ಬೆಂಗಳೂರು: ರಾಜ್ಯದಾದ್ಯಂತ ಈಗಾಗಲೇ ಮಳೆ ಶಯರುವಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಜೋರು ಮಳೆ ಬರುತ್ತಿದೆ. ಮುಂದಿನ 6 ದಿನಗಳ ಕಾಲ ಜೋರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಮೇ 16ರ ವರೆಗೂ ಧಾರಾಕಾರ ಮಳೆ ಸುರಿಯುವ ಸೂಚನೆಯನ್ನು ನೀಡಿದೆ. ಮುಂದಿನ ಆರು ದಿನಗಳ ಕಾಲ ಗುಡುಗು, ಮಿಂಚು, ಗಾಳಿ ಸಹಿತ ಮಳೆಯಾಗಲಿದೆ.
ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಹಲವೆಡೆ ಭರ್ಜರಿ ಮಳೆಯಾಗಲಿದೆ. ಮಂಡ್ಯ, ಮೈಸೂರು, ಹಾಸನ, ಬೆಳಗಾವಿ, ಹಾವೇರಿ, ಗದಗ, ವಿಜಯಪುರ ಜಿಲ್ಲೆಗಳಲ್ಲಿ ತೀವ್ರ ಗಾಳಿಯೊಂದಿಗೆ ಧಾರಾಕಾರ ಮಳೆಯಾಗಲಿದೆ.
ರಾಯಚೂರು, ಯಾದಗಿರಿ, ಕೊಪ್ಪಳ, ಧಾರವಾಡ, ಕಲಬುರಗಿ, ಬೀದರ್, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಾಣ ಮಳೆಯಾಗಲಿದೆ. ದಕ್ಷಿಣ ಕನ್ನಡದಲ್ಲಿ ವರದಿಯ ಪ್ರಕಾರ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆಗೆ ಜೋರು ಮಳೆಯಾಗುವ ನಿರೀಕ್ಷೆ ಇದೆ.