Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇನ್ನು ಮುಂದೆ ಅಪ್ಪು ‘ಕರ್ನಾಟಕ ರತ್ನ’

Facebook
Twitter
Telegram
WhatsApp

 

ಬೆಂಗಳೂರು: ಅಪ್ಪು ಅಭಿಮಾನಿಗಳ ಆಕಾಶದೆತ್ತರದ ಕನಸಿತ್ತು. ತೆರೆ ಮರೆಯಲ್ಲೇ ಅದೆಷ್ಟೋ ಸೇವೆ ಮಾಡಿದ ಅಪ್ಪುಗೆ ಹಲವಾರು ಪ್ರಶಸ್ತಿಗಳು ಬರಬೇಕೆಂದುಕೊಂಡಿದ್ದರು. ಇದೀಗ ಅಪ್ಪು ಇಲ್ಲದ ಸಮಯದಲ್ಲಿ ಅಭಿಮಾನಿಗಳ ಆಸೆ ಈಡೇರಿದೆ. ಮರಣೋತ್ತರ ಕರ್ನಾಟಕ ಪ್ರಶಸ್ತಿ ನೀಡಲಾಗಿದೆ.

ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಪ್ಪುಗಾಗಿ ಪುನೀತ್ ನಮನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಆ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಾತನಾಡುತ್ತಾ, ಅಪ್ಪುಗೆ ಮರಣೋತ್ತರ ಕರ್ನಾಟಕ ಪ್ರಶಸ್ತಿ ನೀಎಉವುದಾಗಿ ಘೋಷಣೆ ಮಾಡಿದ್ದಾರೆ.

ಪುನೀತ್ ನನ್ನು ನಾನು ಬಾಲ್ಯದಿಂದಲೇ ಬಲ್ಲೆ. ಬಾಲಕನಾಗಿ ರಾಷ್ಟ್ರ ಪ್ರಶಸ್ತಿ ಗಳಿಸಿದ ಮೊದಲ ಬಾಲ ನಟ ಪುನೀತ್. ಸಣ್ಣ ವಯಸ್ಸಿನಲ್ಲೇ ಅಷ್ಟು ಅದ್ಭುತವಾಗಿ ನಟಿಸೋದು ಅಷ್ಟು ಸುಲಭವಲ್ಲ ಎಂದು ಸಿಎಂ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಪುನೀತ್ ರನ್ನು ಹೊಗಳಿದರು.

ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆ ನೀಡಿದ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. 1992ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಸ್ಥಾಪಿಸಲಾಯಿತು. ಈವರಗೆ ಕೇವಲ ಎಂಟು ಮಂದಿಗೆ ಕರ್ನಾಟಕ ರತ್ನ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಮರಣೋತ್ತರವಾಗಿ ಈ ಪ್ರಶಸ್ತಿ ಪಡೆಯುತ್ತಿರುವ ಪುನೀತ್ ರಾಜ್​ಕುಮಾರ್ ಈ ಗೌರವಕ್ಕೆ ಪಾತ್ರರಾದ 9ನೇ ವ್ಯಕ್ತಿಯಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ : ವಕೀಲರಿಗೆ ಸನ್ಮಾನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಬಾಪೂಜಿ ಸಮೂಹ ಸಂಸ್ಥೆಗಳು, ರಂಗಸೌರಭ ಕಲಾ ಸಂಘ ಹಾಗೂ ಶ್ರೀ ಶಿವಕುಮಾರ ಕಲಾ ಸಂಘ ಇವರ ಸಂಯುಕ್ತ

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸೋಲಿಗೆ ಆ ಐವರು ಕಾರಣವೇ ?

ಸುದ್ದಿಒನ್ | ಮಹಾರಾಷ್ಟ್ರ ಚುನಾವಣೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಕೇವಲ 16 ಸ್ಥಾನಗಳನ್ನು ಗೆದ್ದಿದೆ. ಭಾರೀ ಸೋಲಿನ ನಂತರ ಪಕ್ಷವು ಇವಿಎಂಗಳಿಂದ ನಮಗೆ ಸೋಲಾಗಿದೆ ಎಂದು ದೂರಿದೆ. ಇವಿಎಂಗಳ ದತ್ತಾಂಶದಿಂದಾಗಿ ಚುನಾವಣೆ

RCB ಸೇರ್ತಾರೆ ಅಂದುಕೊಂಡ್ರೆ ಕನ್ನಡಿಗ ರಾಹುಲ್ ಡೆಲ್ಲಿ ಪಾಲು..!

RCB ಕ್ರೇಜ್ ಎಷ್ಟಿದೆ‌ ಎಂಬುದನ್ನು ಬಿಡಿಸಿ ಹೇಳುವ ಅಗತ್ಯವಿಲ್ಲ. ಐಪಿಎಲ್ ಶುರುವಾಗುವ ಮುನ್ನವೇ ಆರ್ಸಿಬಿ ಫೀವರ್ ಅಭಿಮಾನಿಗಳಲ್ಲಿ ಜೋರಾಗಿ ಬಿಡುತ್ತದೆ. ಆರ್ಸಿಬಿ ಅಂದ್ರೆ ಅಷ್ಟು ಪ್ರೀತಿ ಕನ್ನಡಿಗರಿಗೆ. ಈಗ ಆರ್ಸಿಬಿ ಫ್ಯಾನ್ಸ್ ಖುಷಿ ಪಡೋ

error: Content is protected !!