ಅಂತು ಇಂತು ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಯಾರಾಗ್ತಾರೆ ಅನ್ನೋ ವಿಚಾರಕ್ಕೆ ತೆರೆ ಬಿದ್ದಿದೆ. ಕಾಂಗ್ರೆಸ್ ಹೈಕಮಾಂಡ್ ನಿಂದಾನೇ ಹೆಸರು ಫೈನಲ್ ಆಗಿದೆ. ನಾಳೆ ನೂತನ ಸರ್ಕಾರ ರಚನೆಯಾಗಲಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಈಗಾಗಲೇ ಸಕಲ ಸಿದ್ಧತೆ ನಡೆದಿದೆ.
ಸಿದ್ದರಾಮಯ್ಯ ಸಿಎಂ ಆಗಿ ಪ್ತಮಾಣ ವಚನ ಸ್ವೀಕರಿಸಲು ಕಂಠೀರವ ಸ್ಟೇಡಿಯಂ ರೆಡಿಯಾಗಿದೆ.ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಸಿದ್ಧತೆಗಳನ್ನು ಪರಿಶೀಲನೆ ಮಾಡಿದ್ದಾರೆ. ಸ್ಟೇಜ್ ಹಾಕಿ, ಲೈಟಿಂಗ್ ಅಳವೆಇಕೆ ಮಾಡಿ, ಗಣ್ಯರಿಗೆ ಕುಳಿತುಕೊಳ್ಳಲು ಆಸನ ತಯಾರು ಸೇರಿದಂತೆ ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ.
ಸಿದ್ದರಾಮಯ್ಯ ಅವರು 2013ರಲ್ಲಿ ಸಿಎಂ ಆಗಿ ಇದೇ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಭರ್ತಿ ಐದು ವರ್ಷಗಳ ಕಾಲ ಸಿಎಂ ಆಗಿ ರಾಜ್ಯದಲ್ಲಿ ಆಡಳಿತ ನಡೆಸಿದ್ದರು. ಇದೀಗ ಈ ಬಾರಿಯೂ ಅದೇ ಜಾಗದಲ್ಲಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಾರೆ.
ಕಳೆದ ಮೂರು ದಿನದಿಂದ ಸಿಎಂ ಆಯ್ಕೆ ಮಾಡುವುದೇ ಕಾಂಗ್ರೆಸ್ ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಕಡೆಗೂ ಸಂಧಾನ ಸಭೆ ಸಫಲವಾಗಿದೆ. ಸಿದ್ದರಾಮಯ್ಯ ಅವರನ್ನೆರ ಮುಂದಿನ ಸಿಎಂ ಆಗಿ ನೇಮಕ ಮಾಡಲಾಗಿದೆ.