ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.21 : ರಂಗಸೌರಭ ಕಲಾ ಸಂಘ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಬಾಪೂಜಿ ಶಿಕ್ಷಣ ಮಹಾ ವಿದ್ಯಾಲಯ ಹಾಗೂ ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ಸೈಕೋ ಡ್ರಾಮ ಕಾರ್ಯಾಗಾರವನ್ನು ಪಿಳ್ಳೆಕೆರೇನಹಳ್ಳಿಯ ಬಾಪೂಜಿ ಸಭಾಂಗಣದಲ್ಲಿ ದಿನಾಂಕ 22 ರಂದು ಬೆಳಿಗ್ಗೆ 10-30ಕ್ಕೆ ಹಮ್ಮಿಕೊಳ್ಳಲಾಗಿದೆ.
ಶ.ಸಾ.ಪ ಜಿಲ್ಲಾಧ್ಯಕ್ಷ ಕೆ.ಎಂ.ವೀರೇಶ್ ಉದ್ಘಾಟಿಸುವರು. ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ ಸದಸ್ಯೆ ಎಂ.ಆರ್.ಜಯಲಕ್ಷ್ಮೀ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ, ರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ.ಕೆ.ಮೋಹನ್‍ಕುಮಾರ್, ರಂಗನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ರಾಷ್ಟ್ರೀಯ ನಾಟಕ ಶಾಲೆಯ ಪದವೀಧರೆ ಮೇದಿನಿ ಕೆಳಮನೆ ಹೆಗ್ಗೋಡು ಸೈಕೋಡ್ರಾಮಾ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸುವರು ಎಂದು ಸಂಘದ ಉಪಾಧ್ಯಕ್ಷ ಟಿ.ಎಂ.ವೀರೇಶ್ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.