Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಔಷಧೀಯ ಸಸ್ಯಗಳ ಸಂರಕ್ಷಣೆಗೆ 108 ಎಕರೆ ಸರ್ಕಾರಿ ಜಮೀನು ನೀಡಲು ಒತ್ತಾಯ: ಕೋಟೆಯ ನಾಡಿನಲ್ಲಿ ಪಾರಂಪರಿಕ ವೈದ್ಯರ ಧರಣಿ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 11 : ಔಷಧೀಯ ಸಸ್ಯಗಳನ್ನು ಬೆಳೆಸಿ ಪಾರಂಪರಿಕ ವೈದ್ಯ ಪದ್ದತಿಯನ್ನು ಜೀವಂತವಾಗಿಡುವ ಉದ್ದೇಶದಿಂದ 108 ಎಕರೆ ಸರ್ಕಾರಿ ಜಮೀನು ನೀಡುವಂತೆ ಅಖಿಲ
ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ ಹಾಗೂ ಸಂಘಗಳ ಒಕ್ಕೂಟ(ರಿ) ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

 

ಕರ್ನಾಟಕ ರಾಜ್ಯದಲ್ಲಿ ಅನೇಕ ತಲೆಮಾರುಗಳಿಂದ ಪಾರಂಪರಿಕ ವೈದ್ಯರುಗಳು ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿದ್ದು, ಔಷಧೀಯ ಸಸ್ಯಗಳ ಬಳಕೆ ಹಾಗೂ ಪ್ರಕೃತಿ ಚಿಕಿತ್ಸಾ ಪದ್ದತಿಗಳನ್ನು ಅನುಸರಿಸಿಕೊಂಡು ಬರುತ್ತಿದ್ದಾರೆ. ಗ್ರಾಮೀಣ ಭಾಗಗಳಲ್ಲಿ ಜನರಿಗೆ ಸುಲಭವಾಗಿ ಈ ಚಿಕಿತ್ಸೆ ನೀಡಲು ಸಹಕಾರಿಯಾಗಲಿದೆ. ಹಿರಿಯೂರು ತಾಲ್ಲೂಕಿನ
ಸಮೀಪ ಕಾಲುವೆಯ ಅಕ್ಕಪಕ್ಕದಲ್ಲಿ 750 ಎಕರೆ ಸರ್ಕಾರಿ ಜಾಗವಿದ್ದು, ನಮಗೆ ಅಗತ್ಯವಿರುವ 108 ಎಕರೆ ಜಮೀನು ನೀಡಿ ಪಾರಂಪರಿಕ ವೈದ್ಯಕೀಯ ಅಭಿವೃದ್ದಿ ಕೇಂದ್ರವನ್ನು ಸ್ಥಾಪಿಸಲು ನೆರವಾಗುವಂತೆ ಪಾರಂಪರಿಕ ವೈದ್ಯರುಗಳು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

 

ಅಳಿವಿನಂಚಿನಲ್ಲಿರುವ ಅಪರೂಪದ ಹಾಗೂ ಅಮೂಲ್ಯ ಔಷಧೀಯ ಸಸ್ಯಗಳು, ಗಿಡಮೂಲಿಕೆಗಳು, ನಾರು, ಬೇರುಗಳು, ಹಾಗೂ ವನಮೂಲಿಕೆಗಳ ಸಂರಕ್ಷಣೆ, ಅಭಿವೃದ್ದಿ ಮತ್ತು ಜೀವವೈವಿದ್ಯ ಉದ್ಯಾನ ನಿರ್ಮಾಣ. ಆಯುಷ್ ಪಾರಂಪರಿಕ ವೈದ್ಯಕೀಯ ಹಾಗೂ ನ್ಯಾಚುರೋಪಥಿ ಆಧಾರಿತ ಚಿಕಿತ್ಸಾ ಕೇಂದ್ರಗಳ ಸ್ಥಾಪನೆ.
ಪಾರಂಪರಿಕ ವೈದ್ಯರು, ವಿದ್ಯಾರ್ಥಿಗಳು ಹಾಗೂ ಸಂಶೋಧಕರಿಗಾಗಿ ತರಬೇತಿ, ಕೌಶಲ್ಯಾಭಿವೃದ್ದಿ ಮತ್ತು ಸಂಶೋಧನಾ ಸಂಸ್ಥೆ ಆರಂಭಿಸುವುದು. ಔಷಧೀಯ ಸಸ್ಯಗಳ ಬೆಳವಣಿಗೆ, ಸಂಸ್ಕರಣೆ, ಗುಣಮಟ್ಟ ಪರೀಕ್ಷೆ, ಔಷಧ ತಯಾರಿಕೆ ಹಾಗೂ ಮೌಲ್ಯವರ್ಧನೆಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವುದು ಒಳಗೊಂಡಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಪಾರಂಪರಿಕ ವೈದ್ಯರು ವಿನಂತಿಸಿದರು.

 

ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ ಹಾಗೂ ಸಂಘಗಳ ಒಕ್ಕೂಟದ ಅಧ್ಯಕ್ಷ ಶರಣಪ್ಪ ಬಳ್ಳಾರಿ, ಉಪಾಧ್ಯಕ್ಷರುಗಳಾದ ತಿಪ್ಪಣ್ಣಸಾಲಿಖಾನಿ ಹಾವೇರಿ, ಹೆಚ್.ಡಿ.ಪೂಜಾರ್, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್, ಕಾರ್ಯದರ್ಶಿ ಕುಮಾರಸ್ವಾಮಿ, ಖಜಾಂಚಿ ಡಿ.ಟಿ.ರವಿಕುಮಾರ್ ಸೇರಿದಂತೆ ನಾಡಿನ ನಾನಾ ಭಾಗಗಳ ಪಾರಂಪರಿಕ ವೈದ್ಯರುಗಳು ಪ್ರತಿಭಟನೆಯಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now