ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.24 : ರೆಡ್ಡಿ ಜನಸಂಘದ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ನಗರದ ತುರುವನೂರು ರಸ್ತೆಯ ಕಮ್ಮರೆಡ್ಡಿ ಸಮುದಾಯ ಭವನದಲ್ಲಿ ಡಿಸೆಂಬರ್ 25 ರಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, 2022-23ನೇ ಸಾಲಿನಲ್ಲಿ ವಿವಿಧ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಏರ್ಪಡಿಸಲಾಗಿದೆ.
ರೆಡ್ಡಿ ಸಮುದಾಯದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪ್ರತಿಭಾವಂತ ಮಕ್ಕಳಿಗೆ ಶೈಕ್ಷಣಿಕವಾಗಿ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೆಡ್ಡಿ ಜನಸಂಘದ ಕಾರ್ಯದರ್ಶಿ ಜೆ. ಪರುಶುರಾಮ ಅವರು ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಮಾಜಿ ಶಾಸಕ, ರೆಡ್ಡಿ ಜನಸಂಘದ ಅಧ್ಯಕ್ಷ ಜಿ.ಎಚ್.ತಿಪ್ಪಾರೆಡ್ಡಿ ಉದ್ಘಾಟಿಸಲಿದ್ದಾರೆ. ಸಂಘದ ಉಪಾಧ್ಯಕ್ಷ ಎಂ.ಕೆ.ಅನಂತರೆಡ್ಡಿ, ಕಾವ್ಯದರ್ಶಿಗಳಾದ ಜೆ.ಪರಶುರಾಮ, ಜಿ.ಟಿ.ವಿಶ್ವನಾಥ್, ಖಜಾಂಜಿ ಡಿ.ಕೆ.ಶೀಲಾ, ಡಿಡಿಪಿಐ ಕೆ.ರವಿಶಂಕರೆಡ್ಡಿ ಉಪಸ್ಥಿತರಿರುತ್ತಾರೆ. ಪಪೂ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಪಿ.ಎನ್.ಕೃಷ್ಣಪ್ರಸಾದ್ ಅವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮದ
ಪ್ರಾರ್ಥನೆ : ಶ್ರೀಮತಿ ಶ್ರೀ ಪ್ರಜ್ವಲ್ ಕೇಶವರೆಡ್ಡಿ
ಸ್ವಾಗತ : ಪರಶುರಾಮ ಜೆ.
ಪ್ರಾಸ್ಥಾವಿಕ ನುಡಿ : ಕೆ.ಟಿ.ತಿಮ್ಮಾರೆಡ್ಡಿ
ವಂದನಾರ್ಪಣೆ : ಎಂ.ಕೆ. ಆನಂತರೆಡ್ಡಿ ನಡೆಸಿಕೊಡುತ್ತಾರೆ.
ಈ ಸಂದರ್ಭದಲ್ಲಿ ರೆಡ್ಡಿ ಜನಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು, ತಾಲ್ಲೂಕುಗಳ ರೆಡ್ಡಿಜನ ಸಂಘದ ಅಧ್ಯಕ್ಷರುಗಳು ಹಾಗೂ ಸಮಾಜದ ಎಲ್ಲಾ ಬಂಧು-ಮಿತ್ರರು ಆಗಮಿಸಲಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಪರುಶುರಾಮ ಜೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.