Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

UK Election Result 2024 |  ಬ್ರಿಟನ್ ಪ್ರಧಾನಿ ರಿಷಿ ಸುನಕ್ ಗೆ ಹೀನಾಯ ಸೋಲು : ಅಧಿಕಾರದ ಗದ್ದುಗೆ ಏರಿದ ಲೇಬರ್ ಪಕ್ಷ : ನೂತನ ಪ್ರಧಾನಿಯಾಗಿ ಕೀರ್ ಸ್ಟಾರ್‌ಮೇರ್

Facebook
Twitter
Telegram
WhatsApp

 

ಸುದ್ದಿಒನ್ : ಬ್ರಿಟನ್‌ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ರಿಷಿ ಸುನಕ್ ನೇತೃತ್ವದ ಕನ್ಸರ್ವೇಟಿವ್ ಪಕ್ಷವು ಹೀನಾಯ ಸೋಲನ್ನು ಅನುಭವಿಸಿತು. ವಿರೋಧ ಪಕ್ಷ ಲೇಬರ್ ಪಾರ್ಟಿಗೆ ಜನರು ಅಧಿಕಾರ ನೀಡಿದ್ದಾರೆ. ಯುಕೆ ಸಂಸತ್ತಿನ ಒಟ್ಟು 650 ಸ್ಥಾನಗಳಲ್ಲಿ, ಇದುವರೆಗೆ ಬಂದಿರುವ ಫಲಿತಾಂಶಗಳ ಪ್ರಕಾರ, ಲೇಬರ್ ಪಕ್ಷವು 410 ಸ್ಥಾನಗಳನ್ನು ಗೆದ್ದಿದೆ ಮತ್ತು ಕನ್ಸರ್ವೇಟಿವ್ ಪಕ್ಷವು ಕೇವಲ 132 ಸ್ಥಾನಗಳನ್ನು ಗೆದ್ದಿದೆ. ಸೋಲನ್ನು ಒಪ್ಪಿಕೊಂಡ ಬ್ರಿಟನ್ ಪ್ರಧಾನಿ ರಿಷಿ ಸುನಕ್, ಜನರ ತೀರ್ಪನ್ನು ಒಪ್ಪಿಕೊಳ್ಳುವುದಾಗಿ ಘೋಷಿಸಿದರು. ತಮ್ಮ ಬೆಂಬಲಿಗರನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಸೋಲಿಗೆ ನೈತಿಕ ಹೊಣೆ ಹೊರುತ್ತೇನೆ ಎಂದಿದ್ದಾರೆ.

“ಇಂದು ಅಧಿಕಾರ ಶಾಂತಿಯುತವಾಗಿ ಪ್ರಜಾಸತ್ತಾತ್ಮಕವಾಗಿ ಎಲ್ಲಾ ಕಡೆ ಸದ್ಭಾವನೆಯೊಂದಿಗೆ ವಿನಿಮಯವಾಗುತ್ತಿದೆ.  ಅದು ನಮ್ಮ ದೇಶದ ಸ್ಥಿರತೆ. ಇದು ಭವಿಷ್ಯದಲ್ಲಿ ನಮಗೆಲ್ಲರಿಗೂ ವಿಶ್ವಾಸವನ್ನು ನೀಡುವ ವಿಷಯವಾಗಿದೆ. ನನ್ನನ್ನು ಕ್ಷಮಿಸಿ, ಈ ಸೋಲಿಗೆ ನಾನೇ ಜವಾಬ್ದಾರನಾಗಿರುತ್ತೇನೆ ಎಂದು ಅವರು ಹೇಳಿದರು.

ಬ್ರಿಟನ್‌ನ ಮುಂದಿನ ಪ್ರಧಾನಿಯಾಗಿ ಲೇಬರ್ ಪಕ್ಷದ ನಾಯಕ ಕೀರ್ ಸ್ಟಾರ್‌ಮೇರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಫಲಿತಾಂಶದ ಕುರಿತು ಮಾತನಾಡಿದ ಅವರು, ‘ಇಡೀ ದೇಶ ಬದಲಾವಣೆಗೆ ಸಿದ್ಧವಾಗಿದೆ. ಬದಲಾವಣೆ ಇಲ್ಲಿಂದ ಪ್ರಾರಂಭವಾಗುತ್ತದೆ’ ಎಂದರು. ಈ ಬದಲಾವಣೆ ದಶಕದ ಅವಧಿಯ ಜೀವನ ವೆಚ್ಚದ ಬಿಕ್ಕಟ್ಟನ್ನು ನಿವಾರಿಸುತ್ತದೆ ಎಂದು ಅವರು ಭರವಸೆ ನೀಡಿದರು. ಆದರೆ, ಇವುಗಳಿಂದ ಹೊರಬರುವುದು ಅವರು ಭರವಸೆ ನೀಡಿದಷ್ಟು ಸುಲಭವಲ್ಲ.

ಬ್ರಿಟನ್‌ನಲ್ಲಿ ಕಳೆದ 14 ವರ್ಷಗಳಿಂದ ಆಡಳಿತ ನಡೆಸುತ್ತಿದ್ದ ಕನ್ಸರ್ವೇಟಿವ್ ಪಕ್ಷ ಅಂತ್ಯಗೊಂಡಿದೆ. ಕಳೆದ ಚುನಾವಣೆಯಲ್ಲಿ 348 ಸ್ಥಾನ ಗಳಿಸಿದ್ದ ಪಕ್ಷ ಈ ಬಾರಿ 100ಕ್ಕಿಂತ ಕಡಿಮೆ ಸ್ಥಾನಕ್ಕೆ ಸೀಮಿತವಾಗಿದೆ. 2016 ರಿಂದ, ಐವರು ಪ್ರಧಾನಿಗಳ ಬದಲಾವಣೆ ಮತ್ತು ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಉಂಟಾಗಿತ್ತು. ಇದರಿಂದಾಗಿ ಜನರು ತುಂಬಾ ಬೇಸತ್ತಿದ್ದರು. ಇದು ಈ  ಚುನಾವಣೆಯಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ಅಲ್ಲದೆ, ಆರು ತಿಂಗಳು ಅಧಿಕಾರಾವಧಿ ಇರುವಾಗಲೇ ಚುನಾವಣೆಗೆ ಹೋಗುವುದು ಕೂಡ ಆತುರದ ನಡೆ. ರಿಷಿ ಸುನಕ್ ಅವರ ನಿರ್ಧಾರಕ್ಕೆ ತಮ್ಮದೇ ಪಕ್ಷದ ನಾಯಕರು ಕೂಡ ಬೇಸರ ವ್ಯಕ್ತಪಡಿಸಿದ್ದಾರೆ.

ಅದೇ ಸಮಯದಲ್ಲಿ, ಸಮೀಕ್ಷೆಯಲ್ಲಿ ಕನ್ಸರ್ವೇಟಿವ್ ಪಕ್ಷವು 20 ಅಂಕಗಳಿಂದ ಹಿಂದುಳಿದಿತ್ತು ಎನ್ನುವುದು ಗಮನಾರ್ಹ. ದೇಶವನ್ನು ಆರ್ಥಿಕವಾಗಿ ಸದೃಢಗೊಳಿಸುತ್ತೇವೆ, ಸುಧಾರಣೆಗಳಿಂದ ಬಿಕ್ಕಟ್ಟಿನಿಂದ ಪಾರು ಮಾಡುತ್ತೇವೆ ಎಂದು ಪ್ರಧಾನಿ ಗದ್ದುಗೆ ಏರಿದ ರಿಷಿ ಸುನಕ್ ಅವರು ನೀಡಿದ ಭರವಸೆ ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಎರಡು ವರ್ಷಗಳ ಹಿಂದೆ ಅವರು ಅಧಿಕಾರ ಸ್ವೀಕರಿಸಿದಾಗಿನಿಂದ ಇಂದಿನವರೆಗೂ ದೇಶದ ಪರಿಸ್ಥಿತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರ್ವಜನಿಕರು ಭಾವಿಸಿದ್ದರು. ಇದರ ಜೊತೆಯಲ್ಲಿ ಅವರ ಪತ್ನಿ ಅಕ್ಷರಮೂರ್ತಿಯ ಸಂಪತ್ತು ಗಳಿಕೆಯ ಮೇಲಿನ ಆರೋಪಗಳು ಸುನಕ್‌ಗೆ ಅವರಿಗೆ ಸಮಸ್ಯೆಯಾದವು. ಈ ವಿಚಾರವಾಗಿ ವಿರೋಧ ಪಕ್ಷಗಳು ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಜೀರ್ಣ, ಮಲಬದ್ಧತೆ ಸಮಸ್ಯೆನ್ನು ಎಂದಿಗೂ ನಿರ್ಲಕ್ಷಿಸಬೇಡಿ : ಇದು ಹೃದಯಕ್ಕೆ ತೊಂದರೆ

ನಮ್ಮ ದೇಹದಲ್ಲಿ ಸಣ್ಣ ಪುಟ್ಟ ಸಮಸ್ಯೆಯಾದರೂ ಕೆಲವೊಂದು ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ. ಸುಮಾರು ಜನಕ್ಕೆ ಅಜೀರ್ಣ ಹಾಗೂ ಮಲಬದ್ಧತೆಯ ಸಮಸ್ಯೆ ಕಾಡುತ್ತಿರುತ್ತದೆ. ಇದು ಕಾಮನ್ ತಾನೇ ಎಂದು ನಿರ್ಲಕ್ಷ್ಯ ಮಾಡಿದರೆ ಅದರಿಂದ ಮುಂದೆ ಹೃದಯಕ್ಕೆ

ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ

ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ: ಈ ರಾಶಿಯವರಿಗೆ ಒಳ್ಳೆಯ ಸಂಬಂಧ ಮದುವೆಗೆ ಒಲೆಯಲಿದೆ ಶುಕ್ರವಾರರಾಶಿ ಭವಿಷ್ಯ -ನವೆಂಬರ್-22,2024 ಸೂರ್ಯೋದಯ: 06:29, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080

ಗೋಲ್ಡ್ ರೇಟ್ ಇಂದು ಕೂಡ ಹೆಚ್ಚಳ : ಗ್ರಾಂಗೆ ಎಷ್ಟು ಏರಿಕೆ ಆಯ್ತು..?

ಬೆಂಗಳೂರು: ಚಿನ್ನ ಬೆಳ್ಳಿಯ ಬೆಲೆಯಲ್ಲಿ ಹಾವು ಏಣಿಯ ಆಟ ಕೆಲ ದಿನದಿಂದ ಕಾಣಿಸ್ತಾ ಇದೆ. ಹಾವು ಮೇಲೇರಿದಂತೆ ಚಿನ್ನದ ಬೆಲೆ ಸರಸರನೆ ಏರುತ್ತಲೆ ಇದೆ. ಇಂದು ಕೂಡ ಇಳಿಕೆಯಾಗದೆ ಏರಿಕೆಯತ್ತಲೇ ಮುಖ ಮಾಡಿದೆ. ಹಾಗಾದ್ರೆ

error: Content is protected !!