Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಲಿಗೆ ಯಂತ್ರ ವಿತರಣೆ ಯೋಜನೆ: ಅರ್ಜಿ ಆಹ್ವಾನ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಜನವರಿ.10) : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಬಡ ಕುಟುಂಬದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಸ್ವಾವಲಂಬಿ ಯೋಜನೆಯಲ್ಲಿ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರವರಿ 20 ಅರ್ಜಿ ಸಲ್ಲಿಸಲು ಕೊನೆಯ ದಿನ.

ಅರ್ಜಿದಾರರ ವಯಸ್ಸು 18 ರಿಂದ 55ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲ ಅರ್ಜಿ ಆಹ್ವಾನಿಸಲಾಗಿದೆ.

ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು. ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಹೊಲಿಗೆ ಯಂತ್ರ ತರಬೇತಿ ಪಡೆದ ಪ್ರಮಾಣ ಪತ್ರ ಹೊಂದಿರಬೇಕು. ಒಂದು ಕುಟುಂಬದಲ್ಲಿ ಓರ್ವ ಸದಸ್ಯರು ಮಾತ್ರ ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಮಹಿಳೆಯರು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಫೆಬ್ರವರಿ 20 ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ನಿಗಮದ ವೆಬ್‍ಸೈಟ್

www.karnataka.gov.in/dbcdc

ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಯನ್ನು ಪಡೆಯಲು ನಿಗಮದ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬಹುದು ಎಂದು  ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಬಿ.ವಿ.ವೆಂಕಟರಾಜು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಹೊಸ ವ್ಯಾಪಾರ ವಹಿವಾಟುದೊಂದಿಗೆ ದೀರ್ಘಕಾಲದ ಸಂತೋಷ

ಈ ರಾಶಿಯವರು ಹೊಸ ವ್ಯಾಪಾರ ವಹಿವಾಟುದೊಂದಿಗೆ ದೀರ್ಘಕಾಲದ ಸಂತೋಷ, ಈ ರಾಶಿಯವರು ಇಷ್ಟಪಟ್ಟವರ ಎಲ್ಲಿ ದೂರ ಸರಿತ್ತಾರೋ ಎಂಬ ಚಿಂತೆ. ಗುರುವಾರ ರಾಶಿ ಭವಿಷ್ಯ -ಅಕ್ಟೋಬರ್-24,2024 ಅಹೋಹಿ ಅಷ್ಟಮಿ ಸೂರ್ಯೋದಯ: 06:15, ಸೂರ್ಯಾಸ್ತ :

ಕೇರಳದಲ್ಲೂ ಸಿದ್ದರಾಮಯ್ಯ ಕ್ರೇಜ್ : ಪ್ರಿಯಾಂಕ ಗಾಂಧಿ ಪರ ಪ್ರಚಾರದಲ್ಲಿ ಏನೆಲ್ಲಾ ಆಯ್ತು..?

ಸಿಎಂ ಸಿದ್ದರಾಮಯ್ಯ ಅಂದ್ರೆ ಕರ್ನಾಟಕದಲ್ಲಂತೂ ಸಿಕ್ಕಾಪಟ್ಟೆ ಕ್ರೇಜು. ಅಭಿಮಾನಿಗಳ ಬಳಗ ಕಡಿಮೆ ಏನು ಇಲ್ಲ. ಆದ್ರೆ ಸಿದ್ದರಾಮಯ್ಯ ಅವರಿಗೆ ನಮ್ಮ ರಾಜ್ಯದಲ್ಲಿ ಮಾತ್ರ ಅಭಿಮಾನಿಗಳು ಇರೋದಲ್ಲ, ಪಕ್ಕದ ರಾಜ್ಯದಲ್ಲೂ ಅಷ್ಟೇ ಅಭಿಮಾನಿಗಳಿದ್ದಾರೆ. ಕೇರಳದಲ್ಲೂ ಸಿಎಂ

ವಿಪರೀತ ಬೆನ್ನು ನೋವು : ಬೆಂಗಳೂರಿಗೆ ಶಿಫ್ಟ್ ಆಗಲಿದ್ದಾರಾ ದರ್ಶನ್..?

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದಾಸನಿಗೆ ಅನಾರೋಗ್ಯ ಬಿಡದೆ ಕಾಡುತ್ತಿದೆ. ಅದರಲ್ಲೂ ಬಳ್ಳಾರಿ ಜೈಲಿಗೆ ಹೋದಾಗಿನಿಂದ ಬೆನ್ನು ನೋವಿನ ಸಮಸ್ಯೆ ಉಲ್ಬಣಗೊಂಡಿದೆ. ಬೆನ್ನು ನೋವು ಎಂದು ಹೇಳಿದಾಗಿನಿಂದ ಜೈಲು ಅಧಿಕಾರಿಗಳು

error: Content is protected !!