ಸುದ್ದಿಒನ್ : ದೇಶದಲ್ಲಿ ಮತ್ತೊಂದು ಭೀಕರ ರೈಲು ಅಪಘಾತ ನಡೆದಿದೆ. ಜಂತರಾ-ಕರ್ಮಠಂಡ್ ಮಾರ್ಗದ ಕಲ್ಗಾರಿಯಾ ಬಳಿ ಬುಧವಾರ ಸಂಜೆ ಅಪಘಾತ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
The train accident in #Jharkhand is very tragic. My thoughts are with the family of the bereaved. Praying for the swift recovery of the injured. 🙏#TrainAccident pic.twitter.com/syLxyQkbZc
— Parimal Nathwani (@mpparimal) February 28, 2024
ಈ ಭೀಕರ ಅಪಘಾತದಲ್ಲಿ 12 ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅವಘಡದಲ್ಲಿ ಮೃತಪಟ್ಟವರ ಮತ್ತು ಗಾಯಗೊಂಡವರ ಸಂಖ್ಯೆ ಮತ್ತಷ್ಟು ಹೆಚ್ಚಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.
Jharkhand | A train ran over the passengers at Kalajharia railway station in Jamtara. Some deaths have been reported. The exact number of deaths will be confirmed later. Medical teams and ambulances rushed to the spot: Deputy Commissioner, Jamtara
More details awaited.
— ANI (@ANI) February 28, 2024
ಕೆಲವರು ಹಳಿ ದಾಟುತ್ತಿದ್ದಾಗ ವೇಳೆ ಆಗಷ್ಟೇ ಬಂದ ಬಂಗ್ ಎಕ್ಸ್ ಪ್ರೆಸ್ ರೈಲು ಅವರ ಮೇಲೆ ಹರಿದಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ. ರೈಲು ಅಪಘಾತದ ಬಗ್ಗೆ ಮಾಹಿತಿ ತಿಳಿದ ತಕ್ಷಣ ರೈಲ್ವೆ ಅಧಿಕಾರಿಗಳು, ಸಿಬ್ಬಂದಿ, ವೈದ್ಯಕೀಯ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದರು.
ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆಂಬ್ಯುಲೆನ್ಸ್‌ಗಳು ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ದಿವೆ. ತೀವ್ರವಾಗಿ ಗಂಭೀರವಾಗಿ ಗಾಯಗೊಂಡವರನ್ನು ಉತ್ತಮ ಚಿಕಿತ್ಸೆಗಾಗಿ ದೊಡ್ಡ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ.
ಸಂಜೆ ಅವಘಡ ಸಂಭವಿಸಿದ್ದು, ರಕ್ಷಣಾ ತಂಡಗಳು ಅಲ್ಲಿಗೆ ಹೋದಾಗ ಕತ್ತಲಾಗಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಇದರಿಂದಾಗಿ ಮೃತದೇಹಗಳು ಮತ್ತು ಗಾಯಾಳುಗಳನ್ನು ಹೊರತೆಗೆಯಲು ಸಮಯ ಹಿಡಿಯುತ್ತದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.