ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ(ಏ.15) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಶನಿವಾರ 7 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 8 ನಾಮಪತ್ರಗಳು ಸಲ್ಲಿಕೆಯಾಗಿವೆ.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ನಗರದ ಎನ್.ಮಂಜಪ್ಪ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಹೊಸದುರ್ಗ ವಿಧಾನಸಭಾ ಕ್ಷೇತ್ರದಿಂದ ಹೊಸದುರ್ಗ ಪಟ್ಟಣದ ಟಿ.ಮಂಜುನಾಥ ಪಕ್ಷೇತರ ಅಭ್ಯರ್ಥಿಯಾಗಿ, ಹೊಸದುರ್ಗ ತಾಲೂಕು ಬೆಲಗೂರು ಗ್ರಾಮದ ಬಿ.ಜಿ.ಗೋವಿಂದಪ್ಪ ಇಂಡಿಯನ್ ನ್ಯಾಷಿನಲ್ ಕಾಂಗ್ರೇಸ್ ಪಕ್ಷದಿಂದ ಹಾಗೂ ಹೊಸದುರ್ಗ ತಾಲೂಕು ಶ್ರೀರಾಂಪುರ ಹೋಬಳಿ ಗರಗ ಗ್ರಾಮದ ಡಿ.ಪಾಂಡುರAಗ ಗರಗ ಪಕ್ಷೇತರ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಚಳ್ಳಕರೆ ತಾಲೂಕಿನ ಕಾಮಾಸಮುದ್ರ ಗ್ರಾಮದ ಅಂಜಮ್ಮ.ಆರ್ ಪಕ್ಷೇತರ ಅಭ್ಯರ್ಥಿಯಾಗಿ, ಚಳ್ಳಕೆರೆ ನಗರದ ಭೋಜರಾಜು.ಸಿ ಕರ್ನಾಟಕ ರಾಷ್ಟç ಸಮಿತಿ ಪಕ್ಷದಿಂದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಹಿರಿಯೂರು ವಿಧಾನಸಭಾ ಕ್ಷೇತ್ರದಿಂದ ಹಿರಿಯೂರು ನಗರದ ಬಿ.ಸುಧಾಕರ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಉಳಿದಂತೆ ಹೊಳಲ್ಕೆರೆ ಹಾಗೂ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರಗಳಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ತಿಳಿಸಿದ್ದಾರೆ.