ಮೈಸೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಘಟಾನುಘಟಿ ನಾಯಕರು ಗೆಲುವಿಗಾಗಿ ಹಪಹಪಿಸುತ್ತಿದ್ದಾರೆ. ಅಧಿಕಾರಕ್ಕೇರುವುದಕ್ಕಾಗಿ ಕಸರತ್ತು ನಡೆಸುತ್ತಿದ್ದಾರೆ. ಅದರ ಜೊತೆಗೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಕ್ಯಾಂಡಿಡೇಟ್ ಗಳ ವಿಚಾರವೇ ಸದ್ದು ಸುದ್ದಿಯಾಗಿದೆ.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಕಟ್ಟಾಳುಗಳನ್ನೇ ನಿಲ್ಲಿಸಿದೆ. ಮೈಸೂರಿನ ವರುಣಾದಲ್ಲಿ ಸಿದ್ದರಾಮಯ್ಯ ಅವರಿಗೆ ಎದುರಾಳಿಯಾಗಿ ವಿ ಸೋಮಣ್ಣ ಅವರನ್ನು ನಿಲ್ಲಿಸಲಾಗಿದೆ. ಹೀಗಾಗಿ ವರುಣಾ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿ ಗಮನ ಸೆಳೆದಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ನಾಯಕರು ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಇಂದು ವರುಣಾದಲ್ಲಿ ಸಿದ್ದರಾಮಯ್ಯ ಅವರು ಪ್ರಚಾರ ನಡೆಸಿದ್ದು, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
“ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ದ್ವೇಷದ ರಾಜಕಾರಣ ಮಾಡ್ತಿದ್ದಾರೆ. ವಿ ಸೋಮಣ್ಣ ಅವರನ್ನು ವರುಣಾದಲ್ಲಿ ನಿಲ್ಲಿಸಿದ್ದು, ಬಿ ಎಲ್ ಸಂತೋಷ್ ಎಂದು ಆಕ್ರೋಶ ಹೊರ ಹಾಕಿದ್ದಾರೆ.