ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.20 : ಸಂತೆಪೇಟೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಇನ್ನರ್‍ವೀಲ್ ಕ್ಲಬ್ ಚಿತ್ರದುರ್ಗ ವತಿಯಿಂದ ಆರ್.ಓ. ವಾಟರ್ ಫಿಲ್ಟರ್ ನೀಡಲಾಯಿತು.
ಇನ್ನರ್‍ವೀಲ್ ಕ್ಲಬ್ ಅಧ್ಯಕ್ಷೆ ಶ್ರೀಮತಿ ಮೋಕ್ಷ ರುದ್ರಸ್ವಾಮಿ ಮಾತನಾಡಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಶುದ್ದ ಕುಡಿಯುವ ನೀರು ಸಿಗಬೇಕೆಂಬ ಉದ್ದೇಶದಿಂದ ಆರ್.ಓ.ವಾಟರ್ ಫಿಲ್ಟರ್ ಅಳವಡಿಸಲಾಗಿದೆ. ಮಕ್ಕಳ ಸಮವಸ್ತ್ರಕ್ಕಾಗಿ ಸ್ಟಿಚ್ಚಿಂಗ್ ಚಾರ್ಜ್ ಕೂಡ ನೀಡಲಾಗಿದೆ. ಸೇವಾ ಮನೋಭಾವನೆ ನಮ್ಮ ಧ್ಯೇಯವಾಗಿರುವುದರಿಂದ ಮುಂದಿನ ದಿನಗಳಲ್ಲಿ ಶಾಲೆಗೆ ಸುಣ್ಣಬಣ್ಣ ಬಳಿಸಿ ಶೌಚಾಲಯ ನಿರ್ಮಿಸಿ ಹ್ಯಾಪಿ ಶಾಲೆಯನ್ನಾಗಿ ಮಾಡುವ ಗುರಿಯಿದೆ ಎಂದು ಹೇಳಿದರು.
ಸರ್ಕಾರಿ ಶಾಲೆಗಳಿಗೆ ಹೆಚ್ಚು ಬಡ ಮಕ್ಕಳೆ ಬರುವುದರಿಂದ ಖಾಸಗಿ ಶಾಲೆಯ ಮಾದರಿಯಲ್ಲಿಯೇ ಸರ್ಕಾರಿ ಶಾಲೆ ಮಕ್ಕಳಿಗೂ ಎಲ್ಲಾ ಮೂಲಭೂತ ಸೌಲಭ್ಯಗಳು ಸಿಗಬೇಕು. ಹಾಗಾಗಿ ಇನ್ನರ್‍ವೀಲ್ ಕ್ಲಬ್ ಮೊದಲಿನಿಂದಲೂ ಇಂತಹ ಉಪಯುಕ್ತ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ ಎಂದರು.
ಡಿಸ್ಟ್ರಿಕ್ಟ್ ಚೇರ್ಮನ್ ಸುಮಿತ್ರ ನಾಗರಾಜ್ ಮಾತನಾಡಿ ಸರ್ಕಾರಿ ಶಾಲೆಯಲ್ಲಿನ ಬಡ ಮಕ್ಕಳಿಗೂ ಶುದ್ದ ಕುಡಿಯುವ ನೀರು ಸಿಗಬೇಕು. ಕಲುಷಿತ ನೀರು ಸೇವನೆಯಿಂದ ಆರೋಗ್ಯ ಹಾಳಾಗುವ ಸಾಧ್ಯತೆಗಳಿರುತ್ತದೆ. ಸ್ವಸ್ಥ ಸಮಾಜ ನಿರ್ಮಾಣವಾಗಬೇಕಾದರೆ ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ನಿಗಾಹರಿಸಬೇಕು. ಇನ್ನರ್‍ವೀಲ್ ಕ್ಲಬ್ ಅಧ್ಯಕ್ಷೆ ಮೋಕ್ಷರುದ್ರಸ್ವಾಮಿ ತಮ್ಮ ಅಧಿಕಾರವಧಿಯಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಅನೇಕ ಸಲಕರಣೆಗಳನ್ನು ನೀಡಿದ್ದಾರೆಂದು ಶ್ಲಾಘಿಸಿಸಿದರು.
ಪಿ.ಡಿ.ಸಿ.ಗಳಾದ ಜ್ಯೋತಿ ಲಕ್ಷ್ಮಣ್, ವೀಣಸ್ವಾಮಿ, ಇನ್ನರ್‍ವೀಲ್ ಕ್ಲಬ್ ಕಾರ್ಯದರ್ಶಿ ರೇಷ್ಮಖಾನಂ, ಪಾಸ್ಟ್ ಪ್ರೆಸಿಡೆಂಟ್ ನಾಗರತ್ನ ಭದ್ರಿನಾಥ್, ಮುಖ್ಯ ಶಿಕ್ಷಕಿ ರೇಣುಕಮ್ಮ ಈ ಸಂದರ್ಭದಲ್ಲಿದ್ದರು.