ಬೆಂಗಳೂರು, ಸೆಪ್ಟೆಂಬರ್ 13 : ತಮಿಳುನಾಡಿಗೆ 5000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಬೇಕೆಂದು ಸೂಚನೆ ಬಂದಿರುವ ಹಿನ್ನಲೆಯಲ್ಲಿ ಇಂದು ಸರ್ವಪಕ್ಷ ಸಭೆಯಲ್ಲಿ ಕರೆದು ಚರ್ಚಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿರು.
ಮುಖ್ಯಮಂತ್ರಿ Siddaramaiah ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾವೇರಿ ಜಲ ವಿವಾದ ಕುರಿತಂತೆ ಸರ್ವಪಕ್ಷಗಳ ತುರ್ತು ಸಭೆ ನಡೆಸಿ ಚರ್ಚಿಸಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ. ಜಿ. ಪರಮೇಶ್ವರ, ಹೆಚ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. pic.twitter.com/k68thyGYPn
— suddione-kannada News (@suddione) September 13, 2023
ಅವರು ಇಂದು ದಕ್ಷಿಣ ಭಾರತ ರಾಜ್ಯಗಳ ಡಿಜಿಪಿ ಸಮಾವೇಶದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ತಮಿಳುನಾಡಿಗೆ 5000 ಕ್ಯೂಸೆಕ್ಸ್ ಕಾವೇರಿ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣಾ ಪ್ರಾಧಿಕಾರದವರು ಸೂಚಿಸಿರುತ್ತಾರೆ. ಆದರೆ ಕಾವೇರಿಯಲ್ಲಿ ನೀರಿಲ್ಲ. ಕುಡಿಯುವ ನೀರು ಹಾಗೂ ಬೆಳೆಗಳಿಗೆ ನೀರು ಒದಗಿಸಬೇಕಿದೆ. ಇಂತಹ ಪರಿಸ್ಥಿತಿಯಲ್ಲಿ 5000 ಕ್ಯೂಸೆಕ್ಸ್ ನೀರನ್ನು 15 ದಿನ ಬಿಡಬೇಕೆಂದು ಸೂಚನೆ ನೀಡಿದ್ದಾರೆ.
ಕಾವೇರಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ಸಂಕಷ್ಟ ಸೂತ್ರವನ್ನು ಇನ್ನೂ ಸಿದ್ಧಪಡಿಸಿಲ್ಲ. ಆದ್ದರಿಂದ ಈ ಬಗ್ಗೆ ಚರ್ಚೆ ನಡೆಸಲು ಇಂದು ಸರ್ವಪಕ್ಷ ಸದಸ್ಯರ ವಿಶೇಷ ತುರ್ತು ಸಭೆಯನ್ನು ಕರೆಯಲಾಗಿದೆ ಎಂದು ತಿಳಿಸಿದರು.