ಸುದ್ದಿಒನ್, ಚಿತ್ರದುರ್ಗ, (ಅ.18) : ಮುರುಘಾ ಶರಣರ ಜನ್ಮದಿನವನ್ನು ಸಮಾನತೆಯ ದಿನವನ್ನಾಗಿ ಆಚರಿಸುವ ಕುರಿತು ಚಿಂತನೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂಗಿತ ವ್ಯಕ್ತಪಡಿಸಿದರು.
ಶ್ರೀ ಜಗದ್ಗುರು ಮುರುಘ ರಾಜೇಂದ್ರ ಬೃಹನ್ಮಠದ ಶೂನ್ಯ ಪೀಠಾಧ್ಯಕ್ಷ ಹಾಗೂ ತ್ರಿವಿಧ ದಾಸೋಹಿಗಳಾದ ಶ್ರೀ ಡಾ. ಶಿವಮೂರ್ತಿ ಮುರುಘಾ ಶರಣರ 30ನೇ ವರ್ಷದ ಪೀಠಾರೋಹಣ ತೃತೀಯ ದಶಮಾನೋತ್ಸವದ ಅಂಗವಾಗಿ ಸೋಮವಾರ ಆಯೋಜಿಸಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರ ಶಿಷ್ಯ ಬಳಗದವರು ಮುರುಘಾ ಶರಣರ ಜನ್ಮದಿನವನ್ನು ಸಮಾನತೆ ದಿನವನ್ನಾಗಿ ಘೋಷಿಸಬೇಕೆಂದು ಮನವಿ ಮಾಡಿದ್ದು, ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಡೆಸಿ, ಜಾರಿಗೊಳಿಸಲು ಚಿಂತನೆ ನಡೆಸುವುದಾಗಿ ಹೇಳಿದರು.