ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಮಾ. 15 : ಮುಂದಿನ ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿಯನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ನಗರದ ಹೊರವಲಯದ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆ ಮಾಜಿ ಸಚಿವ ಸಿಸಿ ಪಾಟೀಲ್ ಜೊತೆಗಿದ್ದರು.
ಚಿತ್ರದುರ್ಗದ ಟಿಕೆಟ್ ಘೋಷಣೆಯಾಗುವುದು ಬಾಕಿ ಇದೆ. ದೆಹಲಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನಿಗಳು ಹಾಗೂ ಬೋರ್ಡ್ ಕಮಿಟಿಯ ಸಭೆ ನಡೆಯಲಿದ್ದು, ನಾಳೆ ನಾಡಿದ್ದರಲ್ಲಿ ಉಳಿದ ಎಲ್ಲಾ ಸ್ಥಾನಗಳ ಟಿಕೆಟ್ ಮತ್ತು ಅಭ್ಯರ್ಥಿಗಳ ಘೋಷಣೆಯಾಗಲಿದೆ ಎಂದರು.
ಮಾದಾರ ಚನ್ನಯ್ಯ ಶ್ರೀಗಳ ಹೆಸರು ಕೇಳಿ ಬರುತ್ತಿದೆ ಎಂಬ ಪ್ರಶ್ನೆಗೆ, ಈ ವಿಚಾರವಾಗಿ ಯಾವುದೇ ಚರ್ಚೆ ಆಗುತ್ತಿಲ್ಲ.ಇದರ ಬಗ್ಗೆ ನನಗೆ ಮಾಹಿತಿ ಇಲ್ಲ. ಚಿತ್ರದುರ್ಗದಲ್ಲಿ ಹಾಲಿ ಸಂಸದರಿಗೆ ಟಿಕೆಟ್ ಕೊಡದೆ ಹೊಸಬರಿಗೆ ಟಿಕೆಟ್ ಕೊಡುವ ವಿಚಾರ ಕೇವಲ ಊಹಾ ಪೋಹ ಅಧಿಕೃತವಾಗಿ ಟಿಕೆಟ್ ಘೋಷಣೆ ಮಾಡಿದ ಮೇಲೆಯೇ ಅದು ಗೊತ್ತಾಗಲಿದೆ. ಈಶ್ವರಪ್ಪ ಹಾಗೂ ಹಾವೇರಿ, ದಾವಣಗೆರೆಯಲ್ಲಿ ಭಿನ್ನಮತ ವಿಚಾರವಾಗಿ ಅವರ ಜೊತೆಗೆ ನಾನು ವರಿಷ್ಟರು ಮಾತಾಡಿದ್ದೇವೆ ಎಲ್ಲವೂ ಸರಿಯಾಗಲಿದೆ ಎಂದರು.
ಶ್ರೀಮಠದ ಬೆಂಬಲ ಕೋರಿ ನಾನು ಬಂದಿಲ್ಲ. ನಾನು 35 ವರ್ಷ ರಾಜಕಾರಣ ಮಾಡಿದ್ದೇನೆ. ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಭೇಟಿ ಮಾಡಿದ್ದೇನೆ. ಎರಡು ಬಾರಿ ವಿಧಾನ ಪರಿಷತ್ ಸದಸ್ಯನಾಗಿದ್ದೆ, ಈಗ ಎಂಪಿ ಟಿಕೆಟ್ ಕೊಟ್ಟಿದ್ದಾರೆ. ನಮ್ಮ ಪಕ್ಷದಲ್ಲಿ ನಿಷ್ಠಾವಂತರಿಗೆ ಟಿಕೆಟ್ ನೀಡಿದ್ದೇವೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಫೋಕ್ಸೋ ಪ್ರಕರಣ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ಹೇಳಿಕೆಯಲ್ಲಿ ದೂರು ನೀಡಿದ ಮಹಿಳೆ ಮಾನಸಿಕ ಅಸ್ವಸ್ಥೆ ಎಂದಿರುವುದರಿಂದ ಇದಕ್ಕೆ ಪ್ರಮುಖ್ಯತೆ ನೀಡುವ ಅವಶ್ಯಕತೆ ಇಲ್ಲ ಯಾವುದೇ ದೂರು ದಾಖಲಾದ ತಕ್ಷಣ ಕ್ರಮ ಕೈಗೊಳ್ಳಲಾಗದು, ಜವಾಬ್ದಾರಿಯಿಂದ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಈಗಾಗಲೇ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಅವರು ಹೇಳಿಕೆ ಕೊಟ್ಟಿರುವುದು ಸರಿಯಾಗಿದೆ. ದೂರು ನೀಡಿದ ಮಹಿಳೆ ಈ ಹಿಂದೆ ಅನೇಕರ ಮೇಲೆ ಇದೇ ರೀತಿ ದೂರು ಕೊಟ್ಟಿದ್ದರೆಂದು ಹೇಳಿದ್ದಾರೆ. ರಾಜಕೀಯದಲ್ಲಿ ಹೆಸರಿಗೆ ಕಳಂಕ ತರುವ ಪ್ರಯತ್ನ ನಡೆಯುತ್ತವೆ. ಆದರೆ ಈ ಪ್ರಕರಣ ದಾಖಲಿಸಿದ ಹಿಂದೆ ಯಾವುದೇ ಸದುದ್ದೇಶ ಇಲ್ಲ. ಚುನಾವಣೆ ವೇಳೆ ಈ ರೀತಿ ಪ್ರಯತ್ನ ನಡೆಯುತ್ತಿರುತ್ತವೆ ಆದರೆ ಸತ್ಯಕ್ಕೆ ಜಯ ಸಿಗಲಿದೆ ಎಂದರು.