Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರವಾಸೋದ್ಯಮ ಇಲಾಖೆ: ವಿವಿಧ ತರಬೇತಿಗೆ ಅರ್ಜಿ ಆಹ್ವಾನ

---Advertisement---

 

ಚಿತ್ರದುರ್ಗ ನ. 25 : ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪ್ರವಾಸೋದ್ಯಮ ಆತಿಥ್ಯ ಕ್ಷೇತ್ರದಲ್ಲಿ ಕೌಶಲಾಭಿವೃದ್ಧಿ ತರಬೇತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನಿಸಲಾಗಿದೆ.

10ನೇ ತರಗತಿ ಉತ್ತೀರ್ಣರಾದವರಿಗೆ ಆಹಾರ ಮತ್ತು ಪಾನೀಯಗಳ ವಿತರಣೆ-4 ತಿಂಗಳು ತರಬೇತಿ, 5ನೇ ತರಗತಿ ಉತ್ತೀರ್ಣರಾದವರಿಗೆ ಕೊಠಡಿ ನಿರ್ವಹಣೆ-4 ತಿಂಗಳ ತರಬೇತಿ, 8ನೇ ತರಗತಿ ಉತ್ತೀರ್ಣರಾದವರಿಗೆ ವಿವಿಧ ಆಹಾರ ತಯಾರಕರಿಗೆ 5 ತಿಂಗಳ ತರಬೇತಿ  ನೀಡಲಾಗುವುದು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಮೈಸೂರಿನ ಎಫ್.ಸಿ.ಐ (ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್) ಹಾಗೂ ಬೆಂಗಳೂರಿನ ಐಹೆಚ್‍ಎಂ (ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜಮೆಂಟ್) ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 20 ರಿಂದ 45 ವರ್ಷದೊಳಗಿರಬೇಕು. ತರಬೇತಿಯು ಡಿಸೆಂಬರ್  01 ರಂದು ಪ್ರಾರಂಭವಾಗುತ್ತಿರುವುದರಿಂದ ಅರ್ಜಿಯನ್ನು ನವೆಂಬರ್ 25 ರಿಂದ 29 ರವರೆಗೆ ಸಹಾಯಕ ನಿರ್ದೇಶಕರು ಕಚೇರಿ, ಪ್ರವಾಸೋದ್ಯಮ ಇಲಾಖೆ, ಕೋಟೆ ಮುಂಭಾಗ, ಚಿತ್ರದುರ್ಗ ಕಚೇರಿಯಿಂದ ಅರ್ಜಿಗಳನ್ನು ವಿತರಿಸಲಾಗುವುದು. ಸೇವಾ ಸಿಂಧೂ ವೆಬ್‍ಸೈಟ್ sevasindhu.karnataka.gov.in/sevasindhu/English  ನಲ್ಲಿಯೂ ಸಹ ಅರ್ಜಿಯನ್ನು ಸಲ್ಲಿಸಬಹುದು.

ತರಬೇತಿ ಪಡೆಯಲು ಆಸಕ್ತ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿ-ಪ್ರತಿಯಲ್ಲಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಕೋಟೆ ಮುಂಭಾಗ, ಚಿತ್ರದುರ್ಗ ಕಚೇರಿಗೆ ಸಲ್ಲಿಸಿ, ಮೂಲ  ದಾಖಲೆಗಳನ್ನು ಕಚೇರಿಯ ಸಮಯದಲ್ಲಿ (ರಜೆ ದಿನಗಳನ್ನು) ಹೊರತುಪಡಿಸಿ ಪರಿಶೀಲಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಚಿತ್ರದುರ್ಗ ರವರ ಕಚೇರಿ ಹಾಗೂ ದೂರವಾಣಿ ಸಂಖ್ಯೆ 08194-234466 ಕರೆ ಮಾಡುವಂತೆ ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...