ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅವರಣದಲ್ಲಿ ಇಂದು 66ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ವೇಳೆ ಕನ್ನಡ ಧ್ವಜಾರೋಹಣ ಮಾಡಿ ಡಾ. ರಾಜ್ ಕುಮಾರ್ ಪ್ರತಿಮೆ ಹಾಗೂ ಪುನೀತ್ ರಾಜ್ ಕುಮಾರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಬಿಬಿಎಂಪಿ ಆಯುಕ್ತರಾದ ಗೌರವ್ ಗುಪ್ತಾ, ಬೆಂಗಳೂರಿನ ನಾಗರಿಕರಿಗೆ 66ನೇ ಕನ್ನಡ ರಾಜ್ಯೋತ್ಸವ ಶುಭಾಶಯಗಳು ಮತ್ತು ಯುವಕರ ಆಶಾಕಿರಣ, ಪವರ್ ಸ್ಟಾರ್, ರಾಷ್ಟ ಪ್ರಶಸ್ತಿ ಪುರಸ್ಕೃತ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನ ಹೊಂದಿರುವುದು ದುಖಃಕರ ಸಂಗತಿ. ರಾಜ್ಯಕ್ಕೆ ತುಂಬಾಲಾರದ ನಷ್ಟವಾಗಿದೆ.
ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಲನಚಿತ್ರಗಳನ್ನು ಕೊಡುಗೆಯಾಗಿ ನೀಡಿದರು.
ಬಿಬಿಎಂಪಿ ಕೇಂದ್ರ ಕಛೇರಿ ಆವರಣದಲ್ಲಿ ಈಗಾಗಲೇ ಡಾ. ರಾಜ್ ಕುಮಾರ್ ಅವರ ಪ್ರತಿಮೆ ಇದೆ. ಅದರ ಪಕ್ಕದಲ್ಲೇ ದಿ.ಪುನೀತ್ ರಾಜ್ ಕುಮಾರ್ ರವರ ಕಂಚಿನ ಪ್ರತಿಮೆ ಸ್ಥಾಪಿಸಲು ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಲಾಗುವುದು ಎಂದಿದ್ದಾರೆ.