ಚಿತ್ರದುರ್ಗ. ಜ.10: ರಾಜ್ಯ ಸರ್ಕಾರ ಯಶಸ್ವಿನಿ ಸಹಕಾರ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆಯನ್ನು 2023-24ನೇ ಸಾಲಿಗೆ ಅನುಷ್ಠಾನಗೊಳಿಸಿದೆ. ಜ.1 ರಿಂದ ನೊಂದಣಿ ಪ್ರಕ್ರಿಯೆ ಆರಂಭವಾಗಿದೆ.
ಸಹಕಾರ ಸಂಘಗಳಿಗೆ ಸದಸ್ಯರು ಗ್ರಾಮೀಣ ಪ್ರದೇಶದಲ್ಲಿ ರೂ.500 ಹಾಗೂ ನಗರ ಪ್ರದೇಶದಲ್ಲಿ ರೂ.1000 ನಿಗಧಿತ ವಂತಿಕೆ ನೀಡಿ ನೊಂದಾಯಿಸಿಕೊಳ್ಳಬಹುದು. ಎಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಸದಸ್ಯರುಗಳ ವಂತಿಗೆಯನ್ನು ಸರ್ಕಾರವೇ ಭರಿಸಲಿದೆ.
ಸದಸ್ಯರಿಗೆ ಜ.1 ರಿಂದಲೇ ಆರೋಗ್ಯ ರಕ್ಷಣಾ ಚಿಕಿತ್ಸೆ ಸೌಲಭ್ಯ ಲಭಿಸಲಿದೆ. ಸಹಕಾರಿ ಸಂಘಗಳ ಸದಸ್ಯರು ಈ ಯೋಜನೆ ಲಾಭ ಪಡೆದುಕೊಳ್ಳುವಂತೆ ಚಿತ್ರದುರ್ಗ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ.