಿನಗಳ ಕಾಲ ನಡೆಯುವ ಕೂಸಿನ ಮನೆ ತರಬೇತಿಗೆ ಆರೈಕೆದಾರರು ಗೈರು

error: Content is protected !!