Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮದುವೆಯಾದ 18 ದಿನಕ್ಕೇ ದುರಂತ: ಶಿವಮೊಗ್ಗದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಹೃದಯಾಘಾತದಿಂದ ನಿಧನ!

---Advertisement---

ಸುದ್ದಿಒನ್,ಶಿವಮೊಗ್ಗ,ಮೇ.27: ಕರ್ತವ್ಯದ ಮೇಲಿದ್ದಾಗಲೇ ಯುವ ಪೊಲೀಸ್ ಸಿಬ್ಬಂದಿಯೊಬ್ಬರು ಸಡನ್ ಹಾರ್ಟ್ ಅಟ್ಯಾಕ್ ನಿಂದ ಕೊನೆಯುಸಿರೆಳೆದಿರುವ ಅತ್ಯಂತ ಕರುಣಾಜನಕ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದೆ. ಹೊಸ ಬಾಳಿಗೆ ಹೆಜ್ಜೆ ಇಟ್ಟ ಕೇವಲ ಹದಿನೆಂಟೇ ದಿನಗಳಲ್ಲಿ ಸಾವನ್ನಪ್ಪಿದ್ದಾರೆ.

ದುರಂತ ಸಾವಿಗೀಡಾದ ಆ ಪೊಲೀಸ್ ಕಾನ್ಸ್ ಟೇಬಲ್ ಅನ್ನು ಈರಣ್ಣ ಗುಡಾದಾರ್ (26) ಎಂದು ಗುರುತಿಸಲಾಗಿದೆ. ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನವರಾದ ಈರಣ್ಣ, ಕಳೆದ 7 ವರ್ಷಗಳಿಂದ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ಪಡೆಯ 8ನೇ ಬೆಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ದಿನಂಪ್ರತಿಯಂತೆ ಶಿವಮೊಗ್ಗದಲ್ಲಿ ಡ್ಯೂಟಿಯಲ್ಲಿದ್ದ ಈರಣ್ಣ ಅವರು ಹಠಾತ್ತಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅಲರ್ಟ್ ಆದ ಸಹೋದ್ಯೋಗಿಗಳು ಮತ್ತು ಸ್ನೇಹಿತರು ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ, ವಿಧಿಯ ಆಟ ಬೇರೆಯೇ ಆಗಿತ್ತು. ಆಸ್ಪತ್ರೆಯ ಹೊಸ್ತಿಲು ತುಳಿಯುವ ಮುನ್ನವೇ ದಾರಿ ಮಧ್ಯದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆಯಲ್ಲಿ ಅತ್ಯಂತ ಕರುಣಾಜನಕ ಸಂಗತಿಯೆಂದರೆ, ಮೃತ ಈರಣ್ಣ ಅವರಿಗೆ ಕೇವಲ 18 ದಿನಗಳ ಹಿಂದೆಯಷ್ಟೇ ಮದುವೆಯಾಗಿತ್ತು.

Join WhatsApp

Join Now

Join Telegram

Join Now