Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಕ್ಫ್ ಬೋರ್ಡ್ ವಿವಾದ : ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ..!

Facebook
Twitter
Telegram
WhatsApp

ಬೆಂಗಳೂರು: ವಕ್ಫ್ ವಿವಾದ ರಾಜ್ಯದಲ್ಲಿ ತಣ್ಣಗಾಗುವಂತೆ ಕಾಣಿಸುತ್ತಿಲ್ಲ. ರೈತರಿಗೆ ಕೊಟ್ಟ ನೋಟೀಸ್ ವಾಪಾಸ್ ತೆಗೆದುಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ನಾಯಕರು ಪ್ರತಿಭಟನೆಗೆ ಸಿದ್ಧರಾಗಿದ್ದಾರೆ. ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಯಲಿದೆ. ಪ್ರತಿ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಲಿದ್ದು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಲಿದ್ದಾರೆ. ರೈತರ ಜಮೀನು, ಮಠ, ಗೋಮಾಳದಲ್ಲೂ ವಕ್ಫ್ ಹೆದರು ನಮೂದಾಗಿರುವುದನ್ನು ವಿರೋಧಿಸಿ, ಪ್ರತಿಭಟನೆ ಕೈಗೊಂಡಿದ್ದಾರೆ.

ಹಳೆ ಮೈಸೂರು ಭಾಗದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವ ವಹಿಸಿದ್ದರೆ, ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ನೇತೃತ್ವ ವಹಿಸಿದ್ದಾರೆ. ಈ ಮೂಲಕ ರೈತರಿಗೆ ಯಾವುದೇ ಅನ್ಯಾಯವಾಗಬಾರದು ಎಂದು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಹಲವು ಜಿಲ್ಲೆಗಳಲ್ಲಿ ರೈತರ ಜಮೀನುಗಳ ಪಹಣಿಯಲ್ಲಿ ಕರ್ನಾಟಕ ವಕ್ಫ್ ಎಂದು ಸೇರಿಸಲಾಗಿದೆ. ಈ ಸಂಬಂಧ ಈಗಾಗಲೇ ರೈತರಿಗೆ ನೋಟೀಸ್ ಕೂಡ ನೀಡಲಾಗಿತ್ತು. ರೈತರು ದೊಡ್ಡಮಟ್ಟಕ್ಕೆ ಪ್ರತಿಭಟನೆ ಕೂಡ ಮಾಡಿದರು. ರೈತರ ಪ್ರತಿಭಟನೆಗೆ ಮಣಿದ ಸರ್ಕಾರ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ವಕ್ಫ್ ಸಂಬಂಧ ರೈತರಿಗೆ ನೀಡಿರುವ ನೋಟೀಸ್ ವಾಪಾಸ್ ಪಡೆಯಲು ಸೂಚಿಸಿದ್ದು, ರೈತರ ಪಹಣಿಯಲ್ಲಿ ವಕ್ಫ್ ಹೆಸರು ಕೈ ಬಿಡುವಂತೆ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಆದರೆ ಈ ಸಂಬಂಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ಪಕ್ಷ ತೀರ್ಮಾನಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ | ಗೀತಾ ಭರಮಸಾಗರ ನಾಮಪತ್ರ ಸಲ್ಲಿಕೆ

    ಸುದ್ದಿಒನ್, ಚಿತ್ರದುರ್ಗ, ನವೆಂಬರ್. 05 : ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತಿನ ಚಿತ್ರದುರ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಗೀತಾ ಭರಮಸಾಗರ ಅವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾ

ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಪ್ಲಾನ್ : ಸಿ.ಎಂ.ಸಿದ್ದರಾಮಯ್ಯ

ಶಿಗ್ಗಾವಿ, ನವೆಂಬರ್. 05: ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಪ್ಲಾನ್ ಮಾಡಿದ್ದರು. ಅದಕ್ಕೇ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು.‌ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ

ಚಿತ್ರದುರ್ಗ APMC : ಮಂಗಳವಾರದ ಹತ್ತಿ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ನವೆಂಬರ್. 05 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ನವೆಂಬರ್. 05, ಮಂಗಳವಾರ) ಹತ್ತಿ ಮಾರುಕಟ್ಟೆ ಇದ್ದು, ಧಾರಣೆಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ. ಹತ್ತಿ

error: Content is protected !!