Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 14 ಲಕ್ಷ ಮತದಾರರು : 80, 100 ವರ್ಷ ಮತ್ತು ಯುವ ಮತದಾರರ ಮಾಹಿತಿ ಇಲ್ಲಿದೆ..!

Facebook
Twitter
Telegram
WhatsApp

 

 

ಚಿತ್ರದುರ್ಗ, (ಅ.27) :  ಚುನಾವಣೆ ಆಯೋಗದ ನಿರ್ದೇಶನದಂತೆ, ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದ ವಿಧಾನಸಭಾವಾರು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪ್ರಸ್ತುತ ಜಿಲ್ಲೆಯಲ್ಲಿ 14,01,830 ಮತದಾರರಿದ್ದು, 1661 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಅರ್ಹರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಡಿ. 09 ರವರೆಗೂ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಹೇಳಿದರು.
ಈ ಕುರಿತು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 6,98,024 ಪುರುಷ ಮತದಾರರು, 7,03,728 ಮಹಿಳಾ ಮತದಾರರು ಹಾಗೂ 78 ಇತರೆ ಮತದಾರರು ಸೇರಿದಂತೆ ಒಟ್ಟು 14,01,830 ಮತದಾರರಿದ್ದಾರೆ. ಮತಗಟ್ಟೆಗಳ ಸಂಖ್ಯೆ 1648 ರಿಂದ 1661ಕ್ಕೆ ಹೆಚ್ಚಿಸಲಾಗಿದೆ.

ಯಾವುದೇ ಅರ್ಹ ಮತದಾರರು ಮತಪಟ್ಟಿಯಿಂದ ಹೊರಗೊಳಿಯಬಾರದು. ಈ ಉದ್ದೇಶದಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯಲ್ಲಿ ಅರ್ಹ ಯುವಕ ಯುವತಿಯರು, ಸಾಮಾಜಿಕವಾಗಿ ಹಿಂದುಳಿದವರು,  ಪರಿಶಿಷ್ಟ ಪಂಗಡ, ಅಲೆಮಾರಿಗಳು, ಲಿಂಗ ಪರಿವರ್ತಿತರು, ತೃತೀಯ ಲಿಂಗಿಗಳು, ದಮನಿತ ಮಹಿಳೆಯರು, ವಿಶೇಷ ಚೇತನರು, ಸಮಾಜದ ಮುಖ್ಯವಾಹಿನಿಯಿಂದ ಹೊರಗಿರುವವರನ್ನು ಪಟ್ಟಿಯಲ್ಲಿ ಸೇರಿಸಲು ವಿಶೇಷ ಆದ್ಯತೆ ನೀಡಲಾಗುವುದು.

ಈ ಕುರಿತು ಜಾಗೃತಿ ಮೂಡಿಸಲು ಪಾಠಶಾಲೆ/ಚುನಾವಣೆ ಜಾಗೃತಿ ಸಂಘ, ಮತದಾರರ ಸಾಕ್ಷರತಾ ಸಂಘ, ಸ್ವಯಂ ಸೇವಕರು, ಸದಸ್ಯರ ಮೂಲಕ ವ್ಯಾಪಕ ಪ್ರಚಾರ ಮಾಡಲಾಗುವುದು. ಇದರೊಂದಿಗೆ ಯುವ ಮತದಾರರನ್ನು ಸೆಳೆಯಲು ಫಲಕಗಳ ಪ್ರದರ್ಶನ, ಜಾಥಾ, ಸೈಕಲ್ ಹಾಗೂ ಬೈಕ್ ರ್ಯಾಲಿಗಳನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ತಿಳಿಸಿದರು.

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮ ಅ. 27 ರಿಂದ ಆರಂಭಗೊಂಡಿದ್ದು, ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಡಿ. 09 ಕೊನೆಯ ದಿನವಾಗಿದೆ.

ಸಲ್ಲಿಕೆಯಾಗುವ ಹಕ್ಕು ಮತ್ತು ಆಕ್ಷೇಪಣೆ ಅರ್ಜಿಗಳನ್ನು ಡಿ. 26 ರೊಳಗೆ ತೀರ್ಮಾನಿಸಲಾಗುವುದು.  2024 ರ ಜನವರಿ 05 ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಣೆಗೊಳ್ಳಲಿದೆ ಎಂದರು.  ಹೆಸರು ನೊಂದಣಿಗಾಗಿ ನವೆಂಬರ್ 18 ಹಾಗೂ 19, ಡಿಸೆಂಬರ್ 2 ಹಾಗೂ 3ನೇ ತಾರೀಖಿನಂದು ವಿಶೇಷ ಕಾರ್ಯಾಚರಣೆ ನಡೆಸಲಾಗುವುದು. ಈಗಾಗಲೇ ಜಿಲ್ಲೆಯಾದ್ಯಂತ ಜುಲೈ 21 ರಿಂದ ಆಗಸ್ಟ್ 21 ರವರೆಗೆ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆ ಸಮೀಕ್ಷೆ ಕಾರ್ಯವನ್ನು ಕೈಗೊಂಡಿದ್ದಾರೆ.

ಪ್ರಜಾಪ್ರತಿನಿಧಿ ಕಾಯ್ದೆ 1950ರ ಸೆಕ್ಷನ್ 14ಕ್ಕೆ ತಿದ್ದುಪಡಿ ತರಲಾಗಿದೆ. 18 ವರ್ಷ ತುಂಬುವ ಯುವ ಮತದಾರರು ವರ್ಷದ 1ನೇ ಜನವರಿ, 1ನೇ ಏಪ್ರಿಲ್, 1ನೇ ಜುಲೈ ಹಾಗೂ 1ನೇ ಅಕ್ಟೋಬರ್‍ಗೆ 18 ವರ್ಷ ಪೂರ್ಣಗೊಳ್ಳುವವರು ಮತದಾರರ ಪಟ್ಟಿಯಲ್ಲಿ ನೊಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೊಸದಾಗಿ ಹೆಸರು ಸೇರಿಸಲು ನಮೂನೆ-6, ಹೆಸರುಗಳನ್ನು ಕೈಬಿಡಲು ಅಥವಾ ಆಕ್ಷೇಪಣೆ ಸಲ್ಲಿಸಲು ನಮೂನೆ-7, ಮತದಾರ ಪಟ್ಟಿಯಲ್ಲಿ ತಿದ್ದುಪಡಿ, ವರ್ಗಾವಣೆ, ಎಪಿಕ್ ಕಾರ್ಡು ಬದಲಾವಣೆ ಹಾಗೂ ವಿಕಲಚೇತನ ಮತದಾರರನ್ನು ಗುರುತು ಮಾಡಲು ನಮೂನೆ-8 ಹಾಗೂ ಆಧಾರ್ ಜೋಡಣೆ ಮಾಡಲು ನಮೂನೆ-6ಬಿ ಗಳನ್ನು ತುಂಬಿ ಮತದಾನ ಕೇಂದ್ರ ಅಥವಾ ತಾಲ್ಲೂಕು ಕಚೇರಿ ಅಥವಾ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿಯೂ ಸಲ್ಲಿಸಬಹುದು.

ಮತದಾರರು ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡಿಸಬೇಕು, ಜಿಲ್ಲೆಯಲ್ಲಿ ಈಗಾಗಲೆ ಶೇ. 89 ರಷ್ಟು ಮತದಾರರು ಆಧಾರ್ ಜೋಡಣೆ ಮಾಡಿಸಿದ್ದಾರೆ.  ಅರ್ಜಿಗಳನ್ನು ಗಿಊಂ (ಗಿoಣeಡಿ heಟಠಿ ಟiಟಿe) ನಲ್ಲಿ ಆನ್‍ಲೈನ್ ಮೂಲಕವು ಸಲ್ಲಿಸಬಹುದು ಎಂದರು.

ಕರಡು ಮತದಾರರ ಪಟ್ಟಿಯನ್ನು ಮತಗಟ್ಟೆ ಕೇಂದ್ರ, ಗ್ರಾಮ ಪಂಚಾಯತಿ ಕಚೇರಿ, ನಗರ ಸಭೆ, ಪುರ ಸಭೆ, ಪಟ್ಟಣ ಪಂಚಾಯತಿ, ತಾಲ್ಲೂಕು ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರಿಗೆ ಪ್ರಚುರ ಪಡಿಸಲು ಪ್ರಕಟಿಸಲಾಗಿದೆ. ವೆಬ್ ಸೈಟ್  www.ceokarnataka.kar.nic.in    ಮತ್ತು    https://chitradurga.nic.in ನಲ್ಲಿಯೂ ಸಹ ಮತದಾರರ ಪಟ್ಟಿಯನ್ನು ಪರಿಶೀಲಿಸಬಹುದಾಗಿದೆ.

46,906 ಯುವ ಮತದಾರರ ನೊಂದಣಿ :
ಕಳೆದ ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಜಿಲೆಯಾದ್ಯಂತ 46,906 ಯುವ ಮತದಾರರ ನೊಂದಣಿ ಮಾಡಲಾಗಿದೆ. ಇದರಲ್ಲಿ 25,152 ಪುರುಷ, 21,751 ಮಹಿಳಾ ಹಾಗೂ 03- ಇತರೆ ಯುವ ಮತದಾರರನ್ನು ಸೇರ್ಪಡೆಗೊಳಿಸಲಾಗಿದ್ದು, ರಾಜ್ಯದಲ್ಲಿಯೇ ಚಿತ್ರದುರ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಯುವ ಮತದಾರರನ್ನು ಸೇರ್ಪಡೆ ಮಾಡಲಾಗಿದೆ. ಈ ಬಾರಿ ಯುವ ಮತದಾರರನ್ನು ನೊಂದಣಿ ಮಾಡುವ ಸಲುವಾಗಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯನ್ನು  ಸಹಾಯಕ ಮತಪಟ್ಟಿ ನೊಂದಣಿ ಅಧಿಕಾರಿಯನ್ನಾಗಿ (ಎಇಆರ್‍ಓ) ಆಗಿ ನೇಮಿಸಲಾಗಿದೆ. ಮುಖ್ಯವಾಗಿ ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ಮೂಲಕ ಯುವ ಮತದಾರರ ನೊಂದಣಿಗೆ ಆದ್ಯತೆ ನೀಡಲಾಗುವುದು.

ಜಿಲ್ಲೆಯಲ್ಲಿ 80 ವರ್ಷ ದಾಟಿದ 30,000 ಮತದಾರರು ಇದ್ದಾರೆ. ಇದರಲ್ಲಿ 100 ವರ್ಷ ದಾಟಿದ 86 ಮತದಾರರು ಇದ್ದು ಇವರನ್ನು ಸ್ವಾತಂತ್ರ್ಯದಿನಾಚರಣೆ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಮಾಹಿತಿ ನೀಡಿದರು.

ಮತಪಟ್ಟಿಯಲ್ಲಿ ಹೆಸರು ನೊಂದಾಯಿಸಲು ವಯಸ್ಸಿನ ಧೃಡೀಕರಣಕ್ಕಾಗಿ ಜನನ ಪ್ರಮಾಣ ಪತ್ರ, ಆಧಾರ್, ಕಾರ್ಡ್, ಪಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ಅಂಕಪಟ್ಟಿ, ಪಾಸ್ ಪೋರ್ಟ್ ದಾಖಲೆಗಳನ್ನು ನೀಡಬಹುದು.  ವಿಳಾಸದ ಧೃಡೀಕರಣಕ್ಕಾಗಿ ನೀರು, ವಿದ್ಯುತ್, ಗ್ಯಾಸ್ ಸಂಪರ್ಕ ಒಂದು ವರ್ಷದ ಬಿಲ್‍ಗಳು, ಆಧಾರ್ ಕಾರ್ಡು, ಬ್ಯಾಂಕ್ ಪಾಸ್ ಬುಕ್, ಪಾಸ್‍ಪೋರ್ಟ್, ಕಂದಾಯ ಇಲಾಖೆಯ ಭೂ ಮಾಲೀಕತ್ವದ ದಾಖಲೆ, ನೊಂದಾಯಿತ ಬಾಡಿಗೆ ಭೋಗ್ಯ ಹಾಗೂ ಕ್ರಯಪತ್ರದ ದಾಖಲೆಗಳನ್ನು ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಪರ್ಕ ಕೇಂದ್ರದ ಸಹಾಯವಾಣಿ ಸಂಖ್ಯೆ -08194-222176 ಅಥವಾ ಟೋಲ್ ಫ್ರೀ ಸಂಖ್ಯೆ 1950ಕ್ಕೆ ಕರೆ ಮಾಡಬಹುದು. ಹೊರ ರಾಜ್ಯದ ಮತದಾರರು ಇಲ್ಲಿನ ಮತಪಟ್ಟಿಗೆ ಸೇರ್ಪಡೆಗೊಳ್ಳಲು, ಮೂಲ ಮತದಾರರ ನೊಂದಣಿ ಇರುವೆಡೆ ನಮೂನೆ-8 ರಲ್ಲಿ ವರ್ಗಾವಣೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ವೇಳೆ ಜಿಲ್ಲೆಯ ಮತಪಟ್ಟಿಯಲ್ಲಿ ಸೇರ್ಪಡೆ ಮಾಡಲು ಅರ್ಜಿ ಆಂತರಿಕವಾಗಿ ಸೃಜನೆಗೊಳ್ಳುವುದು. ಇದರ ಆಧಾರದಲ್ಲಿ ಅಧಿಕಾರಿಗಳು ವಿಳಾಸಕ್ಕೆ ಭೇಟಿ ನೀಡಿ ಪರಿಶೀಲಿಸಿ ಇಲ್ಲಿನ ಮತಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವರು.

ನಂತರದಲ್ಲಿ ಮೂಲ ಮತಪಟ್ಟಿಯಲ್ಲಿ ಹೆಸರು ನಿಷ್ಕ್ರಮಣೆಗೊಳ್ಳುವುದು ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್

ಸತತ ಏರಿಕೆಯತ್ತ ಸಾಗುತ್ತಿದೆ ಚಿನ್ನದ ಬೆಲೆ : ಇಂದಿನ ದರ ಹೀಗಿದೆ..!

ಚಿನ್ನದ ಬೆಲೆ ಇಳಿಕೆಯಾಯ್ತು ಎಂದು ಖುಷಿ ಪಡುತ್ತಿರುವಾಗಲೇ ಇದೇನಿದು ಒಂದೇ ಸಮನೇ ಏರುತ್ತಲೇ ಇದೆ. ಅದರಲ್ಲೂ 70-80 ರೂಪಾಯಿ ಏರುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದ್ದು, 70 ರೂಪಾಯಿ ಗ್ರಾಂಗೆ ಜಾಸ್ತಿಯಾಗಿದೆ. ಈ

ಚಿತ್ರದುರ್ಗ | ಯೋಗೀಶ್ ಸಹ್ಯಾದ್ರಿ ಬಿಜೆಪಿ ಸೇರ್ಪಡೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 22 : ಉಪನ್ಯಾಸಕರು ಹಾಗೂ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿ, ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿಯವರು ಬಿಜೆಪಿ

error: Content is protected !!