Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ  ಯೋಜನೆ ಜನಮಂಗಲ ಕಾರ್ಯಕ್ರಮದಡಿ ವೀಲ್‍ಚೇರ್ ವಿತರಣೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜನಮಂಗಲ ಕಾರ್ಯಕ್ರಮದಡಿ ವಿಕಲಚೇತನರು, ನಾನಾ ರೀತಿಯ ಕಾಯಿಲೆಗೆ ತುತ್ತಾಗಿ ಹಾಸಿಗೆ ಹಿಡಿದಂತವರಿಗೆ ಅಗತ್ಯವಿರುವ ಸಲಕರಣೆಗಳನ್ನು ನೀಡಲಾಗುತ್ತಿದೆ ಎಂದು ಯೋಜನೆಯ ಪ್ರಾದೇಶಿಕ ನಿರ್ದೇಶಕಿ ಶ್ರೀಮತಿ ಗೀತಾ ತಿಳಿಸಿದರು.

ಪಾಶ್ರ್ವವಾಯುಗೆ ತುತ್ತಾಗಿರುವ ಎಪ್ಪತ್ತೈದು ವರ್ಷದ ವೃದ್ದೆ ಯಶೋಧಮ್ಮನಿಗೆ ಬುರುಜನಹಟ್ಟಿಯಲ್ಲಿರುವ ಅವರ ನಿವಾಸದಲ್ಲಿ ಗುರುವಾರ ವೀಲ್‍ಚೇರ್ ವಿತರಿಸಿ ಮಾತನಾಡಿದ ಶ್ರೀಮತಿ ಗೀತಾ ಹುಟ್ಟಿನಿಂದಲೇ ಅಂಗವಿಲರಾದವರು, ಪಾಶ್ರ್ವವಾಯು ಪೀಡಿತರು ಹೀಗೆ ನಾನಾ ಕಾರಣಗಳಿಂದ ಓಡಾಡುವ ಶಕ್ತಿಯನ್ನು ಕಳೆದುಕೊಂಡವರಿಗೆ ವೀಲ್‍ಚೇರ್, ವಾಟರ್ ಬೆಡ್, ವಾಕಿಂಗ್ ಸ್ಟಿಕ್ ಇನ್ನು ಅನೇಕ ಅಗತ್ಯಕ್ಕೆ ತಕ್ಕಂತೆ ಸಲಕರಣೆಗಳನ್ನು ನೀಡಲಾಗುತ್ತಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ, ಶ್ರೀಮತಿ ಹೇಮಾವತಿ ಹೆಗಡೆರವರ ಕನಸಿನಂತೆ ವಾತ್ಸಲ್ಯ ಯೋಜನೆಯಡಿ ನಿರ್ಗತಿಕರಿಗೆ ಮನೆಗಳನ್ನು ಕಟ್ಟಿಸಿ ಕೊಡುವುದರ ಜೊತೆ ಚಾಪೆ, ಬಟ್ಟೆ, ಹೊದಿಕೆ, ಪಾತ್ರೆ ಸಾಮಾನುಗಳನ್ನು ವಿತರಿಸಲಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯೆಂದರೆ ಬರಿ ಸಂಘ ಸಾಲ ಕೊಡುವುದಷ್ಟೆ ಅಲ್ಲ. ಇಂತಹ ಮಹಾತ್ಕಾರ್ಯಗಳನ್ನು ಮಾಡಲಾಗುವುದು ಎಂದು ಹೇಳಿದರು.

ಕಳೆದ ವರ್ಷ 150 ಕುಟುಂಬಗಳಿಗೆ ಇಂತಹ ಸಲಕರಣೆಗಳನ್ನು ನೀಡಲಾಗಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ತಿಳಿಸಿದರು.

ಯೋಜನಾಧಿಕಾರಿ ಶಶಿಧರ್, ವ್ಯವಸ್ಥಾಪಕ ಗಣೇಶ್, ತಾಲ್ಲೂಕು ಯೋಜನಾಧಿಕಾರಿ ಅಶೋಕ್, ಸಮನ್ವಯಾಧಿಕಾರಿ ಸುಧ, ನಗರಸಭೆ ಸದಸ್ಯೆ ಪಿ.ಕೆ.ಮೀನಾಕ್ಷಿ, ಚಂದ್ರಮ್ಮ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!